ಬೆಂಗಳೂರು: ಕಳೆದ ವಾರ ಸುರಿದ ಮಳೆಯಿಂದ `ಬ್ರ್ಯಾಂಡ್ ಬೆಂಗಳೂರು’ ಹೆಸರು ಸಹ ನೀರಿನಲ್ಲಿ ಕೊಚ್ಚಿ ಹೋಗ್ತಿದೆ. ಐಟಿ-ಬಿಟಿ ಸಿಟಿ ಎಂದೇ ಹೆಸರಾದ ಬೆಂಗಳೂರಿಗೆ ಐಟಿ ಕಂಪನಿಗಳು ವಲಸೆ ಎಚ್ಚರಿಕೆ ನೀಡಿ ಶಾಕ್ ಕೊಟ್ಟಿವೆ.
ಹೌದು. ಬೆಂಗಳೂರು ಅಂದ್ರೆ ಐಟಿ-ಬಿಟಿ ಹಬ್ ಎಂದೇ ಖ್ಯಾತಿ. ಆದರೀಗ ಒಂದು ದಿನದ ಮಳೆಗೆ ಬ್ರಾ÷್ಯಂಡ್ ಬೆಂಗಳೂರು ಹೆಸರೇ ಬರ್ಬಾದ್ ಆಗ್ತಿದ್ದು, ಬೆಂಗಳೂರಿನಿಂದ ಐಟಿ ಕಂಪನಿಗಳು ವಲಸೆ ಹೋಗುವ ಎಚ್ಚರಿಕೆ ನೀಡಿವೆ. ಹೊರವರ್ತುಲ ರಸ್ತೆ ಕಂಪನಿಗಳ ಅಸೋಸಿಯೇಷನ್ ಖುದ್ದು ಈ ಬಗ್ಗೆ ಸಿಎಂಗೆ ಪತ್ರ ಬರೆದಿದೆ. ಇದನ್ನೂ ಓದಿ: ಅನಧಿಕೃತ ಖಾಸಗಿ ಶಾಲೆಗಳ ತೆರವಿಗೆ ಕ್ರಮ- ಎಲ್ಲ ಶಾಲೆಗಳಿಗೂ ಈ ನಿಯಮ ಕಡ್ಡಾಯ
Advertisement
Advertisement
ಕಳೆದ ವಾರ ಸತತ ಮರ‍್ನಾಲ್ಕು ದಿನ ಸುರಿದ ಮಹಾಮಳೆಗೆ ಐಟಿ ಕಂಪನಿಗಳು ಭಾರೀ ನಷ್ಟ ಅನುಭವಿಸಿವೆ. ಅದ್ರಲ್ಲೂ ಆಗಸ್ಟ್ 30 ರಂದು ಸುರಿದ ಮಳೆಯಿಂದಾಗಿ 5 ಗಂಟೆ ಹೊರವರ್ತುಲದ ರಸ್ತೆಯಲ್ಲಿ ಟೆಕ್ಕಿಗಳು ಟ್ರಾಫಿಕ್ ಜಾಮ್ ನಲ್ಲಿ ಸಿಕ್ಕಿಹಾಕಿಕೊಂಡಿದ್ರು. ಐಟಿ ಕಂಪನಿಗಳ ಒಳಭಾಗಕ್ಕೆಲ್ಲಾ ನೀರು ನುಗ್ಗಿತ್ತು. ಇವೆಲ್ಲದರ ಪರಿಣಾಮ 255 ಕೋಟಿ ರೂ ನಷ್ಟವಾಗಿದೆ. ಈ ಹೊರವರ್ತುಲ ರಸ್ತೆಯ ಕಳಪೆ ಕಾಮಗಾರಿ ನಿರ್ವಹಣೆ ಮೂಲ ಸೌಕರ್ಯಗಳ ಕೊರತೆ, ಮಳೆ ಬಂದಾಗ ಆಗುವ ಅವಾಂತರದಿಂದ ಕಂಪನಿಗಳಿಗೆ ಭಾರೀ ನಷ್ಟವಾಗಿದೆ. ಇದನ್ನೂ ಓದಿ: ʻಪೊನ್ನಿಯನ್ ಸೆಲ್ವನ್’ ಚಿತ್ರದ ಗಾಯಕ ಬಂಬಾ ಬಕ್ಯಾ ನಿಧನ
Advertisement
Advertisement
ಸಂಚಾರ ದಟ್ಟಣೆ ನಿರ್ವಹಣೆಗೆ ತೆಗೆದುಕೊಂಡ ಕ್ರಮ ಯಾವುದು? ದೀರ್ಘಕಾಲಿಕ, ತಾತ್ಕಾಲಿಕವಾಗಿ ಯಾವ ರೀತಿಯ ಕ್ರಮಗಳು ಆಗಿದೆ ಅಂತಾ ಪ್ರಶ್ನಿಸಿ ಪತ್ರ ಬರೆದಿದ್ದಾರೆ. ಅಲ್ಲದೇ ಐಟಿ ಕಂಪನಿಗಳು ಅನಿವಾರ್ಯವಾಗಿ ಬೇರೆ ಕಡೆ ವಲಸೆ ಹೋಗಬೇಕಾಗುತ್ತದೆ. ಜೊತೆಗೆ ತಮ್ಮ ಹೂಡಿಕೆಗಳನ್ನು ವಾಪಸ್ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿವೆ.
