ಬೆಂಗಳೂರು: ಮಂಗಳೂರಿನ ಏರ್‌ಪೋರ್ಟ್‌ನಲ್ಲಿ ಬಾಂಬ್ ಪತ್ತೆಯಾದ ಪ್ರಕರಣದ ಬೆನ್ನಲ್ಲೇ ಸಿಲಿಕಾನ್ ಸಿಟಿಯಲ್ಲೂ ಹೆಚ್ಚಿನ ಭದ್ರತೆಯನ್ನು ಕೈಗೊಳ್ಳಲಾಗಿದೆ.
ಬೆಂಗಳೂರಿನ ದೀಪಾಂಜಲಿ ನಗರದ ಮೆಟ್ರೋ ನಿಲ್ದಾಣದ ಬಳಿ ದಿಢೀರನೆ ಬಾಂಬ್ ತಪಾಸಣೆ ನಡೆಸಲಾಯಿತು. ಮೆಟ್ರೋ ನಿಲ್ದಾಣ ಹಾಗೂ ಬೈಕ್ ಪಾರ್ಕಿಂಗ್ ಸ್ಥಳದಲ್ಲಿ ಐದು ಜನರ ಬಾಂಬ್ ತಂಡ ತಪಾಸಣೆ ನಡೆಸಿದೆ. ಶ್ವಾನದಳ ಮೂಲಕ ಅನುಮಾನವಿರುವ ಸ್ಥಳಗಳನ್ನು ಪರಿಶೀಲಿಸಿದ್ದಾರೆ. ಇದರಿಂದ ಕೆಲ ಕಾಲ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಯಾಗಿತ್ತು.
ಮಂಗಳೂರು ಬಾಂಬ್ ಪ್ರಕರಣದ ಹಿನ್ನೆಲೆಯಲ್ಲಿ ನಗರದಲ್ಲಿ ಭದ್ರತೆ ಪರಿಶೀಲನೆ ತಪಾಸಣೆ ನಡೆಸುತ್ತಿದ್ದೇವೆ ಎಂದು ತಪಾಸಣಾ ತಂಡದ ಅಧಿಕಾರಿಯೊಬ್ಬರು ಹೇಳಿದ್ದಾರೆ. ಆದರೆ ದಿಢೀರನೆ ಬಾಂಬ್ ತಪಾಸಣಾ ತಂಡ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದಕ್ಕೆ ಮೆಟ್ರೋ ಅಧಿಕಾರಿಗಳು ಕೂಡ ಗಲಿಬಿಲಿಗೊಂಡಿದ್ದರು.