ಹಾಸನ: ಹಿಂದಿನ ಸರ್ಕಾರಗಳ ಪ್ರಮುಖ ಹಗರಣಗಳಾದ 4 ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ, 40% ಕಮಿಷನ್, ಕೊರೊನಾ ಸಂದರ್ಭದಲ್ಲಿ ವೈದ್ಯಕೀಯ ಸಾಮಗ್ರಿಗಳ ಖರೀದಿ, ನೀರಾವರಿ ಕಾಮಗಾರಿಗಳಲ್ಲಿ ಅವ್ಯವಹಾರ, ಪೊಲೀಸ್ ಪಿಎಸ್‍ಐ ನೇಮಕಾತಿ ಹಗರಣದ ತನಿಖೆ ಹಾಗೂ ಬಿಟ್‍ಕಾಯಿನ್‍ಗಳ ಬಗ್ಗೆ ತನಿಖೆಯನ್ನು ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.
Advertisement
ಹಾಸನ (Hassan) ದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಾಮರಾಜನಗರದಲ್ಲಿ ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಉಂಟಾಗಿದ್ದ ದುರಂತ ಪ್ರಕರಣದ ಮರುತನಿಖೆಯನ್ನು ಕೈಗೊಳ್ಳುವುದಾಗಿ ತಿಳಿಸಿದರು. ಅಂದಿನ ಆರೋಗ್ಯ ಸಚಿವ ಡಾ. ಸುಧಾಕರ್ ಅಲ್ಲಿ ಸತ್ತಿರುವುದು ಇಬ್ಬರೇ ಎಂದಿದ್ದರು. ಆದರೆ ಅಲ್ಲಿ ಸತ್ತಿರುವವರ ಸಂಖ್ಯೆ ಹೆಚ್ಚಿತ್ತು ಎಂದರು. ಇದನ್ನೂ ಓದಿ: ಅಕ್ಕಪಕ್ಕ ಕೂರಿಸಿಕೊಂಡು ಡಿಕೆಶಿ-ಅಶ್ವಥ್‍ಗೆ ನಿರ್ಮಲಾನಂದ ಶ್ರೀಗಳು ಕಿವಿಮಾತು
Advertisement
Advertisement
ಗ್ಯಾರಂಟಿ ಯೋಜನೆ (Guarantee Scheme) ಯ ಬಗ್ಗೆ ವಿಪಕ್ಷಗಳ ಟೀಕೆಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿ ಮಾಡಿದ್ದೇವೆ. ನಾವು ಜುಲೈ ಒಂದರಿಂದ ಗೃಹಜ್ಯೋತಿ (Gruhajyoti) ಯೋಜನೆಯನ್ನು ಜಾರಿಗೆ ತರುತ್ತೇವೆ. ಗೃಹಲಕ್ಷ್ಮಿ (Gruhalaxmi Scheme) ಯೋಜನೆಯನ್ನು ಆಗಸ್ಟ್ 15 ರ ನಂತರ ಜಾರಿ ಮಾಡಲಾಗುವುದು. ಈಗಾಗಲೇ ಅರ್ಜಿ ಕರೆದಿದ್ದು, ಅರ್ಜಿಗಳು ಸ್ವೀಕಾರವಾಗುತ್ತಿವೆ ಎಂದು ಹೇಳಿದರು.
Advertisement
ಕೆಂಪೇಗೌಡರು ಜನಪರ ಹಾಗೂ ಜಾತ್ಯಾತೀತ ದೊರೆ: ಕೆಂಪೇಗೌಡರು (Kempegowda) ಜನಪರ ಹಾಗೂ ಜಾತ್ಯಾತೀತ ದೊರೆಯಾಗಿದ್ದರು. ಇವರ ಕಾಲದಲ್ಲಿ ಎಲ್ಲರೂ ಸೌಹಾರ್ದತೆಯಿಂದಿದ್ದರು. ಇಂತಹ ಮಾದರಿ ನಾಡಪ್ರಭುವನ್ನು ಸ್ಮರಿಸುವ ಸಲುವಾಗಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸರ್ಕಾರದ ವತಿಯಿಂದಲೇ ಕೆಂಪೇಗೌಡರ ಜಯಂತಿಯನ್ನು ಆಚರಿಸಲು ಆದೇಶ ನೀಡಲಾಗಿತ್ತು. ಕೆಂಪೇಗೌಡರ ಪ್ರತಿಮೆಯನ್ನೂ ನಮ್ಮ ಅವಧಿಯಲ್ಲಿಯೇ ಸ್ಥಾಪಿಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಕೆಂಪೇಗೌಡರು ಒಬ್ಬ ಪ್ರಗತಿಪರವಾದ, ಜಾತ್ಯಾತೀತವಾದ ದೊರೆಯನ್ನು ಸ್ಮರಿಸುವ ದಿನವಾಗಿದೆ ಎಂದರು.