ಬೆಂಗಳೂರು: ನಗರದ ಪ್ರತಿಷ್ಠಿತ ಜೈನ್ ವಿಶ್ವವಿದ್ಯಾಲಯದಲ್ಲಿ (Jain University) ಸಂವಿಧಾನ ಶಿಲ್ಪಿ ಡಾ.ಬಿಆರ್ ಅಂಬೇಡ್ಕರ್‌ಗೆ (BR Ambedkar) ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಭಾನುವಾರ ಕಾಲೇಜಿನ ಮುಂದೆ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟ (NSUI) ಹಾಗೂ ದಲಿತಪರ ಸಂಘಟನೆಗಳು (Pro Dalit Organization) ಪ್ರತಿಭಟನೆ ನಡೆಸಿ ಕಾಲೇಜಿನ ಬೋರ್ಡ್‌ಗೆ ಮಸಿ ಬಳಿದಿದ್ದಾರೆ.
Advertisement
ಲಾಲ್‌ಬಾಗ್ ರಸ್ತೆಯಲ್ಲಿರುವ ಜೈನ್ ಯುನಿವರ್ಸಿಟಿ ಸೆಂಟರ್ ಫಾರ್ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನ 6 ವಿದ್ಯಾರ್ಥಿಗಳು ಅಂಬೇಡ್ಕರ್ ಹಾಗೂ ದಲಿತರಿಗೆ ಅವಮಾನ ಮಾಡಿದ್ದಾರೆ ಎನ್ನುವ ಆರೋಪದ ಕಿಡಿ ಹೊತ್ತಿಕೊಂಡಿದೆ. ಫೆಬ್ರವರಿ 6ರಂದು ಕಾಲೇಜಿನ ಯುವಜನೋತ್ಸವ ಕಾರ್ಯಕ್ರಮದಲ್ಲಿ ಜಾತಿ ನಿರ್ಮೂಲನೆಯ ಬಗ್ಗೆ ಸಂದೇಶ ನೀಡುವ ಭರದಲ್ಲಿ, ವಿದ್ಯಾರ್ಥಿಗಳ ಗುಂಪೊಂದು ಅವಹೇಳನ ಪದಗಳ ಬಳಕೆ ಮಾಡಿತ್ತು. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಭಾನುವಾರ ಎನ್‌ಎಸ್‌ಯುಐ ಹಾಗೂ ದಲಿತಪರ ಸಂಘಟನೆಗಳು ಕಾಲೇಜಿನ ಮುಂದೆ ಪ್ರತಿಭಟನೆ ನಡೆಸಿ, ಬೋರ್ಡ್‌ಗೆ ಮಸಿ ಬಳಿದಿದ್ದಾರೆ.
Advertisement
Advertisement
ವಿದ್ಯಾರ್ಥಿಗಳು ಬಿಆರ್ ಅಂಬೇಡ್ಕರ್ ಅಲ್ಲ, ಬಿಯರ್ ಅಂಬೇಡ್ಕರ್. ಡೋಂಟ್ ಟಚ್ ಮಿ, ಟಚ್ ಮಿ ಎಂದು ಹಾಡನ್ನು ಪ್ಲೇ ಮಾಡಿ ಗೇಲಿ ಮಾಡಿದ್ದಲ್ಲದೇ ನೀವು ಡಿ-ಲಿಟ್ ಆಗಿರುವಾಗ ದಲಿತರಾಗಿರಲು ಕಾರಣವೇನು ಎಂದು ವಿವಾದಾತ್ಮಕವಾಗಿ ಸ್ಕಿಟ್ ಪ್ರದರ್ಶನ ಮಾಡಿದ್ದಾರೆ. ಈ ವಿವಾದದ ಕಿಚ್ಚು ಹೆಚ್ಚಾಗುತ್ತಿದ್ದಂತೆ ಕಾಲೇಜು ಆಡಳಿತ ಮಂಡಳಿ, ಬೇಷರತ್ ಕ್ಷಮೆಯಾಚಿಸಿದೆ. ಶಿಸ್ತುಪಾಲನ ಕಮಿಟಿಯಿಂದಲೂ ಸ್ಕಿಟ್ ಪ್ರದರ್ಶನ ಮಾಡಿದ 6 ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಇದನ್ನೂ ಓದಿ: ಅಂಬೇಡ್ಕರ್ ವಿರುದ್ಧ ಹಾಸ್ಯ ಮಾಡುವುದು ಅಪರಾಧವಲ್ಲ: ನಟ ಚೇತನ್
Advertisement
ಸಾಮಾಜಿಕ ಮಾಧ್ಯಮಗಳಲ್ಲಿ ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಮಹಾರಾಷ್ಟ್ರದಲ್ಲಿ ದಲಿತ ಸಂಘಟನೆಯ ಅಕ್ಷಯ್ ಬನ್ಸೋಡೆ ಅವರು ನಾಂದೇಡ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ. ಬೆಂಗಳೂರಿನ ಸಿದ್ದಾಪುರ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿದ್ದು, ಜಯನಗರ ಎಸಿಪಿ ಶ್ರೀನಿವಾಸ್ ನೇತೃತ್ವದಲ್ಲಿ ತನಿಖೆ ಆರಂಭಗೊಂಡಿದೆ.
ಕಾಲೇಜು ಪ್ರಾಂಶುಪಾಲರು, ಡೀನ್, ಕಾರ್ಯಕ್ರಮ ಆಯೋಜಕರು, ಸ್ಕಿಟ್‌ನಲ್ಲಿ ನಟಿಸಿದ್ದ ವಿದ್ಯಾರ್ಥಿಗಳಿಗೆ ನೋಟಿಸ್ ನೀಡಲಾಗಿದೆ. ಶನಿವಾರ ಕಾಲೇಜು ಆಡಳಿತ ಮಂಡಳಿಯವರಿಂದ ವಿವರಣೆ ಪಡೆದ ಎಸಿಪಿ ಭಾನುವಾರ ಕೂಡ ಪ್ರಾಂಶುಪಾಲರು ಸೇರಿ ವಿದ್ಯಾರ್ಥಿಗಳ ವಿಚಾರಣೆ ನಡೆಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿಗೆ ಆಗಮಿಸಿದ ಮೋದಿ: ನಾಡಿನ ಗಣ್ಯರ ಜೊತೆ ಸಂವಾದ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k