ಬೆಂಗಳೂರು: ನಗರದಲ್ಲಿ ರಸ್ತೆ ಅಪಘಾತದಿಂದ ಗಂಭೀರ ಗಾಯ ಅಥವಾ ಪ್ರಾಣ ಹಾನಿ ಸಂಭವಿಸಿದ್ರೆ, ಟ್ರಾಫಿಕ್ ಪೊಲೀಸರ ಜೊತೆಗೆ ಲೋಕೋಪಯೋಗಿ ಅಧಿಕಾರಿಗಳು ಮತ್ತು ಆರ್‌ಟಿಒ ಅಧಿಕಾರಿಗಳು ಘಟನಾ ಸ್ಥಳದಲ್ಲಿ ಇನ್ಮುಂದೆ ವೈಜ್ಞಾನಿಕ ತನಿಖೆ ನಡೆಸಲಿದ್ದಾರೆ.
ಸುಪ್ರೀಂ ಕೋರ್ಟ್ ಕಳೆದ ವರ್ಷ ರಚನೆ ಮಾಡಿದ್ದ ರಸ್ತೆ ಸುರಕ್ಷತಾ ಸಮಿತಿಯಲ್ಲಿ, ಲೋಕೋಪಯೋಗಿ ಮತ್ತು ಸಾರಿಗೆ ಅಧಿಕಾರಿಗಳ ಜೊತೆಗೆ ಸಂಚಾರಿ ಪೊಲೀಸರು ಇದ್ದು, ಅಧ್ಯಯನ ವರದಿಯನ್ನು ಮುಖ್ಯ ಕಾರ್ಯದರ್ಶಿಗಳಿಗೆ ನೀಡಬೇಕು.
Advertisement
Advertisement
ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ನೇತೃತ್ವದಲ್ಲಿ ಸಭೆ ಸೇರಿದ್ದ ಮೂರು ಇಲಾಖೆಗಳ ಅಧಿಕಾರಿಗಳು, ಕೆಲ ನಿರ್ಣಯಗಳನ್ನು ಕೈಗೊಂಡಿದ್ದಾರೆ. ಆಕ್ಸಿಡೆಂಟ್ ಸ್ಥಳಕ್ಕೆ ಭೇಟಿ ನೀಡಿ, ಅಪಘಾತಕ್ಕೆ ನಿಖರ ಕಾರಣಗಳ ಬಗ್ಗೆ ತನಿಖೆ ನಡೆಸಬೇಕು ಹಾಗೂ ರಸ್ತೆಗಳು ನ್ಯೂನತೆಯಿದ್ದರೆ ಅದನ್ನು ಸರಿಪಡಿಸಬೇಕು.
Advertisement
ಪ್ರತಿ 15 ದಿನಕ್ಕೊಮ್ಮೆ ಸಭೆ ನಡೆಸುವ ಬಗ್ಗೆ ಸಮಿತಿ ತೀರ್ಮಾನ ಮಾಡಿದೆ. ಅಲ್ಲದೆ ರಸ್ತೆ ಸುರಕ್ಷತಾ ಪ್ರಾಧಿಕಾರ ಜಿಲ್ಲಾ ಮತ್ತು ತಾಲೂಕುವಾರು ಜಂಟಿ ಸಮಿತಿಯನ್ನು ರಚನೆ ಮಾಡಿದ್ದು, ಅಪಘಾತಗಳ ನಿಖರ ವರದಿ ನೀಡಲಿದೆ.