ಬೆಂಗಳೂರು: ದೇಶಾದ್ಯಂತ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಭ್ರಮ ಮನೆಮಾಡಿದೆ. ಎಲ್ಲೆಲ್ಲೂ ಕೇಸರಿ, ಬಿಳಿ, ಹಸಿರಿನಿಂದ ಕಂಗೊಳಿಸುವ ತಿರಂಗಾ ರಾರಾಜಿಸುತ್ತಿದೆ. ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜಗಳನ್ನು ಹಾರಿಸುವ ಮೂಲಕ ಜನರು ದೇಶಪ್ರೇಮ ಮೆರೆಯುತ್ತಿದ್ದಾರೆ. ಇಂತಹ ಹೊತ್ತಿನಲ್ಲೇ ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಶಾಲೆಗಳಿಂದ ದೇಶದ್ರೋಹದ ಕೆಲಸ ನಡೆದಿದೆ.
Advertisement
ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ನಿತ್ಯ ರಾಷ್ಟ್ರಧ್ವಜ ಹಾಡಿಸದೇ ಭಾರತಾಂಬೆಗೆ ಅಪಮಾನ ಮಾಡಲಾಗುತ್ತಿದೆ. ದೇಶದ್ರೋಹಿ ಶಾಲೆಗಳ ವಿರುದ್ಧ ಶಿಕ್ಷಣ ಇಲಾಖೆಗೆ ದೂರು ನೀಡಲಾಗಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಕೇವಲ ತ್ರಿವರ್ಣ ಧ್ವಜ ಹಾರಿಸುವುದರಿಂದ ನಾವು ದೇಶಭಕ್ತರಾಗುವುದಿಲ್ಲ: ಉದ್ಧವ್ ಠಾಕ್ರೆ ಟಾಂಗ್
Advertisement
ಬೆಂಗಳೂರಿನಲ್ಲಿ ರಾಷ್ಟ್ರಗೀತೆ ಹಾಡಿಸದ ಮೂರು ಖಾಸಗಿ ಶಾಲೆಗಳಿಗೆ ಉತ್ತರ ಕೇಳಿ ಶಿಕ್ಷಣ ಇಲಾಖೆಯಿಂದ ನೋಟೀಸ್ ಕಳುಹಿಸಲಾಗಿದೆ. ಇದಕ್ಕೆ ಇಲ್ಲ ಸಲ್ಲದ ಕಾರಣ ನೀಡುತ್ತಿರುವ ಶಾಲಾ ಮುಖ್ಯಸ್ಥರು, ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಜಾಗದ ಕೊರತೆ ಇರುವುದರಿಂದ ಪ್ರತಿನಿತ್ಯ ರಾಷ್ಟ್ರಗೀತೆ ಹಾಡಿಸಿಲ್ಲ ಎಂದು ಹೇಳಿವೆ.
Advertisement
Advertisement
ಇದಕ್ಕೆ ಖಡಕ್ ಸೂಚನೆ ನೀಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಇನ್ಮುಂದೆ ಎಲ್ಲ ಖಾಸಗಿ ಶಾಲೆಗಳಲ್ಲೂ ನಿತ್ಯ ರಾಷ್ಟ್ರಗೀತೆಯನ್ನು ಕಡ್ಡಾಯವಾಗಿ ಹಾಡಿಸುವಂತೆ ಸುತ್ತೋಲೆ ಹೊರಡಿಸಲು ಆದೇಶಿಸಿದ್ದಾರೆ. ಸರ್ಕಾರಿ, ಅನುದಾನಿತ, ಅನುದಾನ ರಹಿತ, ಖಾಸಗಿ ಶಾಲೆಗಳಿಗೂ ಈ ಆದೇಶ ಅನ್ವಯವಾಗಲಿದೆ ಎಂದು ಹೇಳಿದ್ದಾರೆ.