Waqf Act | ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ ಕೇಂದ್ರ – ಅರ್ಜಿಗಳನ್ನು ವಜಾಗೊಳಿಸುವಂತೆ ಮನವಿ

Public TV
1 Min Read
supreme Court 1

ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆಯನ್ನು (Waqf Act) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಕುರಿತು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ (Supreme Court) ತನ್ನ ಉತ್ತರ ನೀಡಿದೆ.

ಕಳೆದ 100 ವರ್ಷಗಳಿಂದ ವಕ್ಫ್ ಅನ್ನು ಬಳಕೆದಾರರ ನೋಂದಣಿ ನಂತರವೇ ಗುರುತಿಸಲಾಗುತ್ತಿದೆಯೇ ಹೊರತು ಮೌಖಿಕವಾಗಿ ಅಲ್ಲ. ಹೀಗಾಗಿ ತಿದ್ದುಪಡಿ ಅಗತ್ಯವಾಗಿತ್ತು ಎಂದು ಹೇಳಿದೆ. ವಕ್ಫ್ ಕೌನ್ಸಿಲ್ ಮತ್ತು ವಕ್ಫ್ ಮಂಡಳಿಯಲ್ಲಿರುವ 22 ಸದಸ್ಯರಲ್ಲಿ ಗರಿಷ್ಠ ಇಬ್ಬರು ಮುಸ್ಲಿಮೇತರರಾಗಿರಬೇಕು (Non Muslims) ಎಂದು ಕೇಂದ್ರ ಸರ್ಕಾರ ಹೇಳಿದೆ. ಇದನ್ನೂ ಓದಿ: ಪಹಲ್ಗಾಮ್‌ನಲ್ಲೊಬ್ಬ ಸೂಪರ್‌ ಹಿರೋ.. ಬಿಜೆಪಿ ಕುಟುಂಬ ಕಾಪಾಡಿದ ಕಾಶ್ಮೀರಿ ಮುಸ್ಲಿಂ!

ಇದು ವಕ್ಫ್ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಸರ್ಕಾರಿ ಭೂಮಿಯನ್ನು ಉದ್ದೇಶಪೂರ್ವಕವಾಗಿ ಅಥವಾ ತಪ್ಪಾಗಿ ವಕ್ಫ್ ಆಸ್ತಿ ಎಂದು ಗುರುತಿಸುವುದನ್ನು ತಡೆಯುವುದು, ಕಂದಾಯ ದಾಖಲೆಗಳನ್ನು ಸರಿಪಡಿಸುವ ಉದ್ದೇಶವಾಗಿದೆ. ಸರ್ಕಾರಿ ಭೂಮಿಯನ್ನು ಯಾವುದೇ ಧಾರ್ಮಿಕ ಸಮುದಾಯಕ್ಕೆ ಸೇರಿದ ಭೂಮಿಯೆಂದು ಪರಿಗಣಿಸಲಾಗುವುದಿಲ್ಲ ಎಂದು ಕೇಂದ್ರ ಹೇಳಿದೆ. ಇದನ್ನೂ ಓದಿ: ಹಿಂದೂಗಳ ನರಮೇಧ ನಡೆಸಿದ ಉಗ್ರರಿಗೆ ತಕ್ಕ ಶಿಕ್ಷೆ – ಇಬ್ಬರು ಭಯೋತ್ಪಾದಕರ ಮನೆಗಳು ಬ್ಲಾಸ್ಟ್!

ಈ ಕಾಯ್ದೆಯ ತಿದ್ದುಪಡಿಗಳು ಕೇವಲ ನಿಯಂತ್ರಕ ಸ್ವರೂಪದ್ದಾಗಿವೆ. ಇವು ಯಾವುದೇ ಧಾರ್ಮಿಕ ಹಕ್ಕುಗಳಿಗೆ ಧಕ್ಕೆ ತರಲ್ಲ. ಹಾಗಾಗಿ ವಕ್ಫ್ ವಿರುದ್ಧ ಸಲ್ಲಿಸಲಾಗಿರುವ ಅರ್ಜಿಗಳನ್ನು ವಜಾ ಮಾಡಿ ಎಂದು ಕೇಂದ್ರ ಮನವಿ ಮಾಡಿದೆ. ಇದನ್ನೂ ಓದಿ: ಪಹಲ್ಗಾಮ್‌ಗೆ ರಾಹುಲ್ ಗಾಂಧಿ ಭೇಟಿ – ಉಗ್ರರ ದಾಳಿ ವೇಳೆ ಗಾಯಗೊಂಡವರ ಆರೋಗ್ಯ ವಿಚಾರಣೆ

Share This Article