ಹೆಲ್ಸಿಂಕಿ/ನವದೆಹಲಿ: ಇದೇ ಜೂನ್ 13 ರಂದು ಫಿನ್‌ಲ್ಯಾಂಡ್‌ನಲ್ಲಿ ನಡೆಯಲಿರುವ ಪಾವೊ ನೂರ್ಮಿ ಗೇಮ್ಸ್-2023 (Paavo Nurmi Games 2023) ರಿಂದ ಭಾರತದ ಜಾವೆಲಿನ್ ಥ್ರೋ ಸ್ಪರ್ಧಿ ನೀರಜ್ ಚೋಪ್ರಾ (Neeraj Chopra) ಹೊರಗುಳಿಸಿದ್ದಾರೆ. ಅಲ್ಲದೆ, ಮಾಜಿ ವಿಶ್ವ ಚಾಂಪಿಯನ್ ಜರ್ಮನಿಯ ಜೊಹಾನ್ಸ್ ವೆಟರ್ (Johannes Vetter) ಕೂಡ ಈ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.
ನೀರಜ್ ಚೋಪ್ರಾ ಅವರು ಕಳೆದ ತಿಂಗಳು ತರಬೇತಿ ಸಮಯದಲ್ಲಿ ಅನುಭವಿಸಿದ ಸ್ನಾಯು ಸೆಳೆತದ ಸಮಸ್ಯೆಯಿಂದಾಗಿ ಜೂನ್ 4ರಂದು ನೆದರ್‌ಲೆಂಡ್‌ನಲ್ಲಿ ನಡೆದ FBK ಗೇಮ್ಸ್‌ನಿಂದಲೂ ಹೊರಗುಳಿದಿದ್ದರು. ಇದನ್ನೂ ಓದಿ: ಮತ್ತೊಂದು ಇತಿಹಾಸ – ಡೈಮಂಡ್ ಟ್ರೋಫಿ ಗೆದ್ದ ನೀರಜ್ ಚೋಪ್ರಾ
- Advertisement
ಪಾವೊ ನೂರ್ಮಿ ಗೇಮ್ಸ್ 1957 ರಿಂದ ಟುರ್ಕ್‌ನಲ್ಲಿ ನಡೆಯುವ ವಾರ್ಷಿಕ ಫಿನ್ನಿಷ್ ಅಥ್ಲೆಟಿಕ್ಸ್ ಕೂಟವಾಗಿದೆ. ಈ ಸ್ಪರ್ಧೆಯು ವಿಶ್ವ ಅಥ್ಲೆಟಿಕ್ಸ್ ಕಾಂಟಿನೆಂಟಲ್ ಟೂರ್ ಗೋಲ್ಡ್ ಕಾರ್ಯಕ್ರಮ ಎಂದೇ ಹೆಸರುವಾಸಿಯಾಗಿದೆ.
- Advertisement
ನೀರಜ್ ಚೋಪ್ರಾ ಕಳೆದ ವರ್ಷ ಫಿನ್‌ಲ್ಯಾಂಡ್ ಟೂರ್ನಿಯಲ್ಲಿ 89.30 ಮೀಟರ್ ಜಾವೆಲಿನ್ ಎಸೆಯುವ ಮೂಲಕ ಬೆಳ್ಳಿ ಪದಕ ಬಾಚಿಕೊಂಡಿದ್ದರು. ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾಗೆ ಪರಮ ವಿಶಿಷ್ಟ ಸೇವಾ ಪದಕ
ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ಭಾರತದ ಜಾವೆಲಿನ್ ಥ್ರೋ ಸ್ಪರ್ಧಿ ನೀರಜ್ ಚೋಪ್ರಾ ಅವರು ಲಾಸನ್‌ನಲ್ಲಿ ನಡೆದ ಡೈಮಂಡ್ ಲೀಗ್ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದರು. 89.04 ಮೀ. ಜಾವೆಲಿನ್ ಎಸೆಯುವ ಮೂಲಕ ಮೊದಲ ಸ್ಥಾನ ಪಡೆದು, ಈ ವಿಶಿಷ್ಟ ಸಾಧನೆ ಮಾಡಿದ ಭಾರತದ ಮೊದಲ ಅಥ್ಲೀಟ್ ಎಂಬ ಗೌರವಕ್ಕೆ ನೀರಜ್ ಪಾತ್ರರಾಗಿದ್ದರು.