ಮಂಡ್ಯ: ಅಯೋಧ್ಯೆಯ (Ayodhya) ರಾಮಮಂದಿರದಲ್ಲಿ (Ram Mandir) ಬಾಲರಾಮನ ಪ್ರಾಣಪ್ರತಿಷ್ಠಾಪನೆ ಹೊತ್ತಲ್ಲೇ, ಇಲ್ಲಿನ (Mandya) ಲೇಬರ್ ಕಾಲೋನಿಯಲ್ಲಿ ಶಿಲ್ಪಿ ಅರುಣ್ ಯೋಗಿರಾಜ್‍ರಿಂದ (Arun Yogiraj) ಕೆತ್ತಲ್ಪಟ್ಟ ರಾಮನ ದೇವಾಲಯ ಉದ್ಘಾಟನೆಗೆ ಸಿದ್ಧತೆ ನಡೆದಿದೆ.
Advertisement
ಲೇಬರ್ ಕಾಲೋನಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ರಾಮಮಂದಿರದಲ್ಲಿ ಶಿಲ್ಪಿ ಅರುಣ್ ಯೋಗಿರಾಜ್ ಕೈಯಿಂದ ರಾಮ, ಸೀತೆ, ಲಕ್ಷ್ಮಣ, ಹನುಮ, ಸರಸ್ವತಿ ಹಾಗೂ ಗಣಪತಿ ದೇವರ ವಿಗ್ರಹಗಳು ಕೆತ್ತಲ್ಪಟ್ಟಿವೆ. ಈ ವಿಗ್ರಹಗಳಿಗೆ ಶಾಸ್ತ್ರೋಕ್ತವಾಗಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ಶಿಷ್ಯ ವೃಂದದಿಂದ ಪೂಜೆ ಹಾಗೂ ವಿಧಿವಿಧಾನಗಳು ನೆರವೇರುತ್ತಿದೆ. ಇದನ್ನೂ ಓದಿ: ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ: ಹೆಚ್‌ಡಿಕೆ
Advertisement
Advertisement
ಬೆಳಿಗ್ಗೆ 10:30ಕ್ಕೆ ಸಲ್ಲುವ ಮೀನ ಲಗ್ನದಲ್ಲಿ ರಾಮದೇವರ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಮುಂಜಾನೆ 5 ಗಂಟೆಯಿಂದಲೂ ಹೋಮ ಹವನಗಳು ನಡೆಯುತ್ತಿವೆ. ಪೂಜೆಗೆ ನಾದಸ್ವರಗಳ ಹಿಮ್ಮೇಳ ಸಹ ಇದ್ದು, ಹಬ್ಬದ ವಾತಾವರಣ ಮನೆ ಮಾಡಿದೆ.
Advertisement
ಇಲ್ಲಿನ ನಿವಾಸಿಗಳ 14 ವರ್ಷಗಳ ಪರಿಶ್ರಮದಿಂದ ಈ ದೇವಾಲಯ ನಿರ್ಮಾಣಗೊಂಡಿದ್ದು, ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ ದಿನವೇ ದೇವಾಲಯ ಉದ್ಘಾಟನೆಗೊಳ್ಳುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶತಮಾನಗಳ ಕನಸು ನನಸಾಗಲು ಕ್ಷಣಗಣನೆ – ಅಯೋಧ್ಯೆ ಬಾಲರಾಮನಿಗೆ ಮೊದಲ ಮಜ್ಜನ