ವರ್ಕ್ ಔಟ್ ಆಯ್ತು ಮೋದಿಯ ಮನ್ ಕೀ ಬಾತ್ ಐಡಿಯಾ – ಎಂ.ಟೆಕ್ ಪದವೀಧರೆಯ ಬಾಳು ಬೆಳಗುತ್ತಿದೆ ಬಾಳೆ ದಿಂಡು

Public TV
2 Min Read
CNG WOMEN

ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ಎಷ್ಟೋ ಮಂದಿಗೆ ಪ್ರೇರಣೆಯಾಗಿದೆ. ಮನ್ ಕೀ ಬಾತ್‍ನಿಂದಲೇ ಪ್ರೇರಣೆಗೊಂಡ ಚಾಮರಾಜನಗರದ ಎಂ.ಟೆಕ್ ಪದವೀಧರೆ ಮಹಿಳೆಯೊಬ್ಬರು ಕಸದಿಂದ ಯಶಸ್ವಿ ಉದ್ಯಮಿಯಾಗಿ ಗುರುತಿಸಿಕೊಂಡಿದ್ದಾರೆ.

Man Ki Baat

ರೈತರು ಬಾಳೆಗೊನೆ ಕೊಯ್ದ ನಂತರ ಬಾಳೆ ದಿಂಡು ಅನುಪಯುಕ್ತ ಎಂದು ಬಿಸಾಡುತ್ತಾರೆ. ಆದರೆ ಈ ಅನುಪಯುಕ್ತ ಬಾಳೆ ದಿಂಡಿನಿಂದ ಮ್ಯಾಟ್, ಫ್ಲೋರ್ ಮ್ಯಾಟ್, ಚಾಪೆ, ಬ್ಯಾಗ್, ಪರ್ಸ್‍ಗಳನ್ನು ತಯಾರಿಸಬಹುದು ಎಂಬುದನ್ನು ಚಾಮರಾಜನಗರದ ವರ್ಷಾ ತೋರಿಸಿಕೊಟ್ಟಿದ್ದಾರೆ. ಗುಂಡ್ಲುಪೇಟೆ ತಾಲೂಕು ಆಲಹಳ್ಳಿಯ ವರ್ಷಾ ಎಂ.ಟೆಕ್ ಪದವೀಧರೆಯಾದರು ಯಾವುದೇ ಉದ್ಯೋಗಕ್ಕೆ ಸೇರಿರಲಿಲ್ಲ. ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಎಂಬ ಹಂಬಲ ಹೊಂದಿದ್ದ ಅವರಿಗೆ ಬೇರೆಯವರ ಕೈ ಕೆಳಗೆ ಕೆಲಸ ಮಾಡಲು ಇಷ್ಟ ಇರಲಿಲ್ಲ. ಸ್ವ ಉದ್ಯೋಗ ಪ್ರಾರಂಭಿಸಬೇಕು, ಮಹಿಳೆಯರಿಗೆ ಉದ್ಯೋಗ ನೀಡಬೇಕು ಆ ಮೂಲಕ ಸ್ತ್ರೀ ಸಬಲೀಕರಣಕ್ಕೆ ಕೈ ಜೋಡಿಸಬೇಕು ಎಂದು ಕನಸು ಹೊತ್ತಿದ್ದ ವರ್ಷಾ ಅವರು ಯೂಟ್ಯೂಬ್‍ನಲ್ಲಿ ಸರ್ಚ್ ಮಾಡುತ್ತಿದ್ದಾಗ, ನರೇಂದ್ರ ಮೋದಿ ತಮ್ಮ ಮನ್ ಕೀ ಬಾತ್‍ನಲ್ಲಿ ಪ್ರಸ್ತಾಪಿಸಿದ್ದ ವಿಚಾರವೊಂದು ಗಮನ ಸೆಳೆದಿದೆ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಅಭಾವ – ಮುಂದಿನ ವಾರದಿಂದಲೇ ಶಾಲೆಗಳು ಬಂದ್

