ವಿಜಯನಗರ: ಅಂತರ ಜಿಲ್ಲಾ ಕಳ್ಳನೊಬ್ಬನನ್ನು ಜಿಲ್ಲೆಯ ಕೂಡ್ಲಿಗಿ ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಹೆಚ್. ಹನುಮಂತ (23) ಬಂಧಿತ ಆರೋಪಿ. ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಕಳೆದ ಒಂದು ತಿಂಗಳಲ್ಲಿ ಎರಡು ಮನೆ ಕಳ್ಳತನವಾಗಿದ್ದು, ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಲು ವಿಶೇಷ ತಂಡವೊಂದನ್ನು ರಚಸಿ, ಆರೋಪಿಯ ಪತ್ತೆಗೆ ಜಾಲ ಬೀಸಿದ್ದರು. ಇದನ್ನೂ ಓದಿ: ಪೊಲೀಸ್ ಕಸ್ಟಡಿಯಲ್ಲಿ ಮಹಿಳೆಗೆ ಚಿತ್ರಹಿಂಸೆ – 4 ಪೊಲೀಸ್ ಅಧಿಕಾರಿಗಳು ಅಮಾನತು
Advertisement
Advertisement
ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ಕೂಡ್ಲಿಗಿ ಪಟ್ಟಣದಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೂಡ್ಲಿಗಿ ಪಟ್ಟಣದಲ್ಲಿ ಒಟ್ಟು ಮೂರು ಮನೆಗಳನ್ನು ಕಳ್ಳತನ ಮಾಡಿದ್ದು ಬೆಳಕಿಗೆ ಬಂದಿದೆ. ದನ್ನೂ ಓದಿ: ನಟಿ ಚೇತನಾ ರಾಜ್ ಸಾವು ಪ್ರಕರಣ – ಆಸ್ಪತ್ರೆಗೆ ಬೀಗ, ವೈದ್ಯರಿಗೆ ನೋಟಿಸ್
Advertisement
Advertisement
ಆರೋಪಿಯಿಂದ ಒಟ್ಟು 93 ಗ್ರಾಂ. ಬಂಗಾರದ ಆಭರಣಗಳು, 103 ಗ್ರಾಂ. ಬೆಳ್ಳಿಯ ಆಭರಣಗಳು ಮತ್ತು 2,600 ರೂ. ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು ವಶಪಡಿಸಿಕೊಂಡ ಕಳುವುಗೈದ ಮೌಲ್ಯ 4,46,090 ರೂಪಾಯಿ ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಆರೋಪಿಯು ಸಿರುಗುಪ್ಪ ಠಾಣೆಯ ಪ್ರಕರಣದಲ್ಲಿ ಸಹ ಭಾಗಿಯಾಗಿರುವ ಬಗ್ಗೆ ತನಿಖೆಯಲ್ಲಿ ತಿಳಿದು ಬಂದಿದೆ. ತನಿಖೆ ನಂತರ ಆರೋಪಿತನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.