ಬೆಂಗಳೂರು: 15 ವರ್ಷಗಳ ಬಳಿಕ ಕರ್ನಾಟಕ (Karnataka) ಹಾಗೂ ಆಂಧ್ರಪ್ರದೇಶ (Andhra Pradesh) ನಡುವೆ ಅಂತರ ರಾಜ್ಯ ಸಾರಿಗೆ ಸಂಚಾರಕ್ಕೆ ಕೆಎಸ್‌ಆರ್‌ಟಿಸಿ (KSRTC) ಒಪ್ಪಂದ ಮಾಡಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಗಳು ಆಂಧ್ರಪ್ರದೇಶದ ಮತ್ತಷ್ಟು ಭಾಗಗಳಿಗೆ ಕರ್ನಾಟಕದಿಂದ ಸಂಚಾರ ಆರಂಭಿಸಲಿದ್ದಾವೆ.
ಕರ್ನಾಟಕ ಹಾಗೂ ಆಂಧ್ರ ಪ್ರದೇಶ ರಾಜ್ಯಗಳ ನಡುವೆ ಇದುವರೆಗೆ ಒಂದು ಪ್ರಧಾನ ಅಂತರರಾಜ್ಯ ಸಾರಿಗೆ ಒಪ್ಪಂದ ಹಾಗೂ 8 ಪೂರಕ ಅಂತರರಾಜ್ಯ ಸಾರಿಗೆ ಒಪ್ಪಂದಗಳು ಏರ್ಪಟ್ಟಿತ್ತು. ಕರ್ನಾಟಕ ಹಾಗೂ ಆಂಧ್ರ ಪ್ರದೇಶ ರಾಜ್ಯಗಳ ನಡುವೆ 2008ರಲ್ಲಿ ಅಂತರರಾಜ್ಯ ಸಾರಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು.
Advertisement
Advertisement
ಇದೀಗ ಎರಡೂ ರಾಜ್ಯಗಳ ನಡುವೆ ಪ್ರಯಾಣಿಸುವ ಸಾರ್ವಜನಿಕ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗಿದೆ. ಕಾರಣ ಸಾರ್ವಜನಿಕ ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ ಮತ್ತು ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸಲು ಇಂದು ವಿಜಯವಾಡದಲ್ಲಿ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಾದಂತ ಅನ್ಬುಕುಮಾರ್ ವಿ ಹಾಗೂ ಆಂಧ್ರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದಂತ ಸಿಹೆಚ್. ಡಿ. ತಿರುಮಲ ರಾವ್ ಮತ್ತಷ್ಟು ಸಂಚಾರ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿದರು. ಇದನ್ನೂ ಓದಿ: ಕೂಡಲೇ ವಿದ್ಯುತ್ ದರ ಏರಿಸಿ – ಪಾಕ್‌ಗೆ ಐಎಂಎಫ್ ಶಾಕ್: PoK ಜನತೆಗೆ ನೀಡಿದ್ದ ಸಬ್ಸಿಡಿ ಬಂದ್
Advertisement
ಈ ಚರ್ಚೆಯ ಬಳಿಕ ಕರ್ನಾಟಕ ಹಾಗೂ ಆಂಧ್ರ ಪ್ರದೇಶ ಸರ್ಕಾರಗಳು ಮಾಡಿಕೊಳ್ಳಬೇಕಾದ ಪ್ರಸ್ತಾಪಿತ 9ನೇ ಪೂರಕ ಅಂತರರಾಜ್ಯ ಸಾರಿಗೆ ಒಪ್ಪಂದಕ್ಕೆ ರಾಜ್ಯ ಸಾರಿಗೆ ಸಂಸ್ಥೆಗಳ ಮಾರ್ಗಗಳನ್ನು ಅಂತಿಮಗೊಳಿಸಿ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಹೀಗಾಗಿ ಈ ಒಪ್ಪಂದದ ಅನ್ವಯ ಪ್ರತಿನಿತ್ಯ ಹೆಚ್ಚುವರಿ ಬಸ್ಸುಗಳನ್ನು ಎರಡು ರಾಜ್ಯಗಳಲ್ಲಿ ಕಾರ್ಯಾಚರಣೆ ಮಾಡಲಿವೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳು 69,321 ಕಿಲೋಮೀಟರ್ ಮತ್ತು ಆಂಧ್ರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆ ಬಸ್ಸುಗಳು 69,284 ಕಿಲೋಮೀಟರ್ ಕಾರ್ಯಚರಿಸಲಿದೆ.
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k