ಜೂ.21 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲು ಭಾರತವೇ ಸಿದ್ಧತೆ ನಡೆಸಿದೆ. ಅದರಲ್ಲೂ ಕರ್ನಾಟಕದಲ್ಲಿ ಈ ಬಾರಿ ಮೈಸೂರು, ಬೆಂಗಳೂರು, ಹಂಪಿ ಸೇರಿದಂತೆ ಹಲವು ಪ್ರವಾಸಿ ತಾಣಗಳಲ್ಲೂ ಯೋಗ ದಿನವನ್ನು ಆಚರಿಸಲು ನಿರ್ಧಾರಿಸಲಾಗಿದೆ. ಮೈಸೂರಿನಲ್ಲಿ ನಡೆಯಲಿರುವ ಯೋಗ ದಿನಾಚರಣೆಗೆ ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ಆಗಮಿಸುತ್ತಿದ್ದಾರೆ. ಹಾಗೆಯೇ ದೊಡ್ಡ ಪ್ರಮಾಣದಲ್ಲಿ ವಿಶ್ವಪಾರಂಪರಿಕ ತಾಣ ಹಂಪಿಯಲ್ಲೂ ಬೃಹತ್ ಯೋಗ ದಿನ ಆಚರಣೆಗೆ ಜಿಲ್ಲಾಡಳಿ ಸಿದ್ಧತೆ ನಡೆಸಿದೆ.
ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನದ ಮುಂದಿರುವ ವಿಶಾಲವಾದ ಆವರಣದಲ್ಲಿ ಈ ಯೋಗ ದಿನಾಚರಣೆ ಆಚರಿಸಲು ಸಿದ್ಧತೆ ನಡೆದಿದ್ದು, ಐದು ಸಾವಿರಕ್ಕೂ ಹೆಚ್ಚು ಜನರು ಇದರಲ್ಲಿ ಭಾಗಿಯಾಗಲಿದ್ದಾರೆ ಎಂದು ಅಂದಾಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ನಟ ಅಜಯ್ ರಾವ್ ಮುಖ್ಯ ಆಕರ್ಷಣೆಯಾಗಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪದ್ಮಶ್ರೀ ಮಂಜಮ್ಮ ಜೋಗತಿ ಸೇರಿದಂತೆ ಹಲವು ಗಣ್ಯರನ್ನು ಆಹ್ವಾನಿಸಲಾಗಿದೆ. ಇದನ್ನೂ ಓದಿ: ಸ್ವಯಂ ಪ್ರೇರಿತನಾಗಿ ಡ್ರಗ್ಸ್ ಸೇವಿಸಿಲ್ಲ, ಬೆಂಗಳೂರು ಪೊಲೀಸ್ ಒಳ್ಳೆಯವರು : ಬಾಲಿವುಡ್ ನಟ ಸಿದ್ಧಾಂತ್ ಕಪೂರ್
ಜೂ.21 ರಂದು ಬೆಳಗ್ಗೆ 6 ಗಂಟೆಗೆ ಯೋಗ ಕಾರ್ಯಕ್ರಮಗಳು ಪ್ರಾರಂಭವಾಗಲಿದ್ದು, ನಲವತ್ತು ನಿಮಿಷಗಳ ಕಾಲ ಯೋಗ ಕಾರ್ಯಕ್ರಮ ನಡೆಯುತ್ತವೆ. ಆನಂತರ ಮೈಸೂರಿನಲ್ಲಿ ನಡೆಯುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಯೋಗ ದಿನದ ನೇರ ಪ್ರಸಾರಕ್ಕೂ ವ್ಯವಸ್ಥೆ ಕಲ್ಪಿಸಿದ್ದಾರೆ. ಅಂದು ಶಾಲಾ ಕಾಲೇಜು ವಿದ್ಯಾರ್ಥಿಗಳು, ಹಲವು ಸಂಘ ಸಂಸ್ಥೆಗಳ ಸದಸ್ಯರು, ಸಾರ್ವಜನಿಕರು ಹೀಗೆ ಸಾವಿರಾರು ಜನರು ಇದಕ್ಕೆ ಸಾಕ್ಷಿಯಾಗಲಿದ್ದಾರೆ.