ಬೆಂಗಳೂರು: ಮೈಸೂರು ಜಿಲ್ಲಾಡಳಿತ ವತಿಯಿಂದ ಹೆಸರಾಂತ ಸಂಶೋಧಕರು, ಸಾಹಿತಿಗಳಾದ ಪ್ರೊ.ಹಂ.ಪ. ನಾಗರಾಜಯ್ಯ (ಹಂಪನಾ) ಅವರನ್ನು ಮೈಸೂರು ದಸರಾ ಮಹೋತ್ಸವ (Dasara Festival) ಉದ್ಘಾಟನೆಗೆ ಗುರುವಾರ ಆಹ್ವಾನಿಸಲಾಯಿತು.
ಹಂಪನಾ ಅವರ ಬೆಂಗಳೂರಿನ ಕ್ರಸೆಂಟ್ ರಸ್ತೆಯ ಅಮೆರಿಕನ್ ಕಾಲೋನಿಯಲ್ಲಿರುವ ಅವರ ನಿವಾಸಕ್ಕೆ ಆಗಮಿಸಿ ಆಹ್ವಾನ ಕೋರಲಾಯಿತು. ಮೈಸೂರು (Mysuru) ಪೇಟ ತೋಡಿಸಿ, ಫಲಫುಷ್ಪದೊಂದಿಗೆ ಆಮಂತ್ರಣ ನೀಡಲಾಯಿತು. ಇದನ್ನೂ ಓದಿ: ಮೈಸೂರು ದಸರಾ | