ನೆಲಮಂಗಲ: ಮದುವೆಯಾಗಿ 13 ವರ್ಷದ ನಂತರ ಇನ್‌ಸ್ಟಾದಲ್ಲಿ ಪರಿಚಯವಾದವನೊಂದಿಗೆ ಪತ್ನಿ ಎಸ್ಕೇಪ್ ಆಗಿ, ಎರಡನೇ ಮದುವೆಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ (Nelamangala) ನಡೆದಿದೆ.
ನೇತ್ರಾವತಿ ಜಕ್ಕಸಂದ್ರದ ರಾಘವೇಂದ್ರನಗರ ನಿವಾಸಿಯಾದ ರಮೇಶ್ ಎಂಬುವವರನ್ನು ಮದುವೆಯಾಗಿ 13 ವರ್ಷವಾಗಿತ್ತು. ಒಬ್ಬ ಮಗ ಕೂಡ ಇದ್ದಾನೆ. ಇದನ್ನೂ ಓದಿ: ವಿಚಾರಣೆ ನೆಪದಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಎಸ್‌ಪಿ ಹಲ್ಲೆ ಆರೋಪ – ಭಟ್ಕಳದಲ್ಲಿ ಹೆದ್ದಾರಿ ತಡೆದು ಠಾಣೆಗೆ ಮುತ್ತಿಗೆ
ಕಳೆದ 1 ವಾರದ ಹಿಂದೆ ಇನ್‌ಸ್ಟಾದಲ್ಲಿ ನೇತ್ರಾವತಿಗೆ ಸಂತೋಷ್ ಎಂಬಾತನ ಪರಿಚಯವಾಗಿತ್ತು. ಈ ಪರಿಚಯವು ಪ್ರೀತಿಗೆ ತಿರುಗಿತ್ತು. ನೇತ್ರಾವತಿಯು ಕೆಲವೇ ದಿನಗಳ ಪ್ರೀತಿಗಾಗಿ ಮೊದಲ ಪತಿಗೆ ಕೈಕೊಟ್ಟು, ಸಂತೋಷ್ ಜೊತೆ ದೇವಾಲಯಲ್ಲಿ ಎರಡನೇ ಮದುವೆಯಾಗಿದ್ದಾಳೆ. ಸಾಮಾಜಿಕ ಜಾಲತಾಣದಲ್ಲಿ ಈ ಮದುವೆಯ ವೀಡಿಯೋವನ್ನು ನೋಡಿ ಮೊದಲ ಪತಿ ಶಾಕ್ ಆಗಿದ್ದಾರೆ. ಇದನ್ನೂ ಓದಿ: ಸೌದೆ ತಗೊಂಡ್ರೇ ಮಾತ್ರ ಹೆಣ ಸುಡಲು ಸ್ಲಾಟ್ – ಬೆಂಗಳೂರಿನ ಸ್ಮಶಾನದಲ್ಲೂ ಬ್ರೋಕರ್‌ಗಳ ಹಾವಳಿ!
ಪೊಲೀಸರ ಭದ್ರತೆಯಲ್ಲಿ ಬಟ್ಟೆ ಹಾಗೂ ಇನ್ನಿತರ ವಸ್ತುಗಳನ್ನ ತೆಗೆದುಕೊಂಡು ಹೋಗಲು ಮನೆ ಬಳಿ ಬಂದ ನೇತ್ರಾವತಿಗೆ ಸ್ಥಳೀಯರು ಕ್ಲಾಸ್ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಲಯಾಳಂ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ – ಸರ್ಕಾರದ ವಿರುದ್ಧ ಸ್ಥಳೀಯರ ಆಕ್ರೋಶ
ನೇತ್ರಾವತಿ ವಿರುದ್ಧ ನೆಲಮಂಗಲ ಟೌನ್ ಪೋಲೀಸ್ ಠಾಣೆಯಲ್ಲಿ (Nelamangala Town Police Station) ಪ್ರಕರಣ ದಾಖಲಾಗಿದ್ದು, ಪತಿ ಹಾಗೂ ಆತನ ಕುಟುಂಬ ದೂರು ನೀಡಿ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಡೀಸೆಲ್ ಬೆಲೆ ಏರಿಕೆ – ಖಾಸಗಿ ಬಸ್ ಪ್ರಯಾಣ ದರ ದುಬಾರಿ!
ಈ ಹಿಂದೆ ನೇತ್ರಾವತಿಯು ಪತಿ ಕುಡಿದು ಹೊಡೆಯುತ್ತಾನೆ ಎಂದು ದೂರು ನೀಡಿ, ಪತಿಯನ್ನು ಮನೆಯಿಂದ ಹೊರಗೆ ಹಾಕಿರುವ ವಿಷಯವೂ ಬೆಳಕಿಗೆ ಬಂದಿದೆ.