ಬರ್ನ್: ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಇಂಗ್ಕಾ ಗ್ರೂಪ್ (ಐಕಿಯ) ಸಿಇಒ ಜೆಸ್ಪರ್ ಬ್ರಾಡಿನ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಕರ್ನಾಟಕದಲ್ಲಿ ಐಕಿಯ ಸ್ಟೋರ್ ತೆರೆಯುತ್ತಿರುವ ಹಿನ್ನೆಲೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಜೂನ್ ತಿಂಗಳಲ್ಲಿ ಬೆಂಗಳೂರಿನ ನಾಗಸಂದ್ರದಲ್ಲಿ ಐಕಿಯ ಸ್ಟೋರ್ ತೆರೆಯಲಿದ್ದು, ಇದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜೆಸ್ಪರ್ ಬ್ರಾಡಿನ್ ಅವರು ಸಿಎಂ ಬೊಮ್ಮಾಯಿ ಅವರನ್ನು ಆಹ್ವಾನಿಸಿದರು. ಇದನ್ನೂ ಓದಿ: ದಾವೋಸ್‌ನಲ್ಲೂ ಆಪರೇಷನ್ ಕಮಲದ ಸದ್ದು- ಸಿಎಂಗೆ ನೀವು ಸ್ಟೇಬಲ್ ಇದ್ದೀರಾ ಎಂದ ಮಿತ್ತಲ್
Advertisement
Advertisement
ಐಕಿಯದ ಭಾರತೀಯ ಕೇಂದ್ರ ಕಚೇರಿ ಬೆಂಗಳೂರಿನಲ್ಲಿದ್ದು ಪೀಠೋಪಕರಣಗಳ ತಯಾರಿಕೆಯ ಸಂದರ್ಭದಲ್ಲಿ ಬಿದಿರು ಮತ್ತಿತರ ಸ್ಥಳೀಯ ವಸ್ತುಗಳ ವ್ಯಾಪಕ ಬಳಕೆಯ ಕುರಿತು ಸಹ ಚರ್ಚಿಸಲಾಯಿತು. ಇದನ್ನೂ ಓದಿ: ಲುಲು ಗ್ರೂಪ್‍ನೊಂದಿಗೆ 2,000 ಕೋಟಿ ರೂ. ಹೂಡಿಕೆ ಒಪ್ಪಂದ – ಪ್ರತಿಷ್ಠಿತ ಕಂಪನಿಗಳೊಂದಿಗೆ ಬೊಮ್ಮಾಯಿ ಚರ್ಚೆ
Advertisement
Advertisement
ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ ಬಿಟಿ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.