ಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್ ಕುಸಿದು ಇನ್‌ಸ್ಟಾ ಮಾರ್ಟ್ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ (Mangaluru) ಕುಂಟಿಕಾನ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ಬೆಳಲು ನಿವಾಸಿ ನೌಫಾಲ್ (28) ಸಾವನ್ನಪ್ಪಿದ್ದಾರೆ. ಇನ್‌ಸ್ಟಾ ಮಾರ್ಟ್ ಸಪ್ಲೈ ಪಾಯಿಂಟ್‌ನಲ್ಲಿ ದಿನಸಿ ವಸ್ತುಗಳನ್ನು ಲಿಫ್ಟ್‌ನಲ್ಲಿ ಸಾಗಿಸುತ್ತಿದ್ದರು. ಈ ವೇಳೆ ದುರ್ಘಟನೆಯಾಗಿದೆ. ಇದನ್ನೂ ಓದಿ: ಹಾಸನದಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ – ಪ್ರಯಾಣಿಕರು ಸೇಫ್!
ವಸ್ತುಗಳನ್ನು ಸಾಗಿಸುತ್ತಿದ್ದ ವೇಳೆ ಏಕಾಏಕಿ ಲಿಫ್ಟ್ ಕುಸಿದಿದೆ. ಲಿಫ್ಟ್‌ನಲ್ಲಿ ಸಿಲುಕಿ ನೌಫಾಲ್ ಸಾವಿಗೀಡಾಗಿದ್ದಾರೆ. ದುರಂತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕದ್ರಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

