Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನ್ಯಾ. ವರ್ಮಾ ಪ್ರಕರಣದ ತನಿಖೆ ನಡೆಸಿದ ಆಂತರಿಕ ಸಮಿತಿಗೆ ಕಾನೂನು ಮಾನ್ಯತೆ ಇಲ್ಲ: ಜಗದೀಪ್ ಧನಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನ್ಯಾ. ವರ್ಮಾ ಪ್ರಕರಣದ ತನಿಖೆ ನಡೆಸಿದ ಆಂತರಿಕ ಸಮಿತಿಗೆ ಕಾನೂನು ಮಾನ್ಯತೆ ಇಲ್ಲ: ಜಗದೀಪ್ ಧನಕರ್

Latest

ನ್ಯಾ. ವರ್ಮಾ ಪ್ರಕರಣದ ತನಿಖೆ ನಡೆಸಿದ ಆಂತರಿಕ ಸಮಿತಿಗೆ ಕಾನೂನು ಮಾನ್ಯತೆ ಇಲ್ಲ: ಜಗದೀಪ್ ಧನಕರ್

Public TV
Last updated: May 20, 2025 4:48 pm
Public TV
Share
2 Min Read
Jagdeep Dhankar
SHARE

ನವದೆಹಲಿ: ನ್ಯಾಯಮೂರ್ತಿ ಯಶವಂತ್ ವರ್ಮಾ (Yashwant Varma) ಭ್ರಷ್ಟಾಚಾರ ಪ್ರಕರಣದ ಕುರಿತು ತನಿಖೆ ನಡೆಸಿದ ಮೂವರು ನ್ಯಾಯಮೂರ್ತಿಗಳ ಆಂತರಿಕ ಸಮಿತಿಗೆ ಕಾನೂನು ಮಾನ್ಯತೆ ಇಲ್ಲ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ (Jagdeep Dhankar) ತಿಳಿಸಿದ್ದಾರೆ.

ಹಿರಿಯ ವಕೀಲ ವಿಜಯ್ ಹನ್ಸಾರಿಯಾ ಅವರು ಸಂಪಾದಿಸಿರುವ `ದಿ ಕಾನ್‌ಸ್ಟಿಟ್ಯೂಷನ್ ವಿ ಅಡಾಪ್ಟೆಡ್’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದ ಅವರು, ವಿಚಾರಣಾ ಸಮಿತಿಗೆ ಯಾವುದೇ ಸಾಂವಿಧಾನಿಕ ವ್ಯಾಪ್ತಿಯಾಗಲಿ ಅಥವಾ ಕಾನೂನಿನ ಮಾನ್ಯತೆಯಾಗಲಿ ಇಲ್ಲ. ಆಂತರಿಕ ವಿಚಾರಣಾ ಸಮಿತಿಯಲ್ಲಿದ್ದ ಎರಡು ಹೈಕೋರ್ಟ್ಗಳ ನ್ಯಾಯಮೂರ್ತಿಗಳಿಗೆ ಸಾಕಷ್ಟು ಕಷ್ಟವಾಗಿದೆ. ಅದರಲ್ಲಿ ಒಂದು ಹೈಕೋರ್ಟ್ನ ವ್ಯಾಪ್ತಿ, ಎರಡು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದ್ದಾಗಿದೆ ಎಂದರು.ಇದನ್ನೂ ಓದಿ: ಗೋಲ್ಡ್ ಸ್ಮಗ್ಲಿಂಗ್ ಕೇಸ್ | ನಟಿ ರನ್ಯಾರಾವ್‌ಗೆ ಜಾಮೀನು ಮಂಜೂರು

