ಚೀನಾ ಉದ್ಯಮಿಯಿಂದ 100 ಕೋಟಿ ರೂ. ಬಂಡವಾಳ ಹೂಡಿಕೆ

Public TV
2 Min Read
Shivanada Patil

ಬೆಂಗಳೂರು: ಚೀನಾದ ಜವಳಿ ಉದ್ಯಮಿ ಪಾಲ್ ಪು ಅವರು ರಾಜ್ಯದಲ್ಲಿ ನೂರು ಕೋಟಿ ರೂ. ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ.

ಇಲ್ಲಿನ ಕರ್ನಾಟಕ ಜವಳಿ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ (Shivananda Patil) ಅವರನ್ನು ಭೇಟಿ ಮಾಡಿ ಚರ್ಚಿಸಿದ ಪಾಲ್ ಪು ಅವರು ಸೆಪ್ಟೆಂಬರ್‌ವರೆಗೆ ಕರ್ನಾಟಕದಲ್ಲೇ ಇದ್ದು, ಯೋಜನಾ ಸ್ಥಳ ಫೈನಲ್ ಮಾಡುವ ಉದ್ದೇಶವಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೂಡಲೇ ಒಳಮೀಸಲಾತಿ ಜಾರಿ ಮಾಡದಿದ್ರೆ ಸರ್ಕಾರದ ವಿರುದ್ಧ ಅಸಹಕಾರ ಚಳವಳಿ: ಎ.ನಾರಾಯಣಸ್ವಾಮಿ

Shivananda Patil

ಉತ್ತರ ಕರ್ನಾಟಕದಲ್ಲಿ (Uttara Kannada) ತಕ್ಷಣಕ್ಕೆ ಅಗತ್ಯ ಮೂಲಸೌಕರ್ಯ ಇರುವ ಭೂಮಿ ಲಭ್ಯವಿದೆ. ವರ್ಷದಲ್ಲಿ 365 ದಿನ ನೀರು, ಸಮರ್ಪಕ ವಿದ್ಯುತ್, ರಾಷ್ಟ್ರೀಯ ಹೆದ್ದಾರಿ, ವಿಮಾನಯಾನ ಸೌಲಭ್ಯ ಇರುವ ಕಡೆ ಅಗತ್ಯ ಪ್ರಮಾಣದ ಭೂಮಿ ಒದಗಿಸಲಾಗುವುದು ಎಂದು ಸಚಿವ ಶಿವಾನಂದ ಪಾಟೀಲ್ ಎಂದಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್‌| ಬೆಂಗಳೂರಿನ ಎಫ್‌ಎಸ್‌ಎಲ್‌ಗೆ 25 ಮೂಳೆ ರವಾನೆ

ಸಚಿವರ ಸಲಹೆಗೆ ಸಮ್ಮತಿಸಿದ ಉದ್ಯಮಿ, ಮೊದಲ ಹಂತದಲ್ಲಿ ಹಳೆಯ ಮೈಸೂರು ಭಾಗದಲ್ಲಿ, ಎರಡನೆಯ ಹಂತದಲ್ಲಿ ಉತ್ತರ ಕರ್ನಾಟಕದಲ್ಲಿ ಉದ್ಯಮ ಸ್ಥಾಪನೆ ಮಾಡಲಾಗುವುದು. ಉತ್ತರ ಕರ್ನಾಟಕ ಭಾಗದಲ್ಲೂ ಉದ್ಯಮ ಸ್ಥಾಪನೆ ನಿಶ್ಚಿತ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಪಾಕ್‌ ಬೆಂಬಲಿಸಿದ ಟರ್ಕಿಗೆ ಶಾಕ್‌ – ಭಾರತೀಯ ಪ್ರವಾಸಿಗರ ಸಂಖ್ಯೆ ಭಾರೀ ಕುಸಿತ

ಮೊದಲ ಹಂತದ ಯೋಜನೆಯಲ್ಲಿ ನೂರು ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲಿದ್ದು, 5,000 ಜನರಿಗೆ ಉದ್ಯೋಗ ನೀಡಲಾಗುವುದು. ತಕ್ಷಣವೇ ಬಂಡವಾಳ ಹೂಡಲು ಸಿದ್ಧರಿದ್ದು, 20 ಎಕ್ರೆ ಭೂಮಿಯ ಅಗತ್ಯವಿದ್ದು, ಕರ್ನಾಟಕ ಸರ್ಕಾರದಿಂದ ಅಗತ್ಯ ಸಹಕಾರ ನಿರೀಕ್ಷೆ ಹೊಂದಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಅನಾವಶ್ಯಕ ಕಾಮೆಂಟ್ ಮಾಡೋರು ಹುಚ್ಚರು, ಸ್ಟಾರ್‌ಗಳು ಸಪೋರ್ಟ್ ಮಾಡ್ತಾರೆ ಅನ್ಸುತ್ತೆ – ಅದಿತಿ ಪ್ರಭುದೇವ ಸ್ಟ್ರೈಟ್ ಹಿಟ್

ಉದ್ಯಮ ಸ್ಥಾಪನೆಗೆ ಸೂಕ್ತವಾದ ಸ್ಥಳಗಳನ್ನು ಪಾಲ್ ಪು ಅವರಿಗೆ ತೋರಿಸಿ, ಅವರಿಗೆ ಸೂಕ್ತ ಎನಿಸಿದ ನಿವೇಶನ ಮಂಜೂರಾತಿಗೆ ಕ್ರಮ ಕೈಗೊಳ್ಳಿ ಎಂದು ಸಭೆಯಲ್ಲಿ ಭಾಗವಹಿಸಿದ್ದ ಜವಳಿ ಇಲಾಖೆ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದ್ದಾರೆ.

ಸಭೆಯಲ್ಲಿ ಭಾಗವಹಿಸಿದ್ದ ಜವಳಿ ಇಲಾಖೆ ಆಯುಕ್ತೆ ಜ್ಯೋತಿ ಹಾಗೂ ಇತರ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು. ನಾಳೆಯಿಂದಲೇ ಉದ್ಯಮ ಸ್ಥಾಪನೆಗೆ ಅಗತ್ಯವಾದ ಭೂಮಿಯನ್ನು ಪಾಲ್ ಪು ಅವರಿಗೆ ತೋರಿಸಿ ಎಂದು ಸೂಚನೆ ನೀಡಿದ್ದಾರೆ.

Share This Article