ಬೆಂಗಳೂರು: ಡ್ರಿಂಕ್ & ಡ್ರೈವ್ (Drink and Drive) ತಪಾಸಣೆ ನಡೆಸಿ ಎಎಸ್‍ಐ ಹಾಗೂ ಕಾನ್‍ಸ್ಟೇಬಲ್ ಹೆಸರಲ್ಲಿ ಹಣ ಪಡೆಯುತ್ತಿದ್ದ ವಿಚಾರವಾಗಿ ಪೊಲೀಸ್ ಇಲಾಖೆ ಹೊಸ ಕ್ರಮಕ್ಕೆ ಮುಂದಾಗಿದೆ.
ಇನ್ನು ಮುಂದೆ ಇನ್ಸ್ಪೆಕ್ಟರ್ (Inspector) ಹಾಗೂ ಅವರ ಮೇಲಿನ ಅಧಿಕಾರಿಗಳಷ್ಟೇ ಡ್ರಿಂಕ್ & ಡ್ರೈವ್ ತಪಾಸಣೆ ನಡೆಸುವಂತೆ ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತರು ಮೌಖಿಕವಾಗಿ ಸೂಚಿಸಿದ್ದಾರೆ. ಇದರಿಂದಾಗಿ ಎಎಸ್‍ಐ ಹಾಗೂ ಕಾನ್‍ಸ್ಟೇಬಲ್ ಹೆಸರಿನಲ್ಲಿ ನಡೆಯುತ್ತಿದ್ದ ಸುಲಿಗೆಯನ್ನು ನಿಲ್ಲಿಸಲು ಇಲಾಖೆ ಈ ಪ್ರಯೋಗಕ್ಕೆ ಮುಂದಾಗಿದೆ. ಅಲ್ಲದೇ ವಾರದಲ್ಲಿ ಎರಡು ದಿನ ಮಾತ್ರ ಡ್ರಂಕ್ & ಡ್ರೈವ್ ತಪಾಸಣೆ ನಡೆಸುವಂತೆ ಸಂಚಾರಿ ಪೊಲೀಸರ ಸಭೆಯಲ್ಲಿ ಸೂಚಿಸಲಾಗಿದೆ. ಇದನ್ನೂ ಓದಿ: ಮುಂದುವರೆದ ಮಳೆಯಾರ್ಭಟ – ಭೀಮಾ, ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹದ ಭೀತಿ
Advertisement
Advertisement
ಸುಲಿಗೆಗಳ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಹಲವಾರು ದೂರುಗಳು ಬಂದಿದ್ದವು. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಹಣ ಪಡೆದು ಕೇಸ್ ಹಾಕದೆ ಕಳಿಸುತ್ತಾರೆ ಎಂದು ಹಲವರು ಆರೋಪಿಸಿದ್ದರು. ಇದೇ ಕಾರಣಕ್ಕೆ ಸಂಚಾರಿ ವಿಭಾಗದ ಹಿರಿಯ ಅಧಿಕಾರಿಗಳು ಈ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮಳೆಯ ಆರ್ಭಟ – ವಿವಿಧೆಡೆ ಶಾಲಾ, ಕಾಲೇಜುಗಳಿಗೆ ರಜೆ
Advertisement
Web Stories