– ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅಲೋಕ್‌ಕುಮಾರ್
ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಯ ಆರೋಪಿಗಳಿಗೆ ಪಿಎಫ್‍ಐ ಮತ್ತು ಎಸ್‍ಡಿಪಿಐ ಜೊತೆ ಸಂಬಂಧ ಇರುವುದು ಗೊತ್ತಾಗಿದೆ. ಹತ್ಯೆಯ ಬಳಿಕ ಆರೋಪಿಗಳು ಕಾಸರಗೋಡು ಮಸೀದಿಗೆ ಹೋಗಿದ್ದರು ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
Advertisement
ಪ್ರಕರಣದ ಕುರಿತಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ಹತ್ಯೆಯಲ್ಲಿ ನೇರವಾಗಿ ಭಾಗಿಯಾಗಿ ಹಲ್ಲೆ ನಡೆಸಿದ ಮೂವರು ಆರೋಪಿಗಳನ್ನು ಇಂದು ಬೆಳಗ್ಗೆ ಮಂಗಳೂರಿನ ತಲಪಾಡಿ ಚೆಕ್ ಪೋಸ್ಟ್ ಬಳಿ ಬಂಧಿಸಲಾಗಿದೆ. ಸುಳ್ಯದ ಶಿಯಾಬ್ (33), ಅಂಕತಡ್ಕದ ರಿಯಾಝ್ (27) ಸುಳ್ಯದ ಎಲಿಮಲೆ ನಿವಾಸಿ ಬಶೀರ್‌ನನ್ನು ಬಂಧಿಸಿದ್ದೇವೆ. ಶಿಯಾಬ್ ಕ್ಯಾಂಪ್ಕೋ ಕಂಪನಿಗೆ ಕೊಕ್ಕೊ ವಿತರಣೆ ಮಾಡುತ್ತಿದ್ದರೆ ರಿಯಾಝ್ ಕೋಳಿ ವ್ಯಾಪಾರ ಮಾಡುತ್ತಿದ್ದ. ಬಶೀರ್ ಹೋಟೆಲ್‍ನಲ್ಲಿ ಕೆಲಸ ಮಾಡುತ್ತಿದ್ದ. ಕೃತ್ಯಕ್ಕೆ ಬ್ಲ್ಯಾಕ್ ಸ್ಪ್ಲೆಂಡರ್ ಬೈಕನ್ನು ಬಳಕೆ ಮಾಡಲಾಗಿದೆ. ಕಾರೊಂದನ್ನು ಸಹ ಬಳಕೆ ಮಾಡಿದ್ದಾರೆ. ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ಸಹ ವಶಪಡಿಸಿಕೊಳ್ಳುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ವಾರದ ಹಿಂದೆಯೇ ಪ್ರವೀಣ್ ಹತ್ಯೆಗೆ ಸ್ಕೆಚ್ – ಕೇರಳದ 7 ಕಡೆ ಆಶ್ರಯ, ಹಂತಕರು ಕೊನೆಗೂ ಅಂದರ್
Advertisement
Advertisement
ಆರೋಪಿಗಳ ಬಗ್ಗೆ ಮೊದಲೇ ನಮಗೆ ಸುಳಿವು ಸಿಕ್ಕಿತ್ತು. ಆದರೆ ನಾವು ಬಹಿರಂಗ ಮಾಡಿರಲಿಲ್ಲ. ಮುಂದೆ ಈ ರೀತಿಯ ಯಾವುದೇ ಕೃತ್ಯ ನಡೆಯದೇ ಕಠಿಣ ಕ್ರಮ ಕೈಗೊಳ್ಳುತ್ತೇವೆ. ವಾರೆಂಟ್ ಇಶ್ಯೂ ಮಾಡಿ ಹಂತಕರು ಮತ್ತು ಹಂತಕರಿಗೆ ಸಹಕಾರ ನೀಡಿದವರ ಆಸ್ತಿಗಳನ್ನು ಮುಟ್ಟುಗೋಲು ಹಾಕುತ್ತೇವೆ. ಯಾವುದೇ ಅಮಾಯಕರನ್ನು ಬಂಧನ ಮಾಡುವುದಿಲ್ಲ. ಆದರೆ ಕೃತ್ಯದಲ್ಲಿ ಭಾಗಿಯಾದವರೆಲ್ಲರನ್ನು ಬಂಧಿಸುತ್ತೇವೆ. ಯಾರನ್ನು ಫಿಕ್ಸ್ ಮಾಡುವುದಕ್ಕೆ ಹೋಗುವುದಿಲ್ಲ. ಯಾರನ್ನೋ ಬಂಧಿಸುವುದಕ್ಕೆ ಇದು ಹುಡುಗಾಟವಲ್ಲ. ನಮಗೆ ಜಾತಿ, ಧರ್ಮ, ಬಣ್ಣ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಈದ್ಗಾ ಮೈದಾನದ ವಿವಾದ- ಸರ್ಕಾರದ ನಿರ್ಧಾರವೇ ಅಂತಿಮ: ಬೊಮ್ಮಾಯಿ
Advertisement
ಎಲ್ಲ ಮಾಹಿತಿಯನ್ನು ನಾವು ಎನ್‍ಐಎಗೆ ನೀಡುತ್ತೇವೆ. ಎನ್‍ಐಎ ಕೂಡಾ ತನಿಖೆ ಮುಂದುವರಿಸುತ್ತಿದೆ. ನಮ್ಮ ಅಧಿಕಾರಿಗಳು ಒಳ್ಳೆಯ ಕೆಲಸ ಮಾಡಿದ್ದಾರೆ. ಪೊಲೀಸ್ ತಂಡಕ್ಕೆ ಸೂಕ್ತ ಬಹುಮಾನ ನೀಡಲಾಗುತ್ತದೆ. ಶತಾಯಗತಾಯವಾಗಿ ಈ ಪ್ರಕರಣ ಭೇದಿಸಬೇಕಾಗಿತ್ತು. ಜನರಲ್ಲಿಯೂ ಸಾಕಷ್ಟು ಆತಂಕವಿತ್ತು. ಪ್ರಕರಣ ಭೇದಿಸಲು ಸಾಕಷ್ಟು ಒತ್ತಡಗಳಿತ್ತು. ಅಧಿಕಾರಿಗಳು ಉತ್ತಮ ಕೆಲಸ ಮಾಡಿದ್ದಾರೆ. ಅಧಿಕಾರಿ ತಂಡಕ್ಕೆ ಬಹುಮಾನವೂ ಘೋಷಿಸಲಾಗುತ್ತದೆ ಎಂದು ತಿಳಿಸಿದರು.
Live Tv
[brid partner=56869869 player=32851 video=960834 autoplay=true]
[brid partner=56869869 player=32851 video=960834 autoplay=true]