ಮಡಿಕೇರಿ: ಸುತ್ತಲೂ ಹಸಿರು ರಾಶಿ, ಬೆಟ್ಟ – ಗುಡ್ಡ, ಇಂತಹ ಪ್ರಕೃತಿ ಸೌಂದರ್ಯದ ಮಧ್ಯೆ ಕುಳಿತು ಅಂತಾರಾಷ್ಟ್ರೀಯ ಕ್ರಿಕೆಟ್ (International Cricket) ಪಂದ್ಯಾವಳಿ ನೋಡುವ ಅವಕಾಶ ಸಿಕ್ಕರೆ ಅದೆಷ್ಟು ಮಜವಿರುತ್ತದೆ ಅಲ್ಲವೇ? ಹೌದು. ಮುಂದಿನ 3-4 ವರ್ಷಗಳಲ್ಲೇ ಕೊಡಗಿನ (Kodagu) ಜನಕ್ಕೆ ಈ ಸದವಕಾಶ ಸಿಗಲಿದೆ.
Advertisement
ಕರ್ನಾಟಕದ ಕಾಶ್ಮೀರ ಎಂದೇ ಖ್ಯಾತಿ ಪಡೆದಿರುವ ಕೊಡಗು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ (International Cricket Stadium) ತಲೆ ಎತ್ತಲಿದ್ದು, ಈಗಾಗಲೇ ನಿರ್ಮಾಣ ಕಾರ್ಯ ಶುರುವಾಗಿದೆ. ಇದನ್ನೂ ಓದಿ: ಲಾಸ್ ಏಂಜಲೀಸ್‌ನಲ್ಲಿ ಕಾಡ್ಗಿಚ್ಚು: ಅಮೆರಿಕ ಅಧ್ಯಕ್ಷ ಜೋ ಬೈಡನ್ ಪುತ್ರನ ಮನೆ ಬೆಂಕಿಗಾಹುತಿ
Advertisement
Advertisement
ಜಿಲ್ಲೆಗೆ ಅಂತಾರಾಷ್ಟ್ರೀಯ ಕ್ರೀಡಾಂಗಣ ಬೇಕು ಅನ್ನೋದು ಇಲ್ಲಿನ ಜನರ ಹಲವು ವರ್ಷಗಳ ಬೇಡಿಕೆಯಾಗಿತ್ತು. ಈಗ ಆ ಬೇಡಿಕೆ ಈಡೇರುವ ಕಾಲ ಹತ್ತಿರವಾಗಿದೆ. ಮಡಿಕೇರಿ ತಾಲೂಕಿನ ಪಾಲೆಮಾಡು ಗ್ರಾಮದ ಬಳಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ತಲೆ ಎತ್ತುತ್ತಿದೆ. ಈಗಾಗಲೆ ಮೈದಾನ ನಿರ್ಮಾಣ ಕಾಮಗಾರಿ ಆರಂಭವಾಗಿದೆ.
Advertisement
ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕ್ರೀಡಾಂಗಣಕ್ಕೆ ಜಿಲ್ಲಾಡಳಿತ 12 ಎಕರೆ ಜಾಗ ನೀಡಿದೆ. ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರೀಡಾಂಗಣ ಮಾದರಿಯಲ್ಲೇ ನಿರ್ಮಾಣ ಮಾಡುವ ಗುರಿ ಹೊಂದಲಾಗಿದ್ದು, ಅದಕ್ಕಾಗಿ ಈ ಪ್ರದೇಶದಲ್ಲಿ ಬೆಟ್ಟವನ್ನು ಸಮತಟ್ಟುಗೊಳಿಸಲಾಗುತ್ತಿದೆ. ಇದನ್ನೂ ಓದಿ: Tirupati Stampede | ವೈಕುಂಠ ಏಕಾದಶಿಯಂದು ತಿರುಪತಿಗೆ ಯಾಕೆ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ?
ಸದ್ಯ ಕ್ರೀಡಾಂಗಣ ನಿರ್ಮಾಣಕ್ಕೆ ಕಾಮಗಾರಿ ಶುರುವಾಗಿದ್ದು, ಮುಂದಿನ 3-4 ವರ್ಷಗಳಲ್ಲಿ ಅಂಗಳ ನಿರ್ಮಾಣವಾಗಲಿದೆ. ಇದು ಸ್ಥಳೀಯ ಕ್ರೀಡಾಪಟುಗಳಿಗೂ ವರದಾನವಾಗಲಿದೆ. ಈಗಾಗಲೇ ಜಿಲ್ಲೆಯಲ್ಲಿ ಆಸ್ಟ್ರೋ ಟರ್ಫ್ ಹಾಕಿ ಕ್ರೀಡಾಂಗಣವಿದೆ. ಆದರೆ, ಕನಿಷ್ಠ ರಾಜ್ಯ ಮಟ್ಟದ ಕ್ರೀಡಾಕೂಟ ಆಯೋಜಿಸುವಂತಹ ಅಥ್ಲೆಟಿಕ್ ಕ್ರೀಡಾಂಗಣವಾಗಲಿ, ಕ್ರಿಕೆಟ್ ಮೈದಾನವಾಗಲಿ ಇಲ್ಲ. ಸದ್ಯ ಕ್ರಿಕೆಟ್ ಮೈದಾನ ತಲೆ ಎತ್ತುತ್ತಿದ್ದು, ಇದರೊಂದಿಗೆ ಕೊಡಗು ಜಿಲ್ಲೆ ಸಹ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲಿದೆ ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.