CricketLatestLeading NewsMain PostSports

ಐಪಿಎಲ್‍ನಲ್ಲಿ ಕಳ್ಳಾಟ ನಡೆದಿದೆ, ಪಿಐಎಲ್‍ನ ಅಗತ್ಯ ಬರಬಹುದು: ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ಟಾಟಾ ಐಪಿಎಲ್‍ನಲ್ಲಿ ಕಳ್ಳಾಟ ನಡೆದಿದೆ ಎಂಬ ಮಾಹಿತಿ ಗುಪ್ತಚರ ಸಂಸ್ಥೆಗಳಿಂದ ಹರಿದಾಡುತ್ತಿದೆ. ಅಮಿತಾ ಶಾ ಪುತ್ರ ಜಯ್ ಶಾ ಬಿಸಿಸಿಐನ ಸರ್ವಾಧಿಕಾರಿಯಾಗಿರುವುದರಿಂದ ಈ ಬಗ್ಗೆ ಸರ್ಕಾರ ತನಿಖೆ ನಡೆಸುವುದು ಅನುಮಾನ ಹಾಗಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸುವ ಅಗತ್ಯ ಬರಬಹುದು ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಬಾಂಬ್ ಸಿಡಿಸಿದ್ದಾರೆ.

ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿರುವ ಅವರು, ಟಾಟಾ ಐಪಿಎಲ್ ಕ್ರಿಕೆಟ್ ಫಲಿತಾಂಶ ಗಮನಿಸಿದ ಬಳಿಕ ಮೋಸದಾಟ ನಡೆದಿದೆ ಎಂದು ಗುಪ್ತಚರ ಸಂಸ್ಥೆಗಳಲ್ಲಿ ವ್ಯಾಪಕವಾದ ಚರ್ಚೆ ನಡೆದಿದೆ. ಅಮಿತ್ ಶಾ ಅವರ ಪುತ್ರ ಬಿಸಿಸಿಐನ ಸರ್ವಾಧಿಕಾರಿಯಾಗಿರುವುದರಿಂದ ಸರ್ಕಾರ ಈ ಬಗ್ಗೆ ತನಿಖೆ ನಡೆಸಲು ಮುಂದಾಗುವುದು ಅನುಮಾನ. ಹಾಗಾಗಿ ಪಿಐಎಲ್‍ನ ಅಗತ್ಯ ಬರಬಹುದು ಎಂದು ಮಾರ್ಮಿಕವಾಗಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಕುತೂಹಲಕ್ಕೆ ತೆರೆ ಎಳೆದ ಗಂಗೂಲಿ – ಮಾರ್ಗದರ್ಶಕರ ರಾಯಭಾರಿಯಾದ ದಾದಾ

15ನೇ ಆವೃತ್ತಿ ಐಪಿಎಲ್ ಕೆಲದಿನಗಳ ಹಿಂದೆ ಮುಕ್ತಾಯಗೊಂಡಿತ್ತು. ಫೈನಲ್‍ನಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಬಗ್ಗುಬಡಿದು ಗುಜರಾತ್ ಟೈಟಾನ್ಸ್ ತಂಡ ಚಾಂಪಿಯನ್ ಆಗಿತ್ತು. ಫೈನಲ್ ಪಂದ್ಯ ಗುಜರಾತ್‍ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದಿತ್ತು. ಫೈನಲ್ ಪಂದ್ಯ ವೀಕ್ಷಣೆಗಾಗಿ ಸ್ಟೇಡಿಯಂಗೆ ಅಮಿತ್ ಶಾ ದಂಪತಿ ಆಗಮಿಸಿದ್ದರು. ಇದನ್ನೂ ಓದಿ: ಟೀಂ ಇಂಡಿಯಾದ ಈ ಬೌಲರ್ ದಕ್ಷಿಣ ಆಫ್ರಿಕಾಗೆ ಕಂಟಕ

Leave a Reply

Your email address will not be published.

Back to top button