ಬೆಂಗಳೂರು: ಮಹಾನಗರಿ ಬೆಂಗಳೂರಲ್ಲಿ ಕುಡಿದ ಮತ್ತಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿ ಸರಣಿ ಅಪಘಾತ ಸಂಭವಿಸಿದೆ.
ಚಂದ್ರಲೇಔಟ್ ಮುಖ್ಯ ರಸ್ತೆಯಲ್ಲಿ ಅತೀ ವೇಗವಾಗಿ ಬಂದ ಇನೋವಾ ಕಾರು ರಸ್ತೆ ಬದಿಯಲಿದ್ದ ಒಂದು ಸ್ವಿಫ್ಟ್ ಕಾರು, ಎರಡು ಬೈಕ್, ಒಂದು ಆಟೋಗೆ ಡಿಕ್ಕಿ ಹೊಡೆದಿದೆ. ಜೊತೆಗೆ ಅಂಗಡಿಗೂ ಗುದ್ದಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು ಕಾಲುಗಳು ತುಂಡಾಗಿವೆ.
ಬ್ಯಾಟರಾಯನಪುರ ಸಂಚಾರಿ ಪೊಲೀಸರು ಇನೋವಾ ಕಾರ್ ಹಾಗೂ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.