ಬೆಂಗಳೂರು: ಇನ್ಫೋಸಿಸ್ ಫೌಂಡೇಷನ್ ಸಂಸ್ಥೆಯು ಜೀರ್ಣೋದ್ಧಾರ ಮಾಡಿದ್ದ ಐತಿಹಾಸಿಕ ವಸಂತಪುರ ಕಲ್ಯಾಣಿಯನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉದ್ಘಾಟನೆ ಮಾಡಿದ್ದಾರೆ.
ಉತ್ತರಹಳ್ಳಿಯ ವಸಂತಪುರದಲ್ಲಿರುವ ಐತಿಹಾಸಿಕ ಕಲ್ಯಾಣಿಯನ್ನು ಇನ್ಫೋಸಿಸ್ ಫೌಂಡೇಶನ್ ಸಂಸ್ಥಾಪಕರಾದ ಶ್ರೀಮತಿ ಸುಧಾಮೂರ್ತಿಯವರ ಸಹಾಯ ಹಸ್ತದಿಂದ ಅಭಿವೃದ್ಧಿ ಪಡಿಸಲಾಗಿತ್ತು. ಈ ಐತಿಹಾಸಿಕ ಕಲ್ಯಾಣಿಗೆ ಮರುಜೀವ ನೀಡಲು ಇನ್ಫೋಸಿಸ್ ಫೌಂಡೇಷನ್ ಸುಮಾರು 8.5 ಕೋಟಿ ರೂಪಾಯಿ ವೆಚ್ಚ ಮಾಡಿತ್ತು.
Advertisement
ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಉತ್ತರಹಳ್ಳಿಯ ವಸಂತಪುರದಲ್ಲಿ ವೆಂಕಟೇಶ್ವರಸ್ವಾಮಿ ದೇವಸ್ಥಾನದ ಆವರಣದ ಕಲ್ಯಾಣಿಯನ್ನು ಉದ್ಘಾಟಿಸಿದರು.
ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥರಾದ ಸುಧಾ ಮೂರ್ತಿ, ಸಂಸದ ಡಿ ಕೆ ಸುರೇಶ್, ಶಾಸಕ ಕೃಷ್ಣಪ್ಪ ಉಪಸ್ಥಿತರಿದ್ದರು . pic.twitter.com/vyrwbUblIB
— CM of Karnataka (@CMofKarnataka) September 24, 2018
Advertisement
ಸಂಸ್ಥೆಯು ಜೀರ್ಣೋದ್ಧಾರ ಮಾಡಿದ ಕಲ್ಯಾಣಿಯನ್ನು ಸೋಮವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಉದ್ಘಾಟನೆ ಮಾಡಿದ್ದಾರೆ. ಈ ಸಮಾರಂಭದಲ್ಲಿ ಸಂಸದ ಡಿ.ಕೆ.ಸುರೇಶ್, ಶಾಸಕ ಎಂ.ಕೃಷ್ಣಪ್ಪ, ಡಿಸಿ ಶೈಲಜಾ ಸೇರಿದಂತೆ ಸುಧಾಮೂರ್ತಿಯವರು ಪಾಲ್ಗೊಂಡಿದ್ದರು.
Advertisement
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv