ನವದೆಹಲಿ: ದೇಶದಲ್ಲಿ ವೇಗವಾಗಿ ಬೆಳೆಯುತ್ತಿರುವ ಜನಸಂಖ್ಯೆಯಿಂದ (Population) ಉಂಟಾಗುವ ಸವಾಲುಗಳನ್ನ ನಿಭಾಯಿಸಲು ಉನ್ನತ ಅಧಿಕಾರ ಸಮಿತಿ ರಚಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಮಧ್ಯಂತರ ಬಜೆಟ್ (Interim Budget 2024) ಮಂಡಿಸಿದ ಅವರು, ವೇಗವಾಗಿ ಬೆಳೆಯುತ್ತಿರುವ ಸಂಖ್ಯೆ ಮತ್ತು ಜನಸಂಖ್ಯೆಯಿಂದ ಸೃಷ್ಟಿಯಾಗುವ ಸವಾಲುಗಳನ್ನು ಪರಿಗಣಿಸಿ, ಸಮರ್ಥವಾಗಿ ಎದುರಿಸಲು ಉನ್ನತ ಅಧಿಕಾರ ಸಮಿತಿಯನ್ನು ರಚಿಸಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ: ಹಿಂದೆ ಎಷ್ಟಿತ್ತು? ಈಗ ಎಷ್ಟಿದೆ?
`ವಿಕ್ಷಿತ್ ಭಾರತ್’ (ಅಭಿವೃದ್ಧಿ ಹೊಂದಿದ ಭಾರತ) ನಿರ್ಮಾಣ ಮಾಡುವ ಗುರಿಗೆ ಸಂಬಂಧಿಸಿದಂತೆ ಸಮಗ್ರವಾಗಿ ಈ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಸಮಿತಿ ಕಾರ್ಯನಿರ್ವಹಿಸಲಿದೆ ಎಂದು ಹೇಳಿದ್ದಾರೆ.
ಇದರೊಂದಿಗೆ ಹಣಕಾಸು ಸಚಿವರು, ಮುಂಬರುವ ರಾಷ್ಟ್ರೀಯ ಚುನಾವಣೆಯಲ್ಲಿ ನರೇಂದ್ರ ಮೋದಿ (Narendra Modi) ಸರ್ಕಾರ ಮತ್ತೊಮ್ಮೆ ಆಯ್ಕೆಯಾಗಲಿದೆ. ಕೇಂದ್ರ ಸರ್ಕಾರದ ಉತ್ತಮ ನೀತಿಗಳು ಮತ್ತು ಕೆಲಸಗಳು ಸತತ 3ನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಮರಳಲು ಸಹಾಯ ಮಾಡುತ್ತದೆ. ಮುಂದಿನ ಜುಲೈನಲ್ಲಿ ನಮ್ಮ ಸರ್ಕಾರವು ಅಭಿವೃದ್ಧಿ ಹೊಂದಿದ ಭಾರತದ ಪರಿಕಲ್ಪನೆಗಾಗಿ ಪೂರ್ಣಪ್ರಮಾಣದ ಬಜೆಟ್ ಮಂಡಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಿಎಂ ಸೂರ್ಯೋದಯ ಯೋಜನೆಗೆ ವಿಶೇಷ ಒತ್ತು – ಒಂದು ಕೋಟಿ ಮನೆಗಳಿಗೆ ಸೋಲಾರ್ ಮೇಲ್ಛಾವಣಿ
ಜನಸಂಖ್ಯೆಯಲ್ಲಿ ಭಾರತವೇ ನಂ.1: ಜಗತ್ತಿನಲ್ಲಿಯೇ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದ ಚೀನಾವನ್ನು ಭಾರತ ಹಿಂದಿಕ್ಕಿದೆ. ವಿಶ್ವಸಂಸ್ಥೆಯ ಇತ್ತೀಚಿನ ಅಂಕಿಅಂಶಗಳ ಪ್ರಕಾರ ಭಾರತವು 142.86 ಕೋಟಿ ಜನಸಂಖ್ಯೆ ಹೊಂದುವ ಮೂಲಕ ಮೊದಲ ಸ್ಥಾನಕ್ಕೆ ಏರಿದ್ದು, 142.57 ಕೋಟಿ ಜನಸಂಖ್ಯೆಯನ್ನು ಹೊಂದುವ ಮೂಲಕ ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ. ಇದನ್ನೂ ಓದಿ: ಜನಸಂಖ್ಯೆ ಸ್ಫೋಟ, ಚೀನಾ ಹಿಂದಿಕ್ಕಿದ ಭಾರತ – ದೇಶದ ಒಟ್ಟು ಜನಸಂಖ್ಯೆ ಎಷ್ಟು ಗೊತ್ತಾ?