ನವದೆಹಲಿ: ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ನಿಗೂಢ ಸಾವಿನ ಪ್ರಕರಣಕ್ಕೆ ಈಗ ಮೆಗಾ ಟ್ವಿಸ್ಟ್ ಸಿಕ್ಕಿದ್ದು, ಇದು ಸಹಜ ಸಾವಲ್ಲ. ಸಾವಿಗೂ ಮುನ್ನ ಅವರ ಮೇಲೆ ಹಲ್ಲೆ ನಡೆದಿರುವ ವಿಚಾರ ಈಗ ಪ್ರಕಟವಾಗಿದೆ.
ಅನುರಾಗ್ ತಿವಾರಿ ಹೃದಯಾಘಾತದಿಂದ ಮೃತಪಟ್ಟಿಲ್ಲ. ತಿವಾರಿ ಅವರ ದೇಹದ ಮೇಲೆ ಗಾಯದ ಗುರುತುಗಳು ಹಲ್ಲೆ ನಡೆದಿದೆ. ಭೀಕರವಾಗಿ ಅನುರಾಗ್ ತಿವಾರಿಯವರ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನುವ ಅಂಶ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಉಲ್ಲೇಖವಾಗಿದೆ ಎಂದು ಮಾಧ್ಯಮವೊಂದು ವರದಿ ಪ್ರಕಟಿಸಿದೆ.
Advertisement
ಅನುರಾಗ್ ತಿವಾರಿ ಅವರು ಸಹಜ ಸಾವಲ್ಲ. ಅವರನ್ನು ಹತ್ಯೆ ಮಾಡಲಾಗಿದೆ ಎಂದು ಕರ್ನಾಟಕ ಬಿಜೆಪಿ ಆರೋಪಿಸಿತ್ತು. ಈಗ ಮರಣೋತ್ತರ ಪರೀಕ್ಷೆಯ ವರದಿ ಬಳಿಕ ಕರ್ನಾಟಕದಲ್ಲಿ ನಡೆದಿದೆ ಎನ್ನಲಾದ ಹಗರಣದಿಂದಲೇ ತಿವಾರಿ ಸಾವನ್ನಪ್ಪಿದ್ರಾ ಎನ್ನುವ ಪ್ರಶ್ನೆ ಎದ್ದಿದೆ. ಉತ್ತರ ಪ್ರದೇಶ ಸರ್ಕಾರ ಈಗ ತಿವಾರಿ ಸಾವಿನ ತನಿಖೆಯನ್ನು ಸಿಬಿಐಗೆ ವಹಿಸಿದೆ.
Advertisement
ಏನಿದು ಪ್ರಕರಣ?
ಕರ್ನಾಟಕದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ(36) ಅವರ ಶವ ಉತ್ತರಪ್ರದೇಶದ ಹಜರತ್‍ಗಂಜ್‍ನಲ್ಲಿ ಮೇ 17ರಂದು ಪತ್ತೆಯಾಗಿತ್ತು. ಅನುರಾಗ್ ತಿವಾರಿ ಅವರ ಜನ್ಮದಿನದಂದೇ ಮೀರಾ ಬಾಯಿ ಗೆಸ್ಟ್ ಹೌಸ್ ಹೌಸ್ ಬಳಿ ಶವವಾಗಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು.
Advertisement
ಇದನ್ನೂ ಓದಿ: ಕರ್ನಾಟಕದ 2 ಸಾವಿರ ಕೋಟಿ ರೂ. ಹಗರಣಕ್ಕೆ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಬಲಿ?
Advertisement
Injuries on the body of Anurag Tiwari indicate that the death was not accidental,clearly result of an assault:Dr Dinesh Rao, Forensic Expert pic.twitter.com/UTeI8ylizN
— TIMES NOW (@TimesNow) May 24, 2017