ವೀಡಿಯೋ: ಕಾಲಿನ ಮೂಲಕ ಮತಚಲಾಯಿಸಿ ಮಾದರಿಯಾದ ಯುವಕ!

Public TV
1 Min Read
GUJRAT

ಗಾಂಧಿನಗರ: ಏಳು ಹಂತಗಳ ಲೋಕಸಭಾ ಚುನಾವಣೆಯ (Loksabha Elections 2024) ಮೂರನೇ ಹಂತದ ಮತದಾನ ಇಂದು ನಡೆಯುತ್ತಿದೆ. ಗುಜರಾತ್‌ನ ನಾಡಿಯಾಡ್‌ನ ಮತಗಟ್ಟೆಯಲ್ಲಿ ಯುವಕನೊಬ್ಬ ಮತದಾನ ಮಾಡಲು ಆಗಮಿಸಿದ ಸ್ಫೂರ್ತಿಯ ಪ್ರಸಂಗವೊಂದು ಎಲ್ಲರ ಗಮನ ಸೆಳೆದಿದೆ.

ಯುವಕ ಅಂಕಿತ್‌ ಸೋನಿಯವರು (Ankit Soni) ಮಂಗಳವಾರ ನಡೆದ ಮೂರನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಗುಜರಾತ್‌ನ ನಾಡಿಯಾಡ್‌ನ ಮತಗಟ್ಟೆಯಲ್ಲಿ ಕಾಲುಗಳ ಮೂಲಕ ತಮ್ಮ ಹಕ್ಕು ಚಲಾಯಿಸಿದರು. ಬಳಿಕ ದೇಶಾದ್ಯಂತ ಚುನಾವಣೆ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಮತದಾರರು ಹೊರಗೆ ಬಂದು ಮತ ಚಲಾಯಿಸುವಂತೆ ಮನವಿ ಮಾಡಿದರು.

ಮತದಾನ ಮಾಡಿದ ಬಳಿಕ ಮಾತನಾಡಿದ ಅವರು, 20 ವರ್ಷಗಳ ಹಿಂದೆ ಎಲೆಕ್ಟ್ರಿಕ್‌ ಶಾಕ್‌ ನಿಂದ ನನ್ನ ಎರಡೂ ಕೈಗಳನ್ನು ಕಳೆದುಕೊಂಡೆ. ನನ್ನ ಗುರುಗಳು ಮತ್ತು ಶಿಕ್ಷಕರ ಆಶೀರ್ವಾದದಿಂದ ನಾನು ಚಿತ್ರ ಬಿಡಿಸಲು ಪ್ರಾರಂಭಿಸಿದೆ. ನಂತರ ಬರೆಯಲು ಪ್ರಾರಂಭಿಸಿದೆ. ಇದಾದ ಬಳಿಕ ನಾನು ಶಾಲೆಗೆ ಹೋಗಲು ಪ್ರಾರಂಭಿಸಿದೆ. ನಾನು ಶಾಲೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣನಾಗಿದ್ದೆ. ಜೊತೆಗೆ ಕಂಪ್ಯೂಟರ್‌ ಸೈನ್ಸ್‌ ಕೋರ್ಸ್‌ ಮಾಡಿ MBA ಮಾಡಿದೆ. ಕಳೆದ ಹಲವು ವರ್ಷಗಳಿಂದ ನಾನು ಹೀಗೆಯೇ ಮತ ಚಲಾಯಿಸುತ್ತಿದ್ದೇನೆ. ಜನರು ಹೊರಗೆ ಬಂದು ತಮ್ಮ ಅಮೂಲ್ಯವಾದ ಮತ ಚಲಾಯಿಸುವಂತೆ ನಾನು ಮನವಿ ಮಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಸಂತ್ರಸ್ತೆಯನ್ನು ತೋಟದ ಮನೆಯಿಂದ ರಕ್ಷಿಸಿದ್ದು ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಾರಾ ಮಹೇಶ್

ಮೂರನೇ ಹಂತದ ಲೋಕಸಭೆ ಚುನಾವಣೆಯು 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳಲ್ಲಿ ನಡೆಯುತ್ತಿದೆ.

Share This Article