ಚಾಮರಾಜನಗರ: ದೇಶದಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಚಾಮರಾಜನಗರ (Chamarajanagar) ಜಿಲ್ಲೆಯಲ್ಲೂ ಕೂಡ ಕಳೆದ 15 ವರ್ಷದಲ್ಲಿ 150ಕ್ಕೂ ಹೆಚ್ಚು ಹುಲಿಗಳ ಸಂಖ್ಯೆ ಹೆಚ್ಚಾಗಿದ್ದು, ಅತಿಹೆಚ್ಚು ಹುಲಿಗಳನ್ನು ಪೋಷಿಸುತ್ತಿರುವ ಜಿಲ್ಲೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.
ಪ್ರತಿ ವರ್ಷ ಜುಲೈ 29ರಂದು ‘ವಿಶ್ವ ಹುಲಿ ದಿನ’ವನ್ನಾಗಿ (International Tiger Day) ಆಚರಿಸಲಾಗುತ್ತದೆ. ಹಿಂದೆ ಹುಲಿಗಳ ಸಂರಕ್ಷಣೆ ದೊಡ್ಡ ಸವಾಲಾಗಿತ್ತು. ಆದರೀಗ ಸಂರಕ್ಷಣೆ ಉತ್ತಮವಾಗಿದ್ದು, ಹುಲಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ಅದರಲ್ಲೂ ಗಡಿಜಿಲ್ಲೆ ಚಾಮರಾಜನಗರ ‘ಹುಲಿಗಳ ನಾಡು’ ಎಂದೇ ಹೆಸರು ಗಳಿಸಿದೆ. ಇದನ್ನೂ ಓದಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ – ಸಾರಿಗೆ ಸಂಘಟನೆಯಿಂದ ಅನಿರ್ಧಿಷ್ಟಾವಧಿ ಉಪವಾಸ ಧರಣಿ
ಚಾಮರಾಜನಗರ ಜಿಲ್ಲೆಯಲ್ಲಿ ಬಂಡೀಪುರ, ಬಿಳಿಗಿರಿ ರಂಗನಬೆಟ್ಟ ಎರಡೂ ಹುಲಿ ಸಂರಕ್ಷಿತ ಪ್ರದೇಶಗಳಾಗಿವೆ. ಮಲೆ ಮಹದೇಶ್ವರ ವನ್ಯಜೀವಿಧಾಮವೂ ಕೂಡ ಹುಲಿ ಸಂರಕ್ಷಿತ ಪ್ರದೇಶ ಆಗುವ ನಿರೀಕ್ಷೆಯಿದೆ. ಅದರ ಜೊತೆಗೆ ಕಾವೇರಿ ವನ್ಯಧಾಮ ಕೂಡ ಚಾಮರಾಜನಗರ ಜಿಲ್ಲೆಯಲ್ಲಿದೆ. ಎರಡು ಹುಲಿ ಸಂರಕ್ಷಿತ ಅರಣ್ಯ, ಎರಡು ವನ್ಯಧಾಮ ಹೊಂದಿರುವ ಜಿಲ್ಲೆ ಅಂದ್ರೆ ಅದು ಚಾಮರಾಜನಗರ. ಬಂಡೀಪುರ ಅರಣ್ಯ ಪ್ರದೇಶವು 1973ರಲ್ಲಿ ಮೊದಲಿಗೆ ಹುಲಿ ಸಂರಕ್ಷಿತ ಅರಣ್ಯಪ್ರದೇಶವಾಗಿ ಘೋಷಣೆಯಾಯಿತು. ಆ ಸಂದರ್ಭದಲ್ಲಿ 12 ಹುಲಿಗಳಷ್ಟೇ ಇತ್ತು ಎಂದು ಅಂದಾಜು ಮಾಡಲಾಗಿತ್ತು. ಕ್ರಮೇಣ ಹುಲಿಗಳ ಸಂರಕ್ಷಣೆ ಹೆಚ್ಚಾಗಿದೆ. ಇದನ್ನೂ ಓದಿ: 7 ದಿನ, 170 ಗಂಟೆ ಭರತನಾಟ್ಯ – ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರಿದ ಮಂಗಳೂರಿನ ರೆಮೋನಾ ಪಿರೇರಾ