ಈ ಬಗ್ಗೆ ಮಾತನಾಡಿರುವ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ಐಟಿ ಕಂಪನಿಯವರು ಪದೇ-ಪದೇ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರಕ್ಕೆ ಬಹುದೊಡ್ಡ ಆದಾಯ ತರುವ ವಲಯವನ್ನ ನಿರ್ಲಕ್ಷ್ಯ ಮಾಡೋದು ಸರಿಯಲ್ಲ. ನಿಮ್ಮ ದುರಾಸೆ ಸಾಕು. ಕಳಪೆ ಕಾಮಗಾರಿಯಿಂದ ಬೆಂಗಳೂರಿಗೆ ಸಾಕಾಗಿದೆ ಅಂತಾ ಅಸಮಾಧಾನ ಹೊರಹಾಕಿದ್ದಾರೆ. ಐಟಿ ಉದ್ಯೋಗಿಗಳು ಕೂಡ ಸರ್ಕಾರದ ಆಕ್ರೋಶ ಹೊರಹಾಕಿದ್ದಾರೆ ಕೂಡಲೇ ಅವರ ಬೇಡಿಕೆಗಳನ್ನು ಈಡೇರಿಸುವ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.
ಐಟಿ ಕಂಪನಿಗಳ ಬೇಡಿಕೆಗಳೇನು?
- ಕೆ.ಆರ್.ಪುರ ಮತ್ತು ಸಿಲ್ಕ್ ಬೋರ್ಡ್ ಜಂಕ್ಷನ್ ಸುಧಾರಣೆ ಮಾಡಬೇಕು.
- ಬಿಎಂಟಿಸಿಯಿಂದ ವೋಲ್ವೋ ಮತ್ತು ವಿದ್ಯುತ್ ಚಾಲಿತ ಬಸ್ ಸೌಲಭ್ಯ ಕಲ್ಪಿಸಬೇಕು.
- ರಸ್ತೆ ಬದಿಗಳಲ್ಲಿ ಪಾರ್ಕಿಂಗ್ ನಿಷೇಧಿಸಬೇಕು.
- ಪಾದಚಾರಿ ಮಾರ್ಗ ಮತ್ತು ಸೈಕಲ್ ಮಾರ್ಗ ನಿರ್ಮಿಸಬೇಕು.
- ಪ್ರತಿ 500 ಮೀಟರ್‌ಗೊಂದು ಪಾದಚಾರಿ ಮೇಲ್ಸೇತುವೆ ನಿರ್ಮಿಸಬೇಕು.
- ರಸ್ತೆ, ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸಬೇಕು.
- ಖಾಸಗಿ ಕಂಪನಿಗಳ ಬಸ್ ನಿಲ್ಲಿಸಲು ಅವಕಾಶ ಮಾಡಿಕೊಡಬೇಕು.
ಸರ್ಕಾರಕ್ಕೆ ನೀಡಿದ ಸಲಹೆಗಳೇನು?
- ಐಟಿ ಕಾರಿಡಾರ್‌ನಲ್ಲಿ ಮೂಲಸೌಕರ್ಯ ಒದಗಿಸಿ.
- ಟ್ರಾಫಿಕ್ ಸುಧಾರಣೆಗೆ ಅಂಡರ್‌ಪಾಸ್, ಮೇಲ್ಸೇತುವೆ ನಿರ್ಮಾಣ ಮಾಡಬಹುದು.
- ಮೆಟ್ರೋ 2ನೇ ಹಂತ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ.
- ಸಿಗ್ನಲ್ ಫ್ರೀ ಕಾರಿಡಾರ್‌ಗಳನ್ನ ನಿರ್ಮಿಸಬೇಕು.
- ಬೆಳ್ಳಂದೂರು, ವರ್ತೂರು ಕೆರೆ, ಸೋಲ್ಕೆರೆ ಸ್ವಚ್ಛಗೊಳಿಸಬೇಕು.