ಕಿಚ್ಚನ ವಿರುದ್ಧ ಅವಹೇಳನ: ಮಾಜಿ ಶಾಸಕನ ಪುತ್ರನ ವಿರುದ್ಧ ಫ್ಯಾನ್ಸ್ ಗರಂ

Public TV
1 Min Read
sudeep

ನ್ನಡದ ಹೆಸರಾಂತ ನಟ ಕಿಚ್ಚ ಸುದೀಪ್ (Sudeep) ಬಗ್ಗೆ ಕೊಳ್ಳೇಗಾಲ (Kollegala) ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ ಪುತ್ರ ಲೋಕೇಶ್ (Lokesh) ಅವಹೇಳನಕಾರಿಯಾಗಿ (Contempt) ಆಡಿದ್ದಾರೆ ಎನ್ನಲಾದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕಿಚ್ಚನ ಬಗ್ಗೆ ಲೋಕೇಶ್ ಹಗುರವಾಗಿ ಮಾತನಾಡಿದ್ದಾರೆ ಎಂದು ಅಭಿಮಾನಿಗಳ ಗರಂ ಆಗಿದ್ದಾರೆ.

sudeep

ಜಿ.ಎನ್. ನಂಜುಂಡಸ್ವಾಮಿ (G.N. Nanjundaswamy) ಈ ಬಾರಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ. ಬಿಜೆಪಿ ಪರವಾಗಿ ಪ್ರಚಾರ ಮಾಡಲು ಕಿಚ್ಚ ಕೊಳ್ಳೇಗಾಲಕ್ಕೆ ಬರಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮಾತನ್ನು ಶಾಸಕ ಎನ್. ಮಹೇಶ್ ಪದೇ ಪದೇ ಹೇಳುತ್ತಿದ್ದಾರಂತೆ. ಇವರಿಗೆ ಟಾಂಗ್ ಕೊಡುವುದಕ್ಕಾಗಿಯೇ ಲೋಕೇಶ್ ನಾಲಿಗೆ ಹರಿಬಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ನೆಗೆಟಿವ್ ರೋಲ್ ಮಾಡಿದ್ದಕ್ಕೆ ಮದುವೆ ಸಂಬಂಧ ಕ್ಯಾನ್ಸಲ್- ನಟಿ ಅನಿಕಾ ಸಿಂಧ್ಯ

sudeep 1 1

ಕಾಂಗ್ರೆಸ್ ಪಕ್ಷದ ಪ್ರಚಾರದ ವೇಳೆ ಮಾತನಾಡಿರುವ ಲೋಕೇಶ್, ‘ಎನ್.ಮಹೇಶ್ ಅವರು ಪದೇ ಪದೇ ಕಿಚ್ಚ ಸುದೀಪ್ ಪ್ರಚಾರಕ್ಕೆ ಬರುತ್ತಾರೆ ಎಂದು ಹೇಳುತ್ತಿದ್ದಾರೆ. ನಮ್ಮಲ್ಲಿ ಯಾರೇ ಬಂದರೂ ಊಟ ಮಾಡ್ಕೊಂಡು, ಜೇಬಿಗೆ ಹಾಕ್ಕೊಂಡು ಹೋಗ್ತಾ ಇರ್ತಾರೆ’ ಎಂದು ಮಾತನಾಡಿದ್ದಾರೆ. ಈ ಮಾತುಗಳು ಸುದೀಪ್ ಅಭಿಮಾನಿಗಳನ್ನು ಕೆರಳಿಸಿವೆ. ಹಾಗಾಗಿ ಲೋಕೇಶ್ ಕ್ಷಮೆ ಕೇಳಬೇಕು ಎಂದು ಅಭಿಮಾನಿಗಳು ಪಟ್ಟ ಹಿಡಿದಿದ್ದಾರೆ.

KICCHA SUDEEP 5

ಈ ಕುರಿತು ಮಾತನಾಡಿರುವ ವಾಲ್ಕೀಕಿ ನಾಯಕ ಮಹಾಸಭಾ ಜಿಲ್ಲಾ ಯುವ ಘಟಕದ ಅಧ್ಯಕ್ಷ ಸರಗೂರು ಶಿವು, ‘ಲೋಕೇಶ್ ಕೂಡಲೇ ಸುದೀಪ್ ಅವರಿಗೆ ಕ್ಷಮೆ ಕೇಳಬೇಕು. ಕೇಳದೇ ಇದ್ದರೆ, ಪ್ರತಿಭಟನೆ ಮಾಡಲಾಗುವುದು. ಇದು ಕೇವಲ ಸುದೀಪ್ ಅವರಿಗೆ ಮಾಡಿರುವ ಅವಮಾನವಲ್ಲ, ಅಭಿಮಾನಿಗಳಿಗೂ ಮಾಡಿರುವ ಅಪಮಾನ’ ಎಂದಿದ್ದಾರೆ.

Share This Article