– ನಾಲ್ವರಿಗೆ ಗಾಯ
ಕೋಲಾರ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ (Divider) ಇನ್ನೋವಾ ಕಾರು (Innova Car) ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.
ಕೋಲಾರ ಜಿಲ್ಲೆಯ ಮಾಲೂರು (Malur) ತಾಲೂಕು ಲಕ್ಷ್ಮೀ ಸಾಗರದ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇಯಲ್ಲಿ (Bengaluru-Chennai Expressway) ಈ ಘಟನೆ ನಡೆದಿದೆ. ಘಟನೆಯಲ್ಲಿ ಇನ್ನೋವಾದಲ್ಲಿದ್ದ ಒರ್ವ ಬಾಲಕ ಸಾವುನ್ನಪ್ಪಿದ್ದಾನೆ. ಬಂಗಾರಪೇಟೆ ಮೂಲದ ಮುಜಾಮಿಲ್ (9) ಮೃತ ಬಾಲಕ. ಇದನ್ನೂ ಓದಿ: ಹಂಪಿ ಆನೆ ಲಕ್ಷ್ಮಿ ಸ್ಥಳಾಂತರಕ್ಕೆ ಭಾರಿ ವಿರೋಧ – ಮಾವುತನ ಕುಟುಂಬದ ಕಣ್ಣೀರು, ಸ್ಥಳೀಯರಿಂದ ಪ್ರತಿಭಟನೆ!
ಇನ್ನು ಅಪಘಾತದಲ್ಲಿ ಇನ್ನೋವಾ ಕಾರಿನಲ್ಲಿದ್ದ ನಾಲ್ಕು ಜನರಿಗೆ ಗಾಯಗಳಾಗಿದೆ. ಗಾಯಗೊಂಡ ಸಯ್ಯದ್ ಉಲ್ಲಾ, ಸಯ್ಯದ್ ಅಫ್ರಿದ್, ಯಾಸ್ಮಿನ್ ಹಾಗೂ ಅಸೀಬಾ ಅವರನ್ನು ಕೋಲಾರದ ಎಸ್‌ಎನ್‌ಆರ್ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅತ್ಯಾಚಾರ ಅಪರಾಧಿ ರಾಮ್ ರಹೀಮ್‌ಗೆ 16ನೇ ಬಾರಿಗೆ 30 ದಿನ ಪೆರೋಲ್
