ನವದೆಹಲಿ: ಸಂಕಷ್ಟ ಸೂತ್ರದಲ್ಲಿ ನೀರು ಹರಿಸಲು ಕಾವೇರಿ ನೀರು (Kaveri Water) ನಿಯಂತ್ರಣ ಸಮಿತಿ ಸೂಚಿಸಿದ್ದು, ಆದೇಶದಂತೆ ನೀರು ಹರಿಸದೇ ಕುಡಿಯುವ ನೀರಿನ ಹೆಸರಿನಲ್ಲಿ ಕರ್ನಾಟಕ ತಮಿಳುನಾಡು (Tamil Nadu) ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ತಮಿಳುನಾಡು ಜಲ ಸಂಪನ್ಮೂಲ ಸಚಿವ ದುರೈ ಮುರುಗನ್ (Durai Murugan) ಆರೋಪಿಸಿದ್ದಾರೆ.
ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶಕ್ಕೆ ಕರ್ನಾಟಕ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ ಅವರು, CWRC ಅಂಕಿ ಅಂಶಗಳ ಆಧರಿಸಿ ನೀರು ಬಿಡಲು ಸೂಚಿಸಿದೆ. ಅತ್ಯಂತ ಕಡಿಮೆ ನೀರು ಬಿಡಲು ಸೂಚಿಸಿದರೂ ನೀರು ಹರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೇಳಿದೆ. CWRC ಆದೇಶ ಪಾಲನೆ ಮಾಡದಿರುವುದು ಸುಪ್ರೀಂಕೋರ್ಟ್ (Supreme Court) ಆದೇಶದ ಉಲ್ಲಂಘನೆ ಎಂದಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಹಸ್ತಾಂತರವಾದ ಸ್ಪೇನ್‌ನ C-295 ಮಿಲಿಟರಿ ವಿಮಾನ – ಏನಿದರ ವಿಶೇಷ?
Advertisement
Advertisement
ಕಾವೇರಿ ಜಲಾನಯನದಿಂದ 6.75 ಟಿಎಂಸಿ ಮಾತ್ರ ಕುಡಿಯುವ ನೀರಿಗೆ ಬಳಕೆ ಮಾಡಬೇಕು. ಕುಡಿಯುವ ನೀರು ಹೊರತುಪಡಿಸಿ 27 ಟಿಎಂಸಿ ನೀರು ಉಳಿಯಲಿದೆ. ಆದರೆ ಕರ್ನಾಟಕ ಕುಡಿಯುವ ನೀರಿನ ಹೆಸರಿನಲ್ಲಿ ತಮಿಳುನಾಡು ರೈತರನ್ನು ವಂಚಿಸಿದೆ. ರೈತರ ಕಲ್ಯಾಣಕ್ಕೆ ಅಡ್ಡಿಯಾಗುವ ಇಂತಹ ನಿರ್ಧಾರಗಳನ್ನು ತಮಿಳುನಾಡು ಸರ್ಕಾರ ಒಪ್ಪುವುದಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಉದಯನಿಧಿ ಸ್ಟಾಲಿನ್ ವಿರುದ್ಧ ಮುಂಬೈನಲ್ಲಿ ಎಫ್‌ಐಆರ್ ದಾಖಲು
Advertisement
Web Stories