ಇಟಾನಗರ: ಅರುಣಾಚಲ ಪ್ರದೇಶದಲ್ಲಿ ನಾಪತ್ತೆಯಾಗಿರುವ ಇಬ್ಬರು ಭಾರತೀಯ ಸೇನಾ ಸಿಬ್ಬಂದಿಯ ಪತ್ತೆಗೆ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ಹರೇಂದ್ರ ನೇಗಿ ಮತ್ತು ಪ್ರಕಾಶ್ ಸಿಂಗ್ ರಾಣಾ ಮೇ 28 ರಂದು ನಾಪತ್ತೆಯಾಗಿದ್ದರು. ಉತ್ತರಾಖಂಡದ 7ನೇ ಗರ್ವಾಲ್ ರೈಫಲ್ಸ್ ಸೈನಿಕರಾದ ಇವರನ್ನು ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯ ಮುಂಚೂಣಿ ಪ್ರದೇಶಗಳಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.
ನಡೆದಿದ್ದೇನು?
ನಾಯಕ್ ಪ್ರಕಾಶ್ ಸಿಂಗ್ ಮತ್ತು ಲ್ಯಾನ್ಸ್ ನಾಯಕ್ ಹರೇಂದರ್ ಸಿಂಗ್ ಅವರು ತಮ್ಮ ಪೋಸ್ಟ್‌ಗೆ ಸಮೀಪದಲ್ಲಿ ವೇಗವಾಗಿ ಹರಿಯುತ್ತಿದ್ದ ನದಿಗೆ ಆಕಸ್ಮಿಕವಾಗಿ ಬಿದ್ದಿದ್ದಾರೆ ಎನ್ನಲಾಗುತ್ತಿದೆ. ಸುದ್ದಿ ತಿಳಿದ ತಕ್ಷಣ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದು, ವ್ಯಾಪಕವಾದ ಶೋಧ ಕಾರ್ಯಾಚರಣೆ ಮಾಡಲಾಗುತ್ತಿದೆ. ಆದರೆ ಎಷ್ಟೇ ಹುಡುಕಿದರು ಸೈನಿಕರನ್ನು ಪತ್ತೆ ಮಾಡುವಲ್ಲಿ ಯಾವುದೇ ಯಶಸ್ಸು ಕಂಡುಬಂದಿಲ್ಲ. ಕಳೆದ ಎರಡು ವಾರಗಳಿಂದ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಇದನ್ನೂ ಓದಿ: ED ನಿಯಂತ್ರಣವನ್ನ ನಮಗೆ ಕೊಟ್ರೆ ಫಡ್ನವಿಸ್ ಕೂಡ ನಮ್ಮ ಸೇನೆಗೆ ಮತ ಹಾಕ್ತಾರೆ: ಸಂಜಯ್
ಜೂನ್ 11(ಶನಿವಾರ) ರಂದು, ಹರೇಂದ್ರ ನೇಗಿ ಅವರ ಪತ್ನಿ ಪೂನಂ ನೇಗಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಇಬ್ಬರೂ ಸೈನಿಕರು ನದಿಯ ಬಳಿ ಹೋಗಿರುವುದು ಯಾರಿಗೂ ತಿಳಿದಿಲ್ಲ. ಇದನ್ನು ನಂಬಲು ನನಗೆ ಕಷ್ಟವಾಗುತ್ತದೆ ಎಂದು ಅಚ್ಚರಿ ವ್ಯಕ್ತಪಡಿಸಿದರು.