15 ಗಂಟೆಗಳ ಕಾಲ ತನಿಖೆ ಅಮಾನವೀಯ ನಡವಳಿಕೆ ಎಂದ ಸುಪ್ರೀಂ – ಇಡಿ ಕಾರ್ಯವೈಖರಿಗೆ ತರಾಟೆ

Public TV
2 Min Read
Supreme Court

ಚಂಡೀಗಢ: ಕಳೆದ ವರ್ಷ ಹರಿಯಾಣದ ಕಾಂಗ್ರೆಸ್‌ ಮಾಜಿ ಶಾಸಕ ಸುರೇಂದರ್‌ ಪನ್ವಾರ್‌ (Surender Panwar) ಅವರನ್ನು ಸುಮಾರು 15 ಗಂಟೆಗಳ ಕಾಲ ನಿರಂತರ ವಿಚಾರಣೆ ನಡೆಸಿದ್ದ ಜಾರಿ ನಿರ್ದೇಶನಾಲಯದ ವರ್ತನೆಯನ್ನು ಅಮಾನವೀಯ ನಡವಳಿಕೆ ಎಂದು ಸುಪ್ರೀಂ ಕೋರ್ಟ್‌ (Supreme Court) ಟೀಕಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಅಗಸ್ಟಿನ್ ಜಾರ್ಜ್ ಮಾಸಿಹ್ ಅವರ ದ್ವಿಸದಸ್ಯ ಪೀಠವು, ಜಾರಿ ನಿರ್ದೇಶನಾಲಯವನ್ನು (Enforcement Directorate) ತೀವ್ರ ತರಾಟೆಗೆ ತೆಗೆದುಕೊಂಡಿತು. ಮಾಜಿ ಶಾಸಕರ ಬಂಧನವನ್ನು ʻಕಾನೂನು ಬಾಹಿರʼಎಂದಿದ್ದ ಹೈಕೋರ್ಟ್‌ ಆದೇಶವನ್ನು ಎತ್ತಿಹಿಡಿಯಿತು. ಇದನ್ನೂ ಓದಿ: ಆಪ್ ಸರ್ಕಾರದ ವಿರುದ್ಧ ಮೋದಿ ವಾಗ್ದಾಳಿ – ಎಎಪಿ ದೆಹಲಿ ನಗರಕ್ಕೆ ಆಪತ್ತು ಎಂದ ಪ್ರಧಾನಿ

congress flag

ಪ್ರಕರಣವು ಭಯೋತ್ಪಾದನಾ ಚಟುವಟಿಕೆಗೆ ಸಂಬಂಧಿಸಿದ್ದಾಗಿರಲಿಲ್ಲ. ಬದಲಾಗಿ ಮರಳು ಗಣಿಗಾರಿಕೆಗೆ ಸಂಬಂಧಿಸಿದ್ದು, ಇಂತಹ ಪ್ರಕರಣದಲ್ಲಿ ಜನರನ್ನು ನಡೆಸಿಕೊಳ್ಳುವ ರೀತಿ ಇದಲ್ಲ. ವ್ಯಕ್ತಿಯೊಬ್ಬರಿಗೆ ಹೇಳಿಕೆ ನೀಡುವಂತೆ ಬಲವಂತ ಮಾಡಿರುವುದು ಆಘಾತಕಾರಿಯಾಗಿದೆ ಎಂದು ಕೋರ್ಟ್‌ ಕಳವಳವ್ಯಕ್ತಪಡಿಸಿದೆ.

ಇ.ಡಿ ಜುಲೈನಲ್ಲಿ ಸುಮಾರು 15 ಗಂಟೆಗಳ ಕಾಲ ವಿಚಾರಣೆ ನಡೆಸಿದ ಬಳಿಕ ಮಧ್ಯರಾತ್ರಿ 1.40ಕ್ಕೆ ಪನ್ವಾರ್‌ರನ್ನು ಬಂಧಿಸಿತ್ತು. ಆದರೆ ಸೆಪ್ಟೆಂಬರ್‌ನಲ್ಲಿ ಹರಿಯಾಣ ಹೈಕೋರ್ಟ್ ಪನ್ವಾರ್ ಅವರ ಬಂಧನವನ್ನು ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಇಡಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಇದನ್ನೂ ಓದಿ: 10 ಲಕ್ಷದ ಸೂಟ್‌ ಧರಿಸುವವರಿಂದ ʻಶೀಷ ಮಹಲ್‌ʼ ಪ್ರಸ್ತಾಪ ಸೂಕ್ತವಲ್ಲ – ಮೋದಿಗೆ ಕೇಜ್ರಿವಾಲ್‌ ತಿರುಗೇಟು

