ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಮಂಡಿಸಿದ ಮಧ್ಯಂತರ ಬಜೆಟ್‍ನಲ್ಲಿ (Interim Budget) ಇತ್ತೀಚೆಗೆ ಘೋಷಣೆಯಾದ `ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆ’ಗೆ (Pradhan Mantri Suryoday Yojna) ವಿಶೇಷ ಒತ್ತು ನೀಡಲಾಗಿದೆ. ಮನೆಗಳಿಗೆ ಸೋಲಾರ್ ಮೇಲ್ಛಾವಣಿ (Rooftop Solar Scheme) ಅಳವಡಿಸುವ ಈ ಯೋಜನೆ ಬಗ್ಗೆ ಅವರು ತಮ್ಮ ಬಜೆಟ್ ಭಾಷಣದಲ್ಲಿ ವಿಶೇಷವಾದ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಯೋಜನೆಯ ಮೂಲಕ ಒಂದು ಕೋಟಿ ಮನೆಗಳಲ್ಲಿ ಸೌರ ಮೇಲ್ಛಾವಣಿ ಅಳವಡಿಸಲು ಉದ್ದೇಶಿಸಲಾಗಿದೆ. ಇದರಿಂದ ಒಂದು ಮನೆಗೆ ತಿಂಗಳಿಗೆ ಸುಮಾರು 300 ಯೂನಿಟ್ ವಿದ್ಯುತ್ ಉಳಿತಾಯವಾಗುತ್ತದೆ. ವಾರ್ಷಿಕವಾಗಿ 15,000-18,000 ರೂ.ಗಳ ಉಳಿತಾಯವಾಗಲಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: 2047ರ ವೇಳೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರ ಮಾಡುವ ಗುರಿ: ವಿತ್ತ ಮಂತ್ರಿ
ಸರ್ಕಾರಿ ಸ್ವಾಮ್ಯದ ಆರ್‌ಇಸಿ ಲಿಮಿಟೆಡ್‍ನ್ನು ಯೋಜನೆಯ ಅನುಷ್ಠಾನ ಏಜೆನ್ಸಿಯಾಗಿ ನೇಮಿಸಲಾಗಿದೆ. ಒಂದು ವರ್ಷದೊಳಗೆ ಒಂದು ಕೋಟಿ ಮನೆಗಳಲ್ಲಿ ಮೇಲ್ಛಾವಣಿ ಸೌರ ಅಳವಡಿಕೆಗಳನ್ನು ಹೊಂದುವ ಗುರಿಯನ್ನು ಹೊಂದಿದೆ. ಜ.22 ರಂದು, ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರದಲ್ಲಿ ಪ್ರತಿಷ್ಠಾಪನೆ ಸಮಾರಂಭದ ನಂತರ ಅಯೋಧ್ಯೆಯಿಂದ ಹಿಂದಿರುಗಿದ ನಂತರ ಒಂದು ಕೋಟಿ ಮನೆಗಳಲ್ಲಿ ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದರು.
ಈ ಯೋಜನೆಯು ಈಗಾಗಲೇ ಜಾರಿಯಲ್ಲಿದೆ, ಇದು ಹೊಸ ಮಾರ್ಗಸೂಚಿಗಳು ಮತ್ತು ಪ್ರೋತ್ಸಾಹಗಳೊಂದಿಗೆ ಜಾರಿಯಾಗಲಿದೆ. ಇದನ್ನೂ ಓದಿ: ಮಧ್ಯಂತರ ಬಜೆಟ್‌ನಲ್ಲಿ ನಾರಿಶಕ್ತಿಗೆ ಹೆಚ್ಚಿನ ಒತ್ತು