CNG WOMEN 2

ಅನುಪಯುಕ್ತ ಬಾಳೆ ದಿಂಡಿನಿಂದ ಹಲವು ರೀತಿಯ ಉಪಯುಕ್ತ ವಸ್ತುಗಳನ್ನು ತಯಾರಿಸಬಹುದು ಉದಾಹರಣೆ ಸಹಿತ ಹೇಳಿದ್ದ ಮೋದಿ ಅವರ ಮಾತಿನಿಂದ ಪ್ರೇರಣೆಗೊಂಡ ವರ್ಷಾ, ತಾವೇಕೆ ಪ್ರಯತ್ನಿಸಿಸಬಾರದು ಎಂದುಕೊಂಡು ಮತ್ತೆ ಯೂಟ್ಯೂಬ್‍ನಲ್ಲಿ ಸರ್ಚ್ ಮಾಡಿದಾಗ ತಮಿಳುನಾಡಿನ ಕೊಯಮತ್ತೂರಿನಲ್ಲಿ ಬಾಳೆ ದಿಂಡಿನಿಂದ ಉತ್ಪನ್ನಗಳ ತಯಾರಿಕೆ ಮಾಡುತ್ತಿರುವ ದೃಶ್ಯಾವಳಿ ನೋಡಿದ್ದಾರೆ. ಬಳಿಕ ಕೊಯಮತ್ತೂರಿನಿಂದ 3 ಲಕ್ಷ ರೂಪಾಯಿಗಳಿಗೆ ಯಂತ್ರೋಪಕರಣಗಳನ್ನು ಖರೀದಿಸಿ ಚಾಮರಾಜನಗರ ತಾಲೂಕಿನ ಉಮ್ಮತ್ತೂರು ಗ್ರಾಮದಲ್ಲಿರುವ ತಮ್ಮ ಜಮೀನಿನಲ್ಲಿ ಬಾಳೆ ದಿಂಡು ಉತ್ಪನ್ನಗಳ ತಯಾರಿಕಾ ಉದ್ಯಮ ಆರಂಭಿಸಿದ್ದಾರೆ. ಇದನ್ನೂ ಓದಿ: ಅಂಗನವಾಡಿ ಶಿಕ್ಷಕಿಯಾಗಿ ದಲಿತೆ ನೇಮಕವಾಗಿದ್ದಕ್ಕೆ ಮಕ್ಕಳನ್ನು ಕಳುಹಿಸದ ಮೇಲ್ಜಾತಿ ಪಾಲಕರು!

