ಚೆನ್ನೈ: ಭಾರೀ ಮಳೆಯಿಂದಾಗಿ ಚೆನ್ನೈ ಸೇರಿದಂತೆ ತಮಿಳುನಾಡಿನ ಅನೇಕ ಪ್ರದೇಶಗಳು ಜಲಾವೃತಗೊಂಡಿದೆ. ಕಳೆದ ಕೆಲವು ದಿನಗಳಿಂದ ತಮಿಳುನಾಡಿನ ಹಲವು ಪ್ರದೇಶಗಳಲ್ಲಿ ಮನ್ಸೂನ್ ಮಳೆಯಾಗುತ್ತಿದೆ. ಇದರಿಂದಾಗಿ ಸಾಮಾನ್ಯಕ್ಕಿಂತ ಸುಮಾರು ಶೇ.75ರಷ್ಟು ಮಳೆ ದಾಖಲಾಗಿದೆ.
Tamil Nadu: Heavy rainfall lashes Rameshwaram; Red alert issued for the coastal districts of the State
A Low-Pressure Area is likely to form over the south Andaman Sea around 29th November, says IMD pic.twitter.com/6hihXPV910
— ANI (@ANI) November 28, 2021
Advertisement
ಜಲಾವೃತ ಪ್ರದೇಶಗಳಿಗೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಮಾತನಾಡಿದ ಅವರು, ಸ್ಥಳೀಯ ಅಧಿಕಾರಿಗಳು ಪೊಲೀಸರು, ವಿವಿಧ ಇಲಾಖೆಯ ನೌಕರರು ಜನರ ರಕ್ಷಣೆಗೆ ಶ್ರಮಿಸುತ್ತಿದ್ದಾರೆ. ಇದರಿಂದಾಗಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಇವರ ಕಾರ್ಯಕ್ಕೆ ಶ್ಲಾಘನೀಯ ಎಂದರು. ಸಂತ್ರಸ್ತರಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದರು.
Advertisement
Advertisement
ಸತತ ಮಳೆಯಿಂದಾಗಿ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಚೆಂಗಲ್‍ಪೇಟ್, ಕಡಲೂರು, ನಾಗಪಟ್ಟಿಣಂ, ಪುದುಕೋಟೆ, ಟುಟಿಕೋರಿನ್, ಅರಿಯಾಲೂರ್, ಪೆರುಂಬಲೂರ್, ದಿಂಡಿಗಲ್, ರಾಣಿಪೇಟೆ, ತಿರುಪತ್ತೂರ್, ತಿರುವಣ್ಣಾಮಲೈ ಮತ್ತು ವೆಲ್ಲೂರು ಸೇರಿದಂತೆ ತಮಿಳುನಾಡಿನ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಪತ್ನಿ ಶೀಲ ಶಂಕಿಸಿ ಪೆಟ್ರೋಲ್ ಸುರಿದು ಕೊಂದಿದ್ದ ಪಾಪಿ ಪತಿ ಕೊನೆಗೆ ಶವವಾಗಿ ಪತ್ತೆ
Advertisement
#WATCH | Tamil Nadu: Severe waterlogging affects various parts of Chennai; water pumping underway in residential areas
Visuals from K. K. Nagar pic.twitter.com/YDorVTiijR
— ANI (@ANI) November 28, 2021
ಕಳೆದ 200 ವರ್ಷಗಳಲ್ಲಿ ಚೆನ್ನೈನಲ್ಲಿ ಒಂದೇ ತಿಂಗಳಲ್ಲಿ ನಾಲ್ಕನೇ ಬಾರಿಗೆ ಅಧಿಕ ಮಳೆ ದಾಖಲಾಗಿದೆ ಎಂದು ತಜ್ಞರು ಟ್ವಿಟ್ಟರ್‍ನಲ್ಲಿ ಹಂಚಿಕೊಂಡಿದ್ದಾರೆ. ಚೆನ್ನೈನ ಆರು ಪರಿಹಾರ ಕೇಂದ್ರಗಳಲ್ಲಿ 653 ಜನರನ್ನು ಇರಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.