ಚಾಮರಾಜನಗರ: ಅಂತರ್ಜಾತಿ ವಿವಾಹವಾದ (Inter Caste Marriage) ಜೋಡಿಯ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ (Social exclusion) ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಳ್ಳೇಗಾಲದ (Kollegala) ಕುಣಗಳ್ಳಿಯ (Kunagalli) 12 ಮಂದಿಯನ್ನು ಬಂಧಿಸಲಾಗಿದೆ.
ಗೋವಿಂದರಾಜು ಎಂಬ ಯುವಕ ದಲಿತ ಯುವತಿಯನ್ನು ಮದುವೆಯಾಗಿದ್ದ. ಇದನ್ನು ವಿರೋಧಿಸಿ ಉಪ್ಪಾರ (Uppara) ಸಮುದಾಯದ ಮುಖಂಡರು ಗೋವಿಂದರಾಜು ಕುಟುಂಬಕ್ಕೆ 6 ಲಕ್ಷ ರೂ. ದಂಡ ವಿಧಿಸಿ ಸಾಮಾಜಿಕ ಬಹಿಷ್ಕಾರ ಹಾಕಿದ್ದರು. ಇದನ್ನೂ ಓದಿ: ಬಿಸಿ ಟೀ ತಂದುಕೊಡದ್ದಕ್ಕೆ ಗದರಿದ ಅತ್ತೆ- ರಾಡ್‍ನಿಂದ ಹೊಡೆದು ಕೊಲೆಗೈದ ಸೊಸೆ
Advertisement
Advertisement
ಘಟನೆಗೆ ಸಂಬಂಧಿಸಿದಂತೆ ಅಗರ-ಮಾಂಬಳ್ಳಿ (Agara-Mamballi) ಪೊಲೀಸ್ ಠಾಣೆಯಲ್ಲಿ 15 ಮಂದಿ ವಿರುದ್ಧ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ 1860ರ ಅಡಿ ಪ್ರಕರಣ ದಾಖಲಾಗಿತ್ತು. ಮಹಿಳೆ ಸೇರಿದಂತೆ ಇನ್ನೂ ಮೂವರು ನಾಪತ್ತೆಯಾಗಿದ್ದಾರೆ.
Advertisement
ನೊಂದ ಕುಟುಂಬಕ್ಕೆ ಸಮಾಜ ಕಲ್ಯಾಣ ಇಲಾಖೆಯಿಂದ 1 ಲಕ್ಷ ರೂ. ಪರಿಹಾರ ನೀಡಲಾಗಿದೆ. ಇದನ್ನೂ ಓದಿ: ಸುಳ್ಳು ವಯಸ್ಸಿನ ದಾಖಲೆ ಆರೋಪ ಶಾಸಕ ಕೆ.ಜಿ ಬೋಪಯ್ಯ ವಿರುದ್ಧ ದೂರು