CNG WOMEN 3

ಈ ಘಟಕದಲ್ಲಿ ಐವರು ಮಹಿಳೆಯರಿಗೆ ಉದ್ಯೋಗ ನೀಡಿರುವ ವರ್ಷಾ ನಗರ ಪ್ರದೇಶಗಳಲ್ಲಿರುವ ಆರ್ಗ್ಯಾನಿಕ್ ಶಾಪ್, ಗೂಗಲ್, ಫ್ಲಿಪ್‍ಕಾರ್ಟ್, ಅಮೆಜಾನ್ ಮೂಲಕ ಮಾರುಕಟ್ಟೆ ಸೃಷ್ಟಿಸಿಕೊಳ್ಳಲು ಮುಂದಾಗಿದ್ದಾರೆ. ಬಾಳೆ ದಿಂಡಿನಲ್ಲಿರುವ ರಸದಲ್ಲಿ ಪೊಟ್ಯಾಶಿಯಂ ಅಂಶ ಇರುವುದರಿಂದ ಅದನ್ನು ಬೀಸಾಡದೆ ರಾಸಾಯನಿಕ ಗೊಬ್ಬರದ ಬದಲು ಬಾಳೆ ದಿಂಡಿನ ರಸ ಹಾಗೂ ದಿಂಡಿನಿಂದ ನಾರು ತೆಗೆದ ನಂತರ ಉಳಿಯುವ ವೇಸ್ಟ್‌ನಿಂದ ಸಾವಯವ ಗೊಬ್ಬರ ತಯಾರಿಸಿ ತಮ್ಮ ಜಮೀನಿಗೆ ಬಳಸುತ್ತಿದ್ದಾರೆ. ಇವರು ತಯಾರಿಸುತ್ತಿರುವ ಬಾಳೆದಿಂಡಿನ ಚಾಪೆಗಳನ್ನು ಕೊಯಮತ್ತೂರಿನ ಕಂಪನಿಯೊಂದು ಖರೀದಿಸುತ್ತಿದ್ದು, ಬಾಳೆದಿಂಡಿನಿಂದ ತಯಾರಿಸಲಾದ ವಸ್ತುಗಳು ಪರಿಸರ ಸ್ನೇಹಿ ಆಗಿರುವುದರಿಂದ ಬೇಡಿಕೆ ಹೆಚ್ಚಾಗಬಹುದು ಎಂಬ ಆಶಯವನ್ನೂ ಅವರು ಹೊಂದಿದ್ದಾರೆ. ಇದನ್ನೂ ಓದಿ: ಮದುವೆಯಾಗಲು ಒತ್ತಾಯಿಸಿದ್ದಕ್ಕೆ ಪ್ರೀತಿಸಿದವಳನ್ನೇ ಇಟ್ಟಿಗೆಯಿಂದ ಹೊಡೆದು ಕೊಂದ

CNG WOMEN 5

ಮೈಸೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿ ಆಗಿರುವ ವರ್ಷಾ ಅವರ ಪತಿ ಶ್ರೀಕಂಠಸ್ವಾಮಿ ಅವರು ರಜಾ ದಿನಗಳಲ್ಲಿ ಬಾಳೆ ದಿಂಡಿನ ಉತ್ಪನ್ನಗಳನ್ನು ತಯಾರಿಸುವ ಕೆಲಸದಲ್ಲಿ ನಿರತರಾಗಿ ತಮ್ಮ ಪತ್ನಿಯ ಕಾರ್ಯಕ್ಕೆ ಸಾಥ್ ನೀಡುತ್ತಿದ್ದಾರೆ. ಈ ದಂಪತಿ ಸುತ್ತಮುತ್ತಲಿನ ಜಮೀನಿಗಳಲ್ಲಿ ಬಾಳೆ ಬೆಳೆಯುವ ರೈತರನ್ನು ಸಂಪರ್ಕಿಸಿ ಬಾಳೆ ದಿಂಡು ಬಿಸಾಡದೆ ತಮಗೆ ನೀಡುವಂತೆ ಕೇಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಒಂದು ಬಾಳೆ ದಿಂಡಿಗೆ 8 ರಿಂದ 10 ರೂಪಾಯಿಗೆ ಖರೀದಿಸಲು ಆಲೋಚಿಸಿದ್ದಾರೆ, ಇದರಿಂದ ಸುತ್ತಮುತ್ತಲಿನ ರೈತರಿಗೂ ಲಾಭವಾಗಲಿದೆ ಎಂಬುದು ಅವರ ಆಶಯವಾಗಿದೆ. ಒಟ್ಟಾರೆ ಮೋದಿ ಅವರ ಮನ್ ಕೀ ಬಾತ್ ವಿದ್ಯಾವಂತ ಮಹಿಳೆಯೊಬ್ಬರು ಯಶಸ್ವಿ ಉದ್ಯಮಿಯಾಗಲು ನಿಜಕ್ಕೂ ಪ್ರೇರಣೆ ನೀಡಿದೆ ಎಂದರೆ ತಪ್ಪಾಗಲಾರದು.

Live Tv

Share This Article
Leave a Comment

Leave a Reply

Your email address will not be published. Required fields are marked *