ಇದಿಗ 2024ರ ಕರ್ನಾಟಕ ಅರಣ್ಯ ಇಲಾಖೆ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ 393 ಹುಲಿಗಳಿವೆ. ಅದರಲ್ಲಿ ಬಂಡೀಪುರದಲ್ಲಿ ಸುಮಾರು 154ಕ್ಕೂ ಹೆಚ್ಚು ಹುಲಿಗಳಿರೋದು ಗೊತ್ತಾಗಿದೆ. ನಾಗರಹೊಳೆ 149, ಭದ್ರಾ 29, ಅದೇ ರೀತಿ ಬಿಳಿಗಿರಿ ರಕ್ಷಿತಾರಣ್ಯದಲ್ಲೂ ಅಂದಾಜು 39 ಹುಲಿಗಳಿರೋದು ಕಂಡು ಬಂದಿದೆ. ಕಾಳಿ (ಅಣಶಿ ದಾಂಡೇಲಿ) 22, ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ 15 ರಿಂದ 20ಕ್ಕೂ ಹೆಚ್ಚು ಹುಲಿಗಳಿದ್ದು, ಇದೀಗ ಅದರ ಸಂಖ್ಯೆ 25ರಿಂದ 30ಕ್ಕೆ ಹೆಚ್ಚಾಗಿದೆ ಎಂದು ಅಂದಾಜಿಸಲಾಗಿದೆ. ಕಳೆದ 15 ವರ್ಷದಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ 150ಕ್ಕೂ ಹೆಚ್ಚು ಹುಲಿಗಳ ಸಂಖ್ಯೆ ಹೆಚ್ಚಾಗಿದ್ದರೆ, ಅರಣ್ಯ ಇಲಾಖೆಯ ಸರಂಕ್ಷಣಾ ಕ್ರಮಗಳು ಹುಲಿಗಳ ಸಂಖ್ಯೆ ಹೆಚ್ಚಾಗಲೂ ಕಾರಣವಾಗಿದೆ. ಇದನ್ನೂ ಓದಿ: ಶಿರಡಿಗೆ ಹೋಗಿದ್ದಾಗ ಕೃಷಿ ಅಧಿಕಾರಿ ಮನೆ ಬೀಗ ಮುರಿದು ಕಳ್ಳತನ: 26 ಲಕ್ಷದ ಚಿನ್ನಾಭರಣ ಕದ್ದು ಪರಾರಿ
ಈ ಹಿಂದೆ ಹುಲಿಗಳ ಹಾಗೂ ವನ್ಯಜೀವಿ ಕಳ್ಳ ಬೇಟೆಗಾರರ ಮೇಲೆ ಇಲಾಖೆ ಸಾಕಷ್ಟು ನಿಗಾ ಇಟ್ಟಿತು. ಇದರಿಂದ ಹುಲಿಗಳ ಸಂಖ್ಯೆ ಹೆಚ್ಚಾಗಿದ್ದು, ಪ್ರವಾಸೋದ್ಯಮ ಚಟುವಟಿಕೆ ಕೂಡ ಹೆಚ್ಚಾಗಿದೆ. ದೇಶ ವಿದೇಶದಿಂದ ಪ್ರವಾಸಿಗರನ್ನು ಸೆಳೆಯುತ್ತಿದೆ. ಅದೇ ರೀತಿ ಕಾಡಿನ ಸಂರಕ್ಷಣೆಯಲ್ಲೂ ಹುಲಿಗಳು ಮಹತ್ವದ ಪಾತ್ರ ವಹಿಸಿದೆ. ಇದನ್ನೂ ಓದಿ: ಪೊಲೀಸ್ ಕಮಿಷನರ್‌ಗೆ ದೂರು ನೀಡಿದ ರಮ್ಯಾ – ದರ್ಶನ್ ಅಭಿಮಾನಿಗಳ ವಿರುದ್ಧ FIR
ಹುಲಿಗಳ ಸಂಖ್ಯೆ ಚಾಮರಾಜನಗರ ಜಿಲ್ಲೆಯಲ್ಲಿ ಗಣನೀಯವಾಗಿ ಹೆಚ್ಚಾಗುತ್ತಿರುವುದರಿಂದ ಪ್ರವಾಸಿಗರೂ ಕೂಡ ಸಂತೋಷಗೊಂಡಿದ್ದಾರೆ. ಹುಲಿಗಳ ದರ್ಶನದಿಂದ ಪುಳಕಿತರಾಗಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಹುಲಿಗಳು ಚಾಮರಾಜನಗರ ಜಿಲ್ಲೆಯಲ್ಲಿ ಪೋಷಣೆ ಆಗುತ್ತಿರುವುದರಿಂದ ‘ಹುಲಿಗಳ ನಾಡು’ ಎಂಬ ಪ್ರಖ್ಯಾತಿ ಗಳಿಸಿದೆ. ಇದನ್ನೂ ಓದಿ: ಯೆಮನ್‌ನಲ್ಲಿ ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣ ರದ್ದು; MEA ರಿಯಾಕ್ಷನ್ ಏನು?