ಕೋಲಾರ: ಇನ್ನೋವಾ ಕಾರು (Innova Car) ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ (Bangarpet) ತಾಲೂಕಿನ ಕುಪ್ಪನಹಳ್ಳಿ ಬಳಿ ನಡೆದಿದೆ.
ಕೋಲಾರದ ನೂತನ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ (Bengaluru Chennai expressway) ಘಟನೆ ನಡೆದಿದೆ. ಕಾರಿನಲ್ಲಿದ್ದ ಮಹೇಶ (45), ಉದ್ವಿತ (2), ರತ್ನಮ್ಮ (60) ಹಾಗೂ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ. ಇದನ್ನೂ ಓದಿ: ಇಂದಿನಿಂದ ಅಧಿವೇಶನ – ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ ಮೈತ್ರಿ ಸಜ್ಜು
Advertisement
Advertisement
ಉಳಿದಂತೆ ಸುಶ್ಮಿತಾ, ವಿರುತ, ಸುಜಾತ, ಸುನಿಲ್ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿದ್ದ ನಾಲ್ವರನ್ನ ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಮೃತಪಟ್ಟವರು ಕೆಜಿಎಫ್ ತಾಲ್ಲೂಕು ಕಮ್ಮಸಂದ್ರ ಗ್ರಾಮದವರಾಗಿದ್ದು, ಬೆಂಗಳೂರಿನಿಂದ ವಾಪಸ್ ಗ್ರಾಮಕ್ಕೆ ತೆರಳುವ ವೇಳೆ ಘಟನೆ ನಡೆದಿದೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರಂತ ಸಂಭವಿಸಿದೆ. ಇದನ್ನೂ ಓದಿ: ಷೇರುಪೇಟೆ ವಂಚನೆ: ಸೆಬಿ ಮಾಜಿ ಅಧ್ಯಕ್ಷೆ ಬುಚ್ ಸೇರಿ 6 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