ಸಮಿತಿಯ ನ್ಯಾಯಮೂರ್ತಿಗಳು ಯಾವುದೇ ಸಾಂವಿಧಾನಿಕ ಆಧಾರ ಅಥವಾ ಕಾನೂನು ಮಾನ್ಯತೆಯಾಗಲಿ ಇಲ್ಲದ ವಿಚಾರಣೆಯಲ್ಲಿ ಭಾಗಿಯಾಗಿದ್ದಾರೆ. ಇದು ಅಪ್ರಸ್ತುತವಾಗಿತ್ತು. ನ್ಯಾಯಾಲಯದ ಆಡಳಿತಾತ್ಮಕ ವಿಭಾಗದಲ್ಲಿ ವಿಕಸಿತವಾಗಿರುವ ಕಾರ್ಯ ವಿಧಾನದ ಮೂಲಕ ತನಿಖಾ ವರದಿಯನ್ನು ಯಾರಿಗಾದರೂ ಕಳುಹಿಸಬಹುದಾಗಿದೆ. ತನಿಖಾ ಸಮಿತಿ ಎಲೆಕ್ಟ್ರಾನಿಕ್ ಪುರಾವೆಗಳನ್ನು ವಶಪಡಿಸಿಕೊಂಡಿದೆಯೇ ಎಂಬುದು ಜನರಿಗೆ ತಿಳಿದಿಲ್ಲ. ನ್ಯಾ. ವರ್ಮಾ ನಿವಾಸಕ್ಕೆ ಹಣ ಬಂದಿದ್ದು ಹೇಗೆ? ಅದರ ಹಿಂದಿನ ಉದ್ದೇಶ ಏನು? ಹಾಗೂ ಘಟನೆಯ ಹಿಂದಿರುವ ದೊಡ್ಡ ತಿಮಿಂಗಿಲಗಳ ಬಗ್ಗೆ ಅರಿಯಲು ದೇಶ ಕಾಯುತ್ತಿದೆ. ಘಟನೆ ನಡೆದು ಒಂದು ವಾರ ಕಳೆದರೂ 140 ಕೋಟಿ ಜನರಿರುವ ದೇಶಕ್ಕೆ ಆ ಬಗ್ಗೆ ಹೆಚ್ಚಿನ ವಿಷಯ ತಿಳಿಯಲಿಲ್ಲ. ಇಂತಹ ಎಷ್ಟು ಘಟನೆಗಳು ನಡೆದಿರಬಹುದು ಎಂದು ಊಹಿಸಿ. ಅಂತಹ ಪ್ರತಿಯೊಂದು ಘಟನೆಯೂ ಸಾಮಾನ್ಯ ಜನರ ಮೇಲೆ ಪರಿಣಾಮ ಬೀರುತ್ತದೆ ಎಂದು ತಿಳಿಸಿದರು.

ಪ್ರಕರಣದ ಆರಂಭಿಕ ವರದಿಯನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಿದ ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಕಾರ್ಯ ಶ್ಲಾಘನೀಯ. ಇದು ನ್ಯಾಯಾಂಗದ ಮೇಲಿನ ವಿಶ್ವಾಸವನ್ನು ಸ್ವಲ್ಪಮಟ್ಟಿಗೆ ಮರುಸ್ಥಾಪಿಸಿದೆ. ನ್ಯಾ.ವರ್ಮಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮತ್ತು ಕಾರ್ಯಾಂಗದ ಕೈಗಳನ್ನು ಕಟ್ಟಿಹಾಕಿದ 1991ರ ಕೆ ವೀರಸ್ವಾಮಿ ಮತ್ತು ಭಾರತ ಒಕ್ಕೂಟ ನಡುವಣ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯ ನೀಡಿದ ತೀರ್ಪನ್ನು ಮರುಪರಿಶೀಲಿಸುವ ಅಗತ್ಯವಿದೆ. ಸಮಗ್ರ ಮತ್ತು ವೈಜ್ಞಾನಿಕ ತನಿಖೆ ಮಾತ್ರ ಇಂತಹ ವಿವಾದವನ್ನು ಕೊನೆಗಾಣಿಸಲು ಸಾಧ್ಯ ಎಂದರು.ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಇರೋವರೆಗೂ ಗ್ಯಾರಂಟಿ ಸ್ಕೀಂ ನಿಲ್ಲೋದಿಲ್ಲ: ಡಿಕೆಶಿ ಸ್ಪಷ್ಟನೆ

TAGGED:jagadeep dhankarnewdelhivice presidentYashwant Varmaಯಶವಂತ್‌ ವರ್ಮಾ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
18 minutes ago
State Nursing Council Registrar mallu
Bengaluru City

ಬಲವಂತವಾಗಿ ತಬ್ಬಿಕೊಂಡು ಮುತ್ತು, ಅಂಗಾಂಗ ಮುಟ್ಟಿ ದೌರ್ಜನ್ಯ – ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ ಅರೆಸ್ಟ್

Public TV
By Public TV
21 minutes ago
Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
47 minutes ago
Narendra Modi
Latest

ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧನೆ ನಿಶ್ಚಿತ: ಪ್ರಧಾನಿ ಮೋದಿ ವಿಶ್ವಾಸ

Public TV
By Public TV
1 hour ago
PM Modi Shivakumar Shri
Districts

ಕರುಣೆ, ವಿನಯದ ಪ್ರತಿರೂಪವಾಗಿ ನಮ್ಮೆಲ್ಲರ ಸ್ಮರಣೆಯಲ್ಲಿ ಸದಾ ಜೀವಂತ – ಶಿವಕುಮಾರ ಶ್ರೀಗಳಿಗೆ ಮೋದಿ ಭಾವಪೂರ್ಣ ನಮನ

Public TV
By Public TV
2 hours ago
Kalaburagi Khamenei Condolence 1
Districts

ಕಲಬುರಗಿ ಮಹಾನಗರ ಪಾಲಿಕೆ ಬಜೆಟ್‌ಗೂ ಮುನ್ನ ಖಮೇನಿ ಹತ್ಯೆಗೆ ಸಂತಾಪ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?