ದುಬೈನಲ್ಲಿ (Dubai) ನಡೆದ 2024ರ ಸಾಲಿನ ಸೈಮಾ ಪ್ರಶಸ್ತಿ (SIIMA 2025 Award) ವಿತರಣಾ ಸಮಾರಂಭದ ವೇದಿಕೆಯಲ್ಲೇ ಕನ್ನಡಿಗರಿಗೆ (Kannadigas) ಅವಮಾನ ಮಾಡಲಾಗಿದೆ ಎಂದು ದುನಿಯಾ ವಿಜಯ್ (Duniya Vijay) ಸಿಟ್ಟು ಹೊರಹಾಕಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸೌತ್ ಇಂಡಸ್ಟ್ರಿಯ ಕಲಾವಿದರು, ತಂತ್ರಜ್ಞರು ಭಾಗಿಯಾಗಿ ಹಲವು ವಿಭಾಗಗಳಲ್ಲಿ ಪ್ರಶಸ್ತಿ ಸ್ವೀಕರಿಸಿದರು. ಆದರೆ ಈ ಕಾರ್ಯಕ್ರಮದಲ್ಲಿಕನ್ನಡಿಗರಿಗೆ ಅವಮಾನ ಮಾಡಲಾಗಿದೆ ಎಂದು ಭೀಮಾ ಸಿನಿಮಾಗೆ ಪ್ರಶಸ್ತಿ ಸ್ವೀಕರಿಸಿದ ನಟ ದುನಿಯಾ ವಿಜಯ್ ವೇದಿಕೆಯಲ್ಲೇ ಆಯೋಜಕರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.
ಎಲ್ಲಾ ಭಾಷೆಯ ಸಿನಿಮಾ ನಟ, ನಟಿಯರಿಗೆ ಹಾಗೂ ತಂತ್ರಜ್ಞರಿಗೆ ಪ್ರಶಸ್ತಿ ನೀಡಿ ಕೊನೆಗೆ ಕನ್ನಡ ಚಿತ್ರರಂಗದವರಿಗೆ ಪ್ರಶಸ್ತಿ ನೀಡಲಾಗುತ್ತದೆ. ಪ್ರತಿಬಾರಿಯೂ ಈ ರೀತಿಯಾಗಿಯೇ ನಡೆದುಕೊಂಡು ಬಂದಿದೆ. ಕೊನೆಗೆ ಪ್ರಶಸ್ತಿ ನೀಡುವಾಗ ಎಲ್ಲರೂ ಎದ್ದು ಹೋಗಿರುತ್ತಾರೆ. ಎಲ್ಲರೂ ಇದ್ದಾಗಲೇ ಕನ್ನಡಿಗರಿಗೂ ಕರೆದು ಅವಾರ್ಡ್ ಕೊಡಿ ಎಂದು ವೇದಿಕೆಯ ಮೇಲೆಯೇ ನಟ ದುನಿಯಾ ವಿಜಯ್ ಗರಂ ಆಗಿದ್ದಾರೆ. ಇದನ್ನೂ ಓದಿ: 60 ಕೋಟಿ ವಂಚನೆ ಕೇಸ್; ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ವಿರುದ್ಧ ಲುಕ್ ಔಟ್ ನೋಟಿಸ್
Context yenu ??#SIIMA2025 #DuniyaVijay pic.twitter.com/fHG3ICWQKZ
— RAJA KRISHNAPPA BAIRYAᵀᵒˣᶦᶜ ¹⁹ ⁰³ ²⁶ (@RKBTweetss) September 6, 2025
ಮುಂದುವರೆದು ಇದೇ ರೀತಿ ಪುನರಾವರ್ತನೆ ಮಾಡಿದರೆ ನಾವ್ಯಾರು ಈ ಕಾರ್ಯಕ್ರಮಕ್ಕೆ ಬರುವುದಿಲ್ಲ ಎನ್ನುವ ಖಡಕ್ ಸಂದೇಶವನ್ನ ರವಾನಿಸಿದ್ದಾರೆ. ಇದನ್ನೂ ಓದಿ: ಹಿಂದೆ ಜಾಗ ಮಾರಾಟ ಮಾಡಿದಾಗ ಉಲ್ಲಂಘನೆಯಾಗಿರಲಿಲ್ಲ, ಈಗ ಹೇಗೆ ನಿಯಮ ಉಲ್ಲಂಘನೆಯಾಗುತ್ತೆ – ಬಾಲಣ್ಣನ ಪುತ್ರಿ ಸವಾಲು
ಪ್ರತಿ ಬಾರಿ ಕನ್ನಡವನ್ನ ಕೆಳಗಿಳಿಸಲಾಗುತ್ತದೆ. ಬೇರೆ ಭಾಷೆಯ ಯಾವ ಸ್ಟಾರ್ ಇಲ್ಲದಿದ್ದಾಗ ನಮ್ಮನ್ನ ವೇದಿಕೆಗೆ ಕರೆಯುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ. ದುನಿಯಾ ವಿಜಯ್ ಕನ್ನಡಪರ ಗಟ್ಟಿಧ್ವನಿಗೆ ದುಬೈ ಕನ್ನಡಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ದುನಿಯಾ ವಿಜಯ್ ನಂತರ ಕಿಚ್ಚ ಸುದೀಪ್‌ಗೆ (Sudeep) ಪ್ರಶಸ್ತಿ ನೀಡಿದ ಸಂದರ್ಭದಲ್ಲಿ ಅಲ್ಲಿ ದೊಡ್ಡ ಸ್ಟಾರ್‌ಗಳು ಇರಲಿಲ್ಲ. ಸುದೀಪ್ ಪರವಾಗಿ ವಿ.ನಾಗೇಂದ್ರ ಪ್ರಸಾದ್ ಪ್ರಶಸ್ತಿ ಸ್ವೀಕರಿಸಿದಾಗಲೂ ಕಡಿಮೆ ಸಂಖ್ಯೆಯ ಪ್ರೇಕ್ಷಕರಿದ್ದರು.