ED enforcement directorate

ಇಡಿ ಪರ ವಕೀಲ ರೆಹೆಬ್ ಹುಸೇನ್ ಅವರು, ಹೈಕೋರ್ಟ್ ಪನ್ವಾರ್‌ರನ್ನು 14 ಗಂಟೆ 40 ನಿಮಿಷಗಳ ಕಾಲ ನಿರಂತರವಾಗಿ ಪ್ರಶ್ನಿಸಲಾಗಿತ್ತು ಎಂದು ತನ್ನ ಆದೇಶದಲ್ಲಿ ತಪ್ಪಾಗಿ ದಾಖಲಿಸಿದೆ. ವಿಚಾರಣೆ ಸಂದರ್ಭದಲ್ಲಿ ಅವರಿಗೆ ಭೋಜನ ವಿರಾಮ ನೀಡಲಾಗಿತ್ತು ಎಂದು ವಾದಿಸಿದರು. ಪ್ರಕ್ರಿಯೆಯನ್ನು ಸುಗಮಗೊಳಿಸಲು ಮತ್ತು ಜನರನ್ನು ನಸುಕಿನ ವೇಳೆಯಲ್ಲಿ ವಿಚಾರಣೆಗೆ ಒಳಪಡಿಸದಿರಲು ಇ.ಡಿ ಈಗಾಗಲೇ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಅವರು ಕೋರ್ಟ್‌ಗೆ ಮನವರಿಕೆ ಮಾಡಿದರು.

ಇಡಿ ಪರ ವಕೀಲರ ವಾದ ತಿರಸ್ಕರಿಸಿದ ಪೀಠವು, ವ್ಯಕ್ತಿಗೆ ವಿರಾಮವನ್ನು ನೀಡದೇ ಇಷ್ಟೊಂದು ದೀರ್ಘ ಅವಧಿಗೆ ವಿಚಾರಣೆ ನಡೆಸುವ ಮೂಲಕ ಚಿತ್ರಹಿಂಸೆ ನೀಡಲು ನಿಮ್ಮಿಂದ ಹೇಗೆ ಸಾಧ್ಯವಾಯಿತು? ಎಂದು ತನಿಖಾ ಸಂಸ್ಥೆಯನ್ನು ಪ್ರಶ್ನಿಸಿತು. ಇದನ್ನೂ ಓದಿ: ಐಫೋನ್‌ನಿಂದ ಭಾರತದ ಕಾನೂನು ಉಲ್ಲಂಘನೆ – ಆಪಲ್‌ಗೆ ಸಿಸಿಐ ಬಿಸಿ

ಜು.19ರಂದು ಬೆಳಿಗ್ಗೆ 11 ಗಂಟೆಗೆ ಇಡಿ ಕಚೇರಿಯಲ್ಲಿ ಹಾಜರಾಗಿದ್ದ ಪನ್ವಾರ್‌ರನ್ನು ಜು.21ರ ಮಧ್ಯರಾತ್ರಿ 1.40 ಗಂಟೆಯವರಗೆ ನಿರಂತರವಾಗಿ ವಿಚಾರಣೆ ನಡೆಸಿದ್ದು ತನಿಖಾ ಸಂಸ್ಥೆಯ ಅಮಾನವೀಯ ನಡೆಯಾಗಿದೆ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿತ್ತು. ಹಾಗೆಯೇ ಇಡಿ ತನ್ನ ತನಿಖಾ ವಿಧಾನವನ್ನು ಬದಲಿಸಿಕೊಳ್ಳುವ ಅಗತ್ಯವಿದೆ ಎಂದು ನಿರ್ದೇಶನ ನೀಡಿತ್ತು.

Share This Article