ಚಿಕ್ಕಬಳ್ಳಾಪುರ: ಅಂತರಾಷ್ಟ್ರೀಯ ವಿಜ್ಞಾನ ಕೇಂದ್ರಕ್ಕೆ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ಚಾಲನೆ ನೀಡಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹೊಸೂರು ಬಳಿ ಇರುವ ಡಾ.ಎಚ್.ನರಸಿಂಹಯ್ಯ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಇಂದು ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ ಅಂಗವಾಗಿ ಡಾ.ಎಚ್.ನರಸಿಂಹಯ್ಯ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಆಡಿಟೋರಿಯಂ, ಕಿರು ತಾರಾಲಯ ಹಾಗೂ ಗ್ಯಾಲರಿಗಳ ಉದ್ಘಾಟನೆ ಮತ್ತು ಅಂತರಾಷ್ಟ್ರೀಯ ವಿಜ್ಞಾನ ಕೇಂದ್ರದ ಶಂಕುಸ್ಥಾಪನೆಯನ್ನು ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾಡಿದರು. ಇದನ್ನೂ ಓದಿ: ಸೈಬರ್ ಮೋಸದ ಜಾಲದಕ್ಕೆ ಸಿಕ್ಕಿ 1.48 ಲಕ್ಷ ಕಳೆದುಕೊಂಡ ನಟಿ!
ಅಶ್ವತ್ಥನಾರಾಯಣ ಅವರ ಜೊತೆಗೆ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಟಿ.ಬಿ ನಾಗರಾಜು ನೆರವೇರಿಸಿದರು.
ಇಸ್ರೋ ಸಂಸ್ಥೆಯ ಅಧ್ಯಕ್ಷರಾದ ಡಾ.ಎಸ್.ಸೋಮನಾಥ್ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದು, ಈ ವೇಳೆ ಬಾಹ್ಯಕಾಶ, ಉಪಗ್ರಹ, ರಾಕೆಟ್ ಉಡಾವಣೆ ಹಾಗೂ ವಿಜ್ಞಾನಕ್ಕೆ ಸಂಬಂಧಿಸಿದಂತೆ ಹಲವು ವಿಷಯಗಳನ್ನು ಮಕ್ಕಳಿಗೆ ತಿಳಿಸಿದರು. ಇದನ್ನೂ ಓದಿ: ಶಿಲ್ಪಾ ಶೆಟ್ಟಿ ಧರಿಸಿರುವ ಗೌನ್ ಬೆಲೆಯಷ್ಟು ಗೊತ್ತಾ? ಲಕಲಕ ಹೊಳಿತಿದ್ದಾಳೆ ರವಿಮಾಮನ ಬೆಡಗಿ
ಈ ಸಂದರ್ಭದಲ್ಲಿ ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಎನ್.ಎಚ್.ಶಿವಶಂಕರರೆಡ್ಡಿ, ಜಿಲ್ಲಾಧಿಕಾರಿ ಆರ್.ಲತಾ, ಗೌರಿಬಿದನೂರು ತಾಲೂಕಿನ ತಹಸೀಲ್ದಾರ್ ಹೆಚ್.ಶ್ರೀನಿವಾಸ್, ಭಾರತೀಯ ವಿಜ್ಞಾನ ಸಂಸ್ಥೆಯ ನಿವೃತ್ತ ಪೆÇ್ರಫೆಸರ್ ಕೆ.ಜಿ.ಪಿ.ರೆಡ್ಡಿ, ನಿವೃತ್ತ ನ್ಯಾಯಾಧೀಶರಾದ ಎನ್.ಕುಮಾರ್, ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ.ಇ.ವಿ.ರಮಣ ರೆಡ್ಡಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.