ಬೆಂಗಳೂರು: ರಾಜ್ಯದ ಎಲ್ಲಾ 215 ಕೈಗಾರಿಕಾ ಪ್ರದೇಶಗಳಲ್ಲಿರುವ ಕೈಗಾರಿಕೆಗಳಿಂದ ಉಂಟಾಗುತ್ತಿರುವ ವಿವಿಧ ರೀತಿಯ ಮಾಲಿನ್ಯ ಕುರಿತು ಭಾರತೀಯ ವಿಜ್ಞಾನ ಸಂಸ್ಥೆ (IISC), ಐಐಟಿ (IIT) ತರಹದ ಉನ್ನತ ಮಟ್ಟದ ಸಂಸ್ಥೆಗಳಿಂದ ವಿಸ್ತೃತ ಅಧ್ಯಯನ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳಲು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ (MB Patil) ಅವರು ತಮ್ಮ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕೈಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಈ ದಿನ ಸಭೆ ನಡೆಸಿದೆ. ರಾಜ್ಯದ ಎಲ್ಲಾ 215 ಕೈಗಾರಿಕಾ ಪ್ರದೇಶಗಳಲ್ಲಿರುವ ಕೈಗಾರಿಕೆಗಳಿಂದ ಆಗಬಹುದಾದ ಮಾಲಿನ್ಯ ತಗ್ಗಿಸುವ ಕುರಿತು ಭಾರತೀಯ ವಿಜ್ಞಾನ ಸಂಸ್ಥೆ (#IISC), #IIT ರೀತಿಯ ಉನ್ನತ ಮಟ್ಟದ ಸಂಸ್ಥೆಗಳಿಂದ ವಿಸ್ತೃತ ಅಧ್ಯಯನ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದೆ.… pic.twitter.com/XPRqcWUVOl
— M B Patil (@MBPatil) April 7, 2025
ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದರು.ಇದನ್ನೂ ಓದಿ: ನಾಳೆ ದ್ವಿತೀಯ ಪಿಯುಸಿ ರಿಸಲ್ಟ್
ಕೈಗಾರಿಕಾ ಪ್ರದೇಶಗಳಲ್ಲಿ ಉದ್ಯಮ ನಡೆಸಲು ಅನುಮತಿ ನೀಡುವಾಗ ಸರ್ಕಾರವು ಹಲವು ಮಾನದಂಡಗಳನ್ನು ನೀಡಿರುತ್ತದೆ. ಆದರೆ ನಂತರದ ದಿನಗಳಲ್ಲಿ ಏನಾಗುತ್ತದೆ ಎನ್ನುವುದರ ಪರಿಶೀಲನೆ ಕೂಡ ಅಗತ್ಯ. ಉದ್ಯಮಗಳನ್ನು ಬೆಳೆಸುವ ಜೊತೆಯಲ್ಲೇ ನಾವು ನೆಲ, ಜಲ, ವಾಯು, ಕೃಷಿ ಮತ್ತು ಮನುಷ್ಯರ ಮೇಲಾಗುತ್ತಿರುವ ಪರಿಣಾಮಗಳನ್ನೂ ಅಧ್ಯಯನ ಮಾಡಿ, ಅವುಗಳನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಬೇಕಾದ ಅನಿವಾರ್ಯ ಪರಿಸ್ಥಿತಿ ಇದೆ ಎಂದು ತಿಳಿಸಿದರು.
ಈ ದಿನ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಾದ ಡಾ. ಎಸ್. ಸೆಲ್ವಕುಮಾರ್, ಆಯುಕ್ತರಾದ ಶ್ರೀಮತಿ ಗುಂಜನ್ ಕೃಷ್ಣ, #KIADB CEO ಅವರಾದ ಡಾ. ಮಹೇಶ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದೆ. ಕೈಗೊಂಡಿರುವ ವಿವಿಧ ಯೋಜನೆಗಳು, ಅನುಷ್ಠಾನಗೊಳಿಸಬೇಕಿರುವ ಕಾರ್ಯಕ್ರಮಗಳ ಕುರಿತಂತೆ… pic.twitter.com/oXcdy2ZywZ
— M B Patil (@MBPatil) April 7, 2025
ಈ ನಿಟ್ಟಿನಲ್ಲಿ ಕೈಗಾರಿಕಾ ಮಾಲಿನ್ಯ ಕುರಿತು ಉನ್ನತ ಮಟ್ಟದ ತಂಡಗಳಿಂದ ಅಧ್ಯಯನ ನಡೆಸಲಾಗುವುದು. ಈ ತಂಡಗಳು ಎಲ್ಲಾ ಕೈಗಾರಿಕಾ ಪ್ರದೇಶಗಳಿಗೂ ಖುದ್ದು ಭೇಟಿ ನೀಡಲಿವೆ. ಜೊತೆಗೆ ಮಾಲಿನ್ಯದ ತೀವ್ರತೆ ಆಧರಿಸಿ, ಆಯಾ ಉದ್ಯಮಗಳು ಯಾವ ಬಗೆಯ ಪರಿಹಾರ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎನ್ನುವುದನ್ನೂ ಈ ಸಮಿತಿ ತಿಳಿಸಲಿದೆ ಎಂದು ವಿವರಿಸಿದರು.
ಈ ಉದ್ದೇಶಕ್ಕಾಗಿ ಸೂಕ್ತ ಸಂಸ್ಥೆಯನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ತಂಡಗಳು ನಿರ್ದಿಷ್ಟ ಕಾಲಮಿತಿಯಲ್ಲಿ ತಮ್ಮ ವರದಿ ಸಲ್ಲಿಸುವಂತೆ ಸೂಚಿಸಬೇಕು ಎಂದು ಸಲಹೆ ನೀಡಿದರು. ಸಭೆಯಲ್ಲಿ ಸಚಿವರ ತಾಂತ್ರಿಕ ಸಲಹೆಗಾರ ಡಾ.ಅರವಿಂದ ಗಲಗಲಿ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.ಇದನ್ನೂ ಓದಿ: ಹಾಸ್ಟೆಲ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