-ಇವತ್ತು 18 ದೇಶಗಳಲ್ಲಿ ಹೊಸ ತಳಿ ಪತ್ತೆ ಆಗಿದೆ
ಬೆಂಗಳೂರು: ಬೇರೆ ಬೇರೆ ದೇಶದಲ್ಲಿ ಹೊಸ ತಳಿ ಬಗ್ಗೆ ಆಗಿರೋ ಪರಿಸ್ಥಿತಿ ಅವಲೋಕನ ಮಾಡುತ್ತಿದ್ದೇವೆ. ಓಮಿಕ್ರಾನ್ ಕೊರೊನಾ ರೂಪಾಂತರ ವೈರಸ್ ತೀವ್ರ ಆದರೆ ಚಟುವಟಿಕೆಗಳನ್ನು ನಿರ್ಬಂಧ ಮಾಡುವ ವಿಚಾರವಾಗಿ ಇಂದು ಚರ್ಚೆ ಮಾಡಲಾಗುತ್ತದೆ ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೊಸ ಪ್ರಭೇದ ತೀವ್ರ ಆದರೆ ಚಟುವಟಿಕೆಗಳ ನಿರ್ಬಂಧಕ್ಕೆ ನಿರ್ಧಾರ ಮಾಡೋ ಬಗ್ಗೆ ಚರ್ಚೆ ಆಗುತ್ತದೆ. ವಿಶ್ವಸಂಸ್ಥೆ ಕೂಡಾ ಡಿಸೆಂಬರ್ 1,2ರಂದು ವರದಿ ನೀಡುತ್ತದೆ. ಆ ಮೇಲೆ ಮುಂದಿನ ತೀರ್ಮಾನ ಮಾಡುತ್ತೇವೆ. ಅಲ್ಲಿಯವರೆಗೂ ಯಾವುದೇ ಚಟುವಟಿಕೆ ಮೇಲೆ ನಿರ್ಬಂಧ ಇಲ್ಲ. ಆರಂಭಿಕ ಹಂತದ ಮಾರ್ಗಸೂಚಿಗಳ ಜಾರಿಗೆ ಇವತ್ತು ಸಭೆ ಮಾಡುತ್ತೇವೆ. ಇವತ್ತಿನ ಸಭೆ ಬಳಿಕ ಸಿಎಂ ಜೊತೆ ಚರ್ಚೆ ಮಾಡಿ ಮುಂದಿನ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಗುರುದ್ವಾರದಲ್ಲಿ ಫೋಟೋಶೂಟ್ – ಮಾಡೆಲ್ ವಿರುದ್ಧ ನೆಟ್ಟಿಗರು ಗರಂ
Advertisement
Advertisement
ವಿದೇಶದಿಂದ ಬಂದ ಇಬ್ಬರಿಗೆ ಮಾತ್ರ ಸೋಂಕು ಬಂದಿದೆ. ಅವರ ಸ್ಯಾಂಪಲ್ ಜಿನೋಮಿಕ್ ಸೀಕ್ವೆನ್ಸ್ ಗೆ ಕಳಿಸಲಾಗಿದೆ. ಇನ್ನೆರಡು ದಿನಗಳಲ್ಲಿ ವರದಿ ಬರುತ್ತದೆ. ಲಾಕ್‍ಡೌನ್ ಮಾಡುವ ಪ್ರಸ್ತಾಪ ನಮ್ಮ ಮುಂದೆ ಇಲ್ಲ. ಬೂಸ್ಟರ್ ಡೋಸ್ ಕೊಡೊ ಬಗ್ಗೆ ನಾವು ತೀರ್ಮಾನ ಮಾಡಲು ಸಾಧ್ಯವಿಲ್ಲ. ಇದನ್ನ ಕೇಂದ್ರ ಸರ್ಕಾರ ಮತ್ತು ICMR ತೀರ್ಮಾನ ಮಾಡಬೇಕು. ನಾವೇ ನಿರ್ಧಾರ ಮಾಡಿ ಬೂಸ್ಟರ್ ಡೋಸ್ ಕೊಡಲು ಸಾಧ್ಯವಿಲ್ಲ.ಕೇಂದ್ರ ಸರ್ಕಾರ ತೆಗೆದುಕೊಳ್ಳೋ ತೀರ್ಮಾನ ಮೇಲೆ ಬೂಸ್ಟರ್ ಡೋಸ್ ನೀಡೋ ಬಗ್ಗೆ ನಾವು ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: 62 ನಿವಾಸಿಗಳಿಗೆ ಕೋವಿಡ್ ಪಾಸಿಟಿವ್ – ಕಂಟೈನ್ಮೆಂಟ್ ಝೋನ್ ಆಯ್ತು ವೃದ್ಧಾಶ್ರಮ
Advertisement
Advertisement
