ಗಾಂಧಿನಗರ: ಹವಾಮಾನ ವೈಪರೀತ್ಯದ ಸಮಸ್ಯೆ ಭೂಮಿಯ ಅಸ್ತಿತ್ವಕ್ಕೆ ಧಕ್ಕೆ ತಂದಿದ್ದು, ಇದನ್ನು ಗಂಭೀರವಾಗಿ ಪರಿಗಣಿಸದಿದ್ದಲ್ಲಿ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಹೀಗಾಗೀ ನವೀಕರಿಸಬಹುದಾದ ಇಂಧನದಲ್ಲಿ (Renewable Energy) ಆಸಕ್ತಿ ತೋರಿಸುವುದು ಒಂದು ಆಯ್ಕೆಯಲ್ಲ ಅದು ಪ್ರಪಂಚದ ಅನಿವಾರ್ಯವಾಗಿದೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ (Jagadeep Dhankar) ಹೇಳಿದರು.
ನಾಲ್ಕನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಭೆಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಭೂಮಿಯನ್ನು ಉಳಿಸಲು, ನವೀಕರಿಸಬಹುದಾದ ಇಂಧನದಲ್ಲಿ ಹೂಡಿಕೆ ಮಾಡದೆ ನಮಗೆ ಬೇರೆ ದಾರಿಯಿಲ್ಲ ಮತ್ತು ಹವಾಮಾನ ಬದಲಾವಣೆಯ ಬೆದರಿಕೆಯನ್ನು ಎದುರಿಸಲು ನಾವು ಹಗಲಿರುಳು ಶ್ರಮಿಸಬೇಕಾಗಿದೆ ಎಂದರು. ಇದನ್ನೂ ಓದಿ: ಉದಯನಿಧಿ ಸ್ಟಾಲಿನ್‌ಗೆ ಡಿಸಿಎಂ ಪಟ್ಟ – ಶೀಘ್ರವೇ ಘೋಷಣೆ ಸಾಧ್ಯತೆ
Advertisement
Advertisement
ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತ ವಿಶ್ವಕ್ಕೆ ಮುಂಚೂಣಿಯಲ್ಲಿದೆ, ಹವಾಮಾನ ಬದಲಾವಣೆಯ ಸಮಸ್ಯೆಯನ್ನು ಎದುರಿಸಲು, ಪ್ರತಿಯೊಬ್ಬರೂ ತಮ್ಮ ಪಾತ್ರವನ್ನು ನಿರ್ವಹಿಸಬೇಕು. ಭಾರತದ ಉಪಕ್ರಮದ ಮೇಲೆ ಸೌರ ಒಕ್ಕೂಟವನ್ನು ರಚಿಸಲಾಯಿತು. ಜಗತ್ತನ್ನು ಉಳಿಸಲು ನಾವು ಬದ್ಧರಾಗಿದ್ದೇವೆ. ಇದಕ್ಕಾಗಿ ಜಗತ್ತಿನ ಎಲ್ಲಾ ಏಜೆನ್ಸಿಗಳು ಒಟ್ಟಾಗಿ ಕೆಲಸ ಮಾಡಬೇಕಾಗಿದೆ. ಪ್ರತಿಯೊಬ್ಬರೂ ತಮ್ಮ ಪಾತ್ರವನ್ನು ನಿರ್ವಹಿಸಬೇಕು. ನಾವು ಶಕ್ತಿಯನ್ನು ಬಳಸುವಾಗ ನಮ್ಮ ಅಗತ್ಯಕ್ಕೆ ಮಾತ್ರ ಬಳಸಬೇಕು. ಭಾರತದಲ್ಲಿ ಆಗುತ್ತಿರುವ ಅಭಿವೃದ್ಧಿಯು ಇಡೀ ಜಗತ್ತಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಒಂದು ದೇಶ ಒಂದು ಚುನಾವಣೆ ಮಸೂದೆಗೆ ಕ್ಯಾಬಿನೆಟ್ ಒಪ್ಪಿಗೆ
Advertisement
Advertisement
ಈ ಸಂದರ್ಭದಲ್ಲಿ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಮಾತನಾಡಿ, ಇಂದು ಇಡೀ ವಿಶ್ವವೇ ನವೀಕರಿಸಬಹುದಾದ ಇಂಧನಕ್ಕಾಗಿ ಭಾರತದತ್ತ ನೋಡುತ್ತಿದೆ. ಇದಕ್ಕೆ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರು ಜಗತ್ತಿನ ಮುಂದಿಟ್ಟಿರುವ ದೂರದೃಷ್ಟಿ. ಗುಜರಾತಿನ ಮುಖ್ಯಮಂತ್ರಿಯಾಗಿ ಮತ್ತು ದೇಶದ ಪ್ರಧಾನಿಯಾಗಿ ಅವರು ಇದರಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ರಾಜ್ಯಗಳು 2030 ರ ವೇಳೆಗೆ 540 ಜಿಡಬ್ಲ್ಯೂ ನವೀಕರಿಸಬಹುದಾದ ಶಕ್ತಿಯ ಗುರಿಯನ್ನು ಹೊಂದಿವೆ. 2030 ರ ವೇಳೆಗೆ ಹಸಿರು ಶಕ್ತಿ ಪರಿವರ್ತನೆಗಾಗಿ ಹಣಕಾಸು ಸಂಸ್ಥೆಗಳು 386 ಶತಕೋಟಿ ಡಾಲರ್ ವಾಗ್ದಾನ ಮಾಡಿವೆ. ಇದರಿಂದ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ 82 ಲಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಹೇಳಿದರು. ಇದನ್ನೂ ಓದಿ: ಸಂಗೊಳ್ಳಿ ರಾಯಣ್ಣನ ಮೂರ್ತಿ ಭಗ್ನ – ಯುವಕ ಪೊಲೀಸ್ ವಶಕ್ಕೆ