ನವದೆಹಲಿ: ಭಾರತದ (India) ಕೆಲಸದ ಸಂಸ್ಕೃತಿ ಬದಲಾಗಬೇಕು ಮತ್ತು ಜಾಗತಿಕ ಮಟ್ಟದಲ್ಲಿ ದೇಶವು ಪರಿಣಾಮಕಾರಿಯಾಗಿ ಸ್ಪರ್ಧಿಸಬೇಕಾದರೆ ಯುವಜನತೆ (Youngsters) ವಾರಕ್ಕೆ 70 ಗಂಟೆಗಳ ಕಾಲ ಕೆಲಸ (70-Hour Work Week) ಮಾಡಲು ಸಿದ್ಧರಾಗಿರಬೇಕು ಎಂದು ಇನ್ಫೋಸಿಸ್ (Infosys) ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ (Narayana Murthy) ಸಲಹೆ ನೀಡಿದ್ದಾರೆ.
ಇನ್ಫೋಸಿಸ್‌ನ ಮಾಜಿ ಸಿಎಫ್‌ಒ ಮೋಹನ್‌ದಾಸ್ ಪೈ ಅವರ ಜೊತೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾಶ್ಚಿಮಾತ್ಯರಿಂದ ಅನಪೇಕ್ಷಿತ ಹವ್ಯಾಸಗಳನ್ನು ನಾವು ಕಲಿಯಬಾರದು. ಭಾರತ ನನ್ನ ದೇಶ, ಇದಕ್ಕಾಗಿ ನಾನು ವಾರಕ್ಕೆ 70 ಗಂಟೆಗಳ ಕಾಲ ದುಡಿಯುತ್ತೇನೆ ಎಂಬ ಮನಃಸ್ಥಿತಿಯನ್ನು ಬೆಳೆಸಿಕೊಳ್ಳಬೇಕು ಎ೦ದು ಯುವಜನತೆಯಲ್ಲಿ ಮನವಿ ಮಾಡಿದರು.
Advertisement
Totally agree with Mr Murthy’s views. It’s not our moment to work less and entertain ourselves. Rather it’s our moment to go all in and build in 1 generation what other countries have built over many generations! https://t.co/KsXQbjAhSM
— Bhavish Aggarwal (@bhash) October 26, 2023
Advertisement
ಎರಡನೇ ಮಹಾಯುದ್ಧದ ಬಳಿಕ ಜರ್ಮನಿ (Germany) ಹಾಗೂ ಜಪಾನ್ (Japan) ದೇಶ ಅಭಿವೃದ್ಧಿಯಾಗಿದ್ದನ್ನು ಉಲ್ಲೇಖಿಸಿದ ಅವರು, ಎರಡನೇ ಮಹಾಯುದ್ಧದ ಬಳಿಕ ಪ್ರತಿಯೊಬ್ಬ ಜರ್ಮನ್ ಪ್ರಜೆ ಕೆಲ ವರ್ಷಗಳವರೆಗೆ ಹೆಚ್ಚುವರಿ ಅವಧಿ ದುಡಿಯುತ್ತಿದ್ದರು ಎಂದು ತಿಳಿಸಿದರು. ಇದನ್ನೂ ಓದಿ: ಯುಪಿಎ ಅವಧಿಯಲ್ಲಿ ಆರ್ಥಿಕ ಚಟುವಟಿಕೆ ಸ್ಥಗಿತ – ಇನ್ಫಿ ನಾರಾಯಣ ಮೂರ್ತಿ
Advertisement
Today Mr Narayana Murthy gave anti-Linkedin advice by asking the Youth of our country to work: 70 hours/week!
(That's a whopping 10 hours/day with 0 days off!)
Some people are defending this by saying: that if our Prime Minister can work 24*7, then why can't the Youth of our… pic.twitter.com/g4fXpTazZe
— Akshat Shrivastava (@Akshat_World) October 26, 2023
Advertisement
ಭಾರತದ ಕೆಲಸದ ಉತ್ಪಾದಕತೆಯು ವಿಶ್ವದಲ್ಲೇ ಅತ್ಯಂತ ಕಡಿಮೆಯಾಗಿದೆ. ನಾವು ನಮ್ಮ ಕೆಲಸದ ಉತ್ಪಾದಕತೆಯನ್ನು ಹೆಚ್ಚಿಸದೇ ಇದ್ದರೆ ಮತ್ತು ಸರ್ಕಾರದಲ್ಲಿನ ಭ್ರಷ್ಟಾಚಾರವನ್ನು ಕಡಿಮೆ ಮಾಡದೇ ಇದ್ದರೆ ಪ್ರಚಂಡ ಸಾಧನೆ ಮಾಡಿದ ದೇಶಗಳೊಂದಿಗೆ ಸ್ಪರ್ಧಿಸಲು ನಮಗೆ ಸಾಧ್ಯವಾಗುವುದಿಲ್ಲ. ನಾವು ಅಂದುಕೊಂಡಿರುವ ಅವಧಿಯಲ್ಲಿ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.
ನಾವು ಶಿಸ್ತುಬದ್ಧವಾಗಿರಬೇಕು ಮತ್ತು ನಮ್ಮ ಕೆಲಸದ ಉತ್ಪಾದಕತೆಯನ್ನು ಸುಧಾರಿಸಬೇಕು. ನಾವು ಏನೂ ಮಾಡದೇ ಇದ್ದರೆ ಸರ್ಕಾರ ಏನು ಮಾಡಬಹುದು? ನಾವು ಅತ್ಯಂತ ಶಿಸ್ತಿನ ಮತ್ತು ಅತ್ಯಂತ ಕಷ್ಟಪಟ್ಟು ದುಡಿಯುವ ಜನರಾಗಿ ಬದಲಾಗಬೇಕು ನಾರಾಯಣ ಮೂರ್ತಿ ಹೇಳಿದರು. ಇದನ್ನೂ ಓದಿ: ರತನ್ ಟಾಟಾ ಕಾಲಿಗೆ ಬಿದ್ದು ನಮಸ್ಕರಿಸಿದ ನಾರಾಯಣ ಮೂರ್ತಿ
With this statement, Mr. Murthy is essentially pushing women out of the workplace.
Men are never going to share the load of housekeeping, caregiving and childrearing. With a 70 hour work week, women will have no choice but to drop out. https://t.co/U9IapSHDZv
— Natasha Ramarathnam (@nuts2406) October 26, 2023
ನಮ್ಮ ಜನಸಂಖ್ಯೆಯಲ್ಲಿ ಬಹುಪಾಲು ಯುವಜನರೇ ಇರುವುದರಿಂದ ನಮ್ಮ ದೇಶವನ್ನು ಕಟ್ಟಲು ಅವರು ರೂಪಾಂತರವಾಗುವುದು ಬಹಳ ಮುಖ್ಯ ಎಂದರು.
ನಾರಾಯಣ ಮೂರ್ತಿ ಅವರು ಯುವ ಜನತೆ ವಾರಕ್ಕೆ 70 ಗಂಟೆ ದುಡಿಯಬೇಕು ಎಂಬ ಹೇಳಿಕೆಯ ಬಗ್ಗೆ ಈಗ ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿದೆ.
Web Stories