ನವದೆಹಲಿ: ಅಯೋಧ್ಯೆ (Ayodhya) ರಾಮ ಮಂದಿರದಲ್ಲಿ (Sri Ram Mandir) ಬಾಲ ರಾಮನ ʼಪ್ರಾಣ ಪ್ರತಿಷ್ಠಾʼ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಮಾತ್ರ ಆಹ್ವಾನ ನೀಡಿದ್ದಕ್ಕೆ ಕಾಂಗ್ರೆಸ್ (Congress) ವಿರೋಧ ವ್ಯಕ್ತಪಡಿಸಿದೆ.
ಈ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ (Salman Khurshid) ಆಹ್ವಾನವು ಕೇವಲ ಒಂದು ಪಕ್ಷಕ್ಕೆ ಹೋಗುತ್ತಿದೆಯೇ? ಯಾರಿಗೆ ತಲುಪುತ್ತದೆ ಮತ್ತು ಯಾರಿಗೆ ತಲುಪುವುದಿಲ್ಲ ಎಂಬುದರ ಕುರಿತು ನಾನು ಪ್ರತಿಕ್ರಿಯಿಸಲಾರೆ. ಆದರೆ ದೇವರು ಈಗ ಒಂದು ಪಕ್ಷಕ್ಕೆ ಮಾತ್ರ ಸೀಮಿತವೇ?. ಈ ಕಾರ್ಯಕ್ರಮವನ್ನು ಕೇವಲ ಒಂದು ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಲಾಗುತ್ತಿದೆ. ಇದು ಪಕ್ಷದ ಕಾರ್ಯಕ್ರಮವೋ ಅಥವಾ ಒಬ್ಬರಿಗೆ ಮಾತ್ರ ಸಂಬಂಧಿಸಿದ್ದೋ? ಎಲ್ಲರಿಗೂ ಕಾರ್ಯಕ್ರಮದ ಆಹ್ವಾನ ಕಳುಹಿಸಬೇಕಿತ್ತು. ಆದರೆ ಇಲ್ಲಿಯವರೆಗೆ ಯಾವುದೇ ಘೋಷಣೆ, ಪ್ರಕಟಣೆ ಬಂದಿಲ್ಲ ಎಂದು ತಿಳಿಸಿದ್ದಾರೆ.
#WATCH | Delhi: On invitation to PM Modi for 'Pran Pratishtha' in Ayodhya on January 22, Congress leader Salman Khurshid says, "Is the invitation going to just one party? I cannot comment on who would reach and who would not. But is the God now limited to one party? The… pic.twitter.com/RiSUVAfuBJ
— ANI (@ANI) October 26, 2023
ರಾಮಮಂದಿರಕ್ಕೆ ಚಾಲನೆ ನೀಡುವ ದಿನ ದೇಶಾದ್ಯಂತ 5 ಲಕ್ಷ ದೇವಾಲಯಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಆರ್‌ಎಸ್‌ಎಸ್ (RSS) ಕಚೇರಿಗಳ ಪದಾಧಿಕಾರಿಗಳು ಈ ಕಾರ್ಯಕ್ರಮಗಳ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ ಎಂದು ಟ್ರಸ್ಟ್ ತಿಳಿಸಿದೆ.
ಅಯೋಧ್ಯೆಯಲ್ಲಿರುವ ರಾಮಮಂದಿರ ಲೋಕಾರ್ಪಣೆಗೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ ಅಧಿಕೃತ ಆಹ್ವಾನ ನೀಡಿತ್ತು.
ಈ ಬಗ್ಗೆ ಎಕ್ಸ್ ಪೋಸ್ಟ್‌ನಲ್ಲಿ ಬರೆದುಕೊಂಡಿರುವ ನರೇಂದ್ರ ಮೋದಿ, ಇಂದು ನನಗೆ ಅತ್ಯಂತ ಭಾವನಾತ್ಮಕ ದಿನವಾಗಿದೆ. ಇಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರದ ಮುಖಂಡರು ನನ್ನ ನಿವಾಸಕ್ಕೆ ನನ್ನನ್ನು ಭೇಟಿಯಾಗಲು ಬಂದಿದ್ದರು. ಶ್ರೀರಾಮ ಮಂದಿರದ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಅಯೋಧ್ಯೆಗೆ ಬರುವಂತೆ ಅವರು ನನ್ನನ್ನು ಆಹ್ವಾನಿಸಿದರು. ನಾನು ತುಂಬಾ ಧನ್ಯನಾಗಿದ್ದೇವೆ. ನನ್ನ ಜೀವನದಲ್ಲಿ ಈ ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುವುದು ನನ್ನ ಅದೃಷ್ಟ ಎಂದು ತಿಳಿಸಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]