ಈಗಾಗಲೇ ನಿನ್ನೆ ಒಂದಷ್ಟು ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಮತ್ತಷ್ಟು ಬದಲಾವಣೆ ತರಬೇಕಾ ಅಂತ ಇವತ್ತಿನ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡ್ತೀವಿ. ತಜ್ಞರ ಜೊತೆ ಚರ್ಚೆ ಬಳಿಕ ಏನಾದ್ರು ಮಾರ್ಗಸೂಚಿಯಲ್ಲಿ ಬದಲಾವಣೆ ತರಬೇಕಾದ್ರೆ ತರುತ್ತೇವೆ. WHO ಹೊಸ ತಳಿ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಡಿಸೆಂಬರ್ 1 ಅಥವಾ 2ರ ಒಳಗೆ ವಿಶ್ವ ಆರೋಗ್ಯ ಸಂಸ್ಥೆ ನಮಗೆ ಮಾರ್ಗಸೂಚಿ ಕೊಡಬಹುದು. ಆದಾದ ಬಳಿಕ ನಾವು ರಾಜ್ಯದಲ್ಲಿ ಯಾವ ಕ್ರಮ ತೆಗೆದುಕೊಳ್ಳಬೇಕು ಅಂತ ನಿರ್ಧಾರ ಮಾಡುತ್ತೇವೆ. ಅಲ್ಲಿಯವರೆಗೂ ಯಾವುದೇ ಚಟುವಟಿಕೆಗಳಿಗೆ ನಿರ್ಬಂಧ ಹಾಕೋದಿಲ್ಲ. ಸದ್ಯಕ್ಕೆ ಯಾವುದೇ ಚಟುವಟಿಕೆಗಳ ಮೇಲೆ ನಿರ್ಬಂಧ ಇಲ್ಲ ಎಂದು ಸಚಿವ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ಮುಂದಿನ ಎರಡು-ಮೂರು ದಿನಗಳಲ್ಲಿ ರಿಸ್ಕ್ ಭತ್ಯೆಯನ್ನು ಎಲ್ಲಾ ವೈದ್ಯರಿಗೂ ಪಾವತಿಸಲಾಗುವುದು. ಆದ್ದರಿಂದ ಈ ಸಂದರ್ಭದಲ್ಲಿ ಪ್ರತಿಭಟನೆ ಹಿಂಪಡೆದು ಕರ್ತವ್ಯಕ್ಕೆ ಮರಳಬೇಕು ಎಂದು ಕೋರುತ್ತೇನೆ. (2/2)
— Dr Sudhakar K (@mla_sudhakar) November 29, 2021
ಈಗಾಗಲೇ ಸಿಎಂ ಕೂಡಾ ಲಾಕ್‍ಡೌನ್ ಬಗ್ಗೆ ಹೇಳಿದ್ದಾರೆ. ಶಾಲಾ-ಕಾಲೇಜುಗಳ ಬಗ್ಗೆಯೂ ಸಿಎಂ ಸ್ಪಷ್ಟನೆ ನೀಡಿದ್ದಾರೆ. ಹೀಗಾಗಿ ಯಾವುದೇ ನಿರ್ಬಂಧ ಇರೋದಿಲ್ಲ. ತಾಂತ್ರಿಕ ಸಲಹಾ ಸಮಿತಿ ಸದಸ್ಯರ ನಿಡೋ ಸಲಹೆ ಮೇಲೆ ಮುಂದಿನ ಕ್ರಮ ತಗೋತೀವಿ. ರಾಜ್ಯದಲ್ಲಿ ಸದ್ಯಕ್ಕೆ ಯಾವುದೇ ಚಟುವಟಿಕೆಗಳ ಮೇಲೆ ನಿರ್ಬಂಧ ಇಲ್ಲ. ವಿಶ್ವ ಆರೋಗ್ಯ ಸಂಸ್ಥೆ ಮಾರ್ಗಸೂಚಿ ಕೊಡೋ ವರೆಗೂ ಯಾವುದೇ ಚಟುವಟಿಕೆಗಳ ಮೇಲೆ ನಿರ್ಬಂಧ ಹಾಕೋದಿಲ್ಲ. ಇವತ್ತಿನ ಸಭೆಯಲ್ಲಿ ತಜ್ಞರ ಜೊತೆ ಚರ್ಚೆ ಮಾಡುತ್ತೇವೆ. ಪ್ರಾರಂಭಿಕ ಹಂತದ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವ ಬಗ್ಗೆ ಇವತ್ತಿನ ಸಭೆಯಲ್ಲಿ ಚರ್ಚೆ. ಬಳಿಕ ಸಿಎಂ ಜೊತೆ ಚರ್ಚೆ ಮಾಡಿ ಅಂತಿಮ ನಿರ್ಧಾರ ಮಾಡುತ್ತೇವೆ ಎಂದಿದ್ದಾರೆ.