ಭೂಪಾಲ್: ಲೈಂಗಿಕತೆಯ ಸಮ್ಮತಿ ವಯೋಮಿತಿಯನ್ನು ಈಗಿರುವ 18 ವರ್ಷದಿಂದ 16 ವರ್ಷಕ್ಕೆ ಇಳಿಸುವಂತೆ ಕೇಂದ್ರ ಸರ್ಕಾರಕ್ಕೆ (Central Government) ಮಧ್ಯಪ್ರದೇಶ ಹೈಕೋರ್ಟ್ (Madhya Pradesh High Court) ಹೇಳಿದೆ.
ಕ್ರಿಮಿನಲ್ ಕಾನೂನು (ತಿದ್ದುಪಡಿ) ಕಾಯ್ದೆ 2013ನ್ನು ಜಾರಿಗೊಳಿಸಿದ್ದರಿಂದಾಗಿ ಹುಡುಗಿಯರ ಲೈಂಗಿಕ ಕ್ರಿಯೆಗೆ ಸಮ್ಮತಿಸುವ ವಯಸ್ಸನ್ನು 16ರಿಂದ 18 ವರ್ಷಕ್ಕೆ ಹೆಚ್ಚಳ ಮಾಡಲಾಗಿದೆ. ಅಲ್ಲದೇ ಸಮ್ಮತಿಯ ಲೈಂಗಿಕತೆ ವಯೋಮಿತಿಯನ್ನು 18 ವರ್ಷಕ್ಕೆ ಹೆಚ್ಚಿಸಿರುವುದು ಹದಿಹರೆಯದ ಹುಡುಗರನ್ನು ಸಮಾಜದಲ್ಲಿ ಅಪರಾಧಿಗಳೆಂದು ಪರಿಗಣಿಸುವಂತೆ ಮಾಡಿದೆ. ಇದು ಸಮ್ಮತಿಯ ಲೈಂಗಿಕ ಸಂಬಂಧ ಬೆಳೆಸುವ ಹದಿಹರೆಯದ ಹುಡುಗರಿಗೆ ಅನ್ಯಾಯವಾಗಿ ಪರಿಣಮಿಸಿದೆ ಎಂದು ನ್ಯಾಯಮೂರ್ತಿ ದೀಪಕ್ ಕುಮಾರ್ ಅಗರ್‌ವಾಲ್ ಅವರಿದ್ದ ಪೀಠ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಮಗನನ್ನು ಹೊಡೆದು ಕೊಂದು ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ!
Advertisement
ಹದಿಹರೆಯದಲ್ಲಿ ಹುಡುಗ ಹುಡುಗಿಯರು ಸ್ನೇಹ ಬೆಳೆಸುತ್ತಾರೆ. ಬಳಿಕ ಆಕರ್ಷಣೆಯಿಂದಾಗಿ ದೈಹಿಕ ಸಂಬಂಧ ಬೆಳೆಸುತ್ತಾರೆ. ಆದರೆ ಇದರಿಂದಾಗಿ ಸಮಾಜದಲ್ಲಿ ಅವರನ್ನು ಅಪರಾಧಿಗಳು ಎಂದು ಪರಿಗಣಿಸಲಾಗುತ್ತಿದೆ. ಹೆಚ್ಚಿನ ಅಪರಾಧ ಪ್ರಕರಣಗಳಲ್ಲಿ ಸಂತ್ರಸ್ತೆ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರುತ್ತಾರೆ. ಇದರಿಂದಾಗಿ ಹದಿಹರೆಯದ ಹುಡುಗರಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ ಅನ್ಯಾಯ ಸರಿಪಡಿಸಲು ಹುಡುಗಿಯರ ವಯೋಮಿತಿಯನ್ನು 18ರಿಂದ 16 ವರ್ಷಕ್ಕೆ ಇಳಿಸುವ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು ಎಂದು ಕೋರ್ಟ್ ಸಲಹೆ ನೀಡಿದೆ.
Advertisement
Advertisement
ಇತ್ತೀಚಿನ ದಿನಗಳಲ್ಲಿ, ಸಾಮಾಜಿಕ ಮಾಧ್ಯಮದ ಅರಿವು ಮತ್ತು ಸುಲಭ ಲಭ್ಯವಾಗಿರುವ ಇಂಟರ್ನೆಟ್ ಸಂಪರ್ಕದಿಂದಾಗಿ 14 ವರ್ಷ ವಯಸ್ಸಿನ ಪ್ರತಿಯೊಬ್ಬ ಗಂಡು ಅಥವಾ ಹೆಣ್ಣು ಚಿಕ್ಕ ವಯಸ್ಸಿನಲ್ಲಿಯೇ ಪ್ರೌಢಾವಸ್ಥೆ ತಲುಪುತ್ತಿದ್ದಾರೆ. ಇದರಿಂದಾಗಿ ಹೆಣ್ಣು ಮತ್ತು ಗಂಡು ಮಕ್ಕಳು ಆಕರ್ಷಣೆಗೆ ಒಳಗಾಗುತ್ತಿದ್ದು ಈ ಆಕರ್ಷಣೆಗಳು ಸಮ್ಮತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಲು ಪ್ರೇರಣೆ ನೀಡುತ್ತಿವೆ. ಇದರಲ್ಲಿ ಯುವಕರು ಅಪರಾಧಿಗಳಲ್ಲ. ಅವರು ಹೆಣ್ಣಿನ ಸಂಪರ್ಕಕ್ಕೆ ಬಂದಾಗ ಮತ್ತು ದೈಹಿಕ ಸಂಬಂಧ ಬೆಳೆಸಿದಾಗ ಅದು ವಯಸ್ಸಿಗೆ ಸಂಬಂಧಿಸಿದ ವಿಚಾರವಾಗಿರುತ್ತದೆ ಎಂದು ನ್ಯಾಯಾಲಯ ಹೇಳಿದೆ.
Advertisement
ಪ್ರಕರಣವೊಂದರ ವಿಚಾರಣೆ ವೇಳೆ, ಸಂತ್ರಸ್ತೆ ರೀತಿಯ ಹದಿಹರೆಯದವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯು ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಹೊಂದಿದ್ದಾರೆ. ಮೇಲ್ನೋಟಕ್ಕೆ ಪ್ರಸುತ ಪ್ರಕರಣದಲ್ಲಿ ಆರೋಪಿಗೆ ದುಷ್ಕøತ್ಯ ಎಸಗುವ ಉದ್ದೇಶ ಇರಲಿಲ್ಲ ಎಂದು ಕೋರ್ಟ್ ಹೇಳಿದೆ.
23 ವರ್ಷದ ಯುವಕ ತನ್ನ ವಿರುದ್ಧ ಪೋಕ್ಸೊ (POCSO) ಹಾಗೂ ಮಾಹಿತಿ ಮತ್ತು ತಂತ್ರಜ್ಞಾನ (ಐಟಿ) ಕಾಯ್ದೆ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಅಲ್ಲದೇ ಎಫ್‍ಐಆರ್ ರದ್ದುಗೊಳಿಸುವುದು ಸೂಕ್ತ ಎಂದಿದೆ. ಇದನ್ನೂ ಓದಿ: ಈಗಿರುವ ಯಾರೂ ಬಿಜೆಪಿ ಕಟ್ಟಿಲ್ಲ: ಸ್ವಪಕ್ಷೀಯರ ವಿರುದ್ಧವೇ ಮತ್ತೆ ಗುಡುಗಿದ ರೇಣುಕಾಚಾರ್ಯ
Web Stories