ಚಿಕ್ಕಬಳ್ಳಾಪುರ: ಸಮಾಜಸೇವೆಯಲ್ಲಿ ಸದಾ ಮುಂದಿರುವ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿಯವರು ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಪ್ರವಾಸಿಗರ ಕಾಲು ದಾರಿ ಹಾಗೂ ತಡೆಗೋಡೆಗಳ ಕಾಮಾಗಾರಿಗಳನ್ನು ಲೋಕಾರ್ಪಣೆ ಮಾಡಿದ್ದಾರೆ.
ಸುಧಾಮೂರ್ತಿಯವರು ತಮ್ಮ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಅಭಿವೃದ್ಧಿ ಕಾರ್ಯಕೈಗೊಂಡಿದ್ದರು. ಸುಮಾರು 70 ರಿಂದ 60 ಲಕ್ಷ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಕಾಲುದಾರಿಗಳು ಹಾಗೂ ತಡೆಗೋಡೆಯ ನವೀಕರಣ ಸೇರಿದಂತೆ ಇತರೆ ಕಾಮಗಾರಿಗಳನ್ನು ಇಂದು ಲೋಕಾರ್ಪಣೆ ಮಾಡಿದ್ದಾರೆ. ಸುಧಾಮೂರ್ತಿಯವರಿಗೆ ತೋಟಗಾರಿಕಾ ಸಚಿವ ಎಂ.ಸಿ.ಮನಗೂಳಿ ಹಾಗೂ ಅರಣ್ಯ ಸಚಿವ ಶಂಕರ್ ಸಾಥ್ ನೀಡಿದ್ದರು.
Advertisement
Advertisement
ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಹಿಂದೆ ನಾನು ನಂದಿಗಿರಿಧಾಮಕ್ಕೆ ಭೇಟಿ ನೀಡಿದ್ದೇ. ಈ ವೇಳೆ ನಂದಿಗಿರಿಧಾಮದ ವಾಕಿಂಗ್ ಫುಟ್‍ಪಾತ್ ನ ಸ್ಥಿತಿ ನೋಡಿ ಬೇಸರವಾಗಿತ್ತು. ಅಲ್ಲದೇ ನಮ್ಮ ಫೌಂಡೇಷನ್ ವತಿಯಿಂದಲೇ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ನಿರ್ಧಾರ ಮಾಡಿದ್ದೆ. ಈಗ 70 ರಿಂದ 80 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಲು ದಾರಿ ಹಾಗೂ ತಡೆಗೋಡೆಗಳ ನವೀಕರಣ ಕಾಮಗಾರಿಗಳನ್ನು ಮಾಡಲಾಗಿದೆ ಎಂದು ಹೇಳಿದರು.
Advertisement
ಬೆಂಗಳೂರಿಗೆ ಹತ್ತಿರವಿರುವ ಈ ನಂದಿಗಿರಿಧಾಮ ಊಟಿ ಎಂದೇ ಪ್ರಖ್ಯಾತಿ ಪಡೆದಿದೆ. ಹೀಗಾಗಿ ನಾನು ಬಹಳಷ್ಟು ಬಾರಿ ಇಲ್ಲಿಗೆ ಭೇಟಿ ನೀಡಿದ್ದೇನೆ. ವಿಕೇಂಡ್‍ನಲ್ಲಿ ಇಲ್ಲಿ ಕಾಲಿಡೋಕೆ ಜಾಗ ಇರಲ್ಲ. ಹೀಗಾಗಿ ಸರ್ಕಾರ ಸುತ್ತಮುತ್ತಲೂ ಇರುವ ಇತರೆ ಬೆಟ್ಟಗಳನ್ನ ಇದೇ ರೀತಿ ಅಭಿವೃದ್ಧಿಪಡಿಸಿದರೆ ಎಷ್ಟು ಚೆನ್ನಾಗಿರುತ್ತದೆಂದು ತಮ್ಮ ಮನದಾಳದ ಮಾತನ್ನು ಹಂಚಿಕೊಂಡರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv