ಫೇಸ್‌ಬುಕ್‌ನಲ್ಲಿ ವಿದಾಯದ ಪೋಸ್ಟ್ ಹಾಕಿ ಅಂತರ್ಜಾತಿ ವಿವಾಹವಾಗಿದ್ದ ಜೋಡಿ ಆತ್ಮಹತ್ಯೆ

Public TV
1 Min Read
Bihar Couples Suicide

ಪಾಟ್ನಾ: ಮದುವೆಯಾದ 8 ತಿಂಗಳಿಗೆ ಅಂತರ್ಜಾತಿ ಮದುವೆಯಾಗಿದ್ದ ಜೋಡಿ ಫೇಸ್‌ಬುಕ್‌ನಲ್ಲಿ (Facebook) ವಿದಾಯದ ಪೋಸ್ಟ್ ಹಾಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿಹಾರದ (Bihar)  ಬೇಗುಸರಾಯ್‌ನಲ್ಲಿ ನಡೆದಿದೆ.

ಬಹದ್ದೂರ್‌ಪುರ ಗ್ರಾಮದ ಶುಭಂ ಕುಮಾರ್ (19) ಹಾಗೂ ಆತನ ಪತ್ನಿ ಮುನ್ನಿ ಕುಮಾರಿ (18) ಮೃತರೆಂದು ಗುರುತಿಸಲಾಗಿದೆ. ಕೆಲ ವರ್ಷದ ಹಿಂದೆ ಇನ್ಸ್ಟಾಗ್ರಾಂ ಮೂಲಕ ಇವರಿಬ್ಬರ ಪರಿಚಯವಾಗಿತ್ತು. ಈ ಪರಿಚಯ ಪ್ರೇಮಕ್ಕೆ ತಿರುಗಿ, 2024ರ ಅಕ್ಟೋಬರ್‌ನಲ್ಲಿ ಮನೆಯವರ ವಿರೋಧದ ನಡುವೆಯೇ ಇಬ್ಬರು ಓಡಿಹೋಗಿ ವಿವಾಹವಾಗಿದ್ದರು. ಇದನ್ನೂ ಓದಿ: Tumakuru | ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು

ಮದುವೆಯ ನಂತರ, ಮುನ್ನಿ ಮನೆಯವರು ಇದನ್ನು ವಿರೋಧಿಸಿದ್ದರು. ಅಲ್ಲದೇ ರಾಜಿ ಪಂಚಾಯಿತಿ ನಡೆಸಿ, ಯುವತಿಯ ಸಿಂಧೂರವನ್ನು ಅಳಿಸಿ, ಆಕೆಯನ್ನು ಮನೆಯವರು ಕರೆದುಕೊಂಡು ಹೋಗಿದ್ದರು. ಬಳಿಕ ಡಿಸೆಂಬರ್‌ನಲ್ಲಿ ಮತ್ತೆ ಒಂದಾಗಿ, ಒಟ್ಟಿಗೆ ವಾಸಿಸಲು ಪ್ರಾರಂಭಿಸಿದ್ದರು. ಇದನ್ನೂ ಓದಿ: ಪಿಎಸ್‌ಐ ಪರೀಕ್ಷೆ ಅಕ್ರಮದ ಕಿಂಗ್‌ಪಿನ್ ಆರ್‌ಡಿ ಪಾಟೀಲ್‌ಗೆ ಜಾಮೀನು ನಿರಾಕರಿಸಿದ ಸುಪ್ರೀಂ

ದಂಪತಿಯ ಸಂಬಂಧಿಕರೊಬ್ಬರು ಮಗುವಿನ ಚಿಕಿತ್ಸೆಗೆ ಆಸ್ಪತ್ರೆಗೆ ತೆರಳಿ, ಶುಭಂ ಮನೆಗೆ ಬಂದಿದ್ದರು. ಈ ವೇಳೆ ಅವರು ಎಷ್ಟೇ ಬಾಗಿಲು ಬಡಿದರೂ, ತೆರೆಯದಿದ್ದಾಗ ಕಿಟಕಿಯಲ್ಲಿ ಇಣುಕಿ ನೋಡಿದಾಗ ಶುಭಂ ನೇಣು ಬಿಗಿದುಕೊಂಡಿದ್ದ. ಆತನ ಪತ್ನಿ ಮುನ್ನಿ ಹಾಸಿಗೆಯ ಮೇಲೆ ನಿರ್ಜೀವವಾಗಿ ಬಿದ್ದಿದ್ದದನ್ನು ಗಮನಿಸಿದ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದನ್ನೂ ಓದಿ: ನಟ ಪ್ರಥಮ್‌ಗೆ ಜೀವಬೆದರಿಕೆ ಕೇಸ್‌ – ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಇಬ್ಬರ ವಿರುದ್ಧ FIR

ಈ ದುಡುಕಿನ ನಿರ್ಧಾರ ತೆಗೆದುಕೊಳ್ಳುವ ಮೊದಲು ಶುಭಂ, ಇಬ್ಬರ ಫೋಟೋವನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿ `ಅಲ್ವಿದಾ’ ಅಂದರೆ ಗುಡ್‌ಬೈ ಎಂದು ಬರೆದುಕೊಂಡಿದ್ದ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಳಿಕ ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿ, ಬಹದ್ದೂರ್‌ಪುರ ಗ್ರಾಮದಲ್ಲಿ ವಿವಾಹಿತ ದಂಪತಿಗಳಾದ ಶುಭಂ ಕುಮಾರ್ ಮತ್ತು ಮುನ್ನಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಸಾವಿಗೆ ನಿಖರ ಕಾರಣಗಳು ತಿಳಿದುಬಂದಿಲ್ಲ. ಘಟನೆ ಸಂಬಂಧ ತನಿಖೆ ಕೈಗೊಂಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

Share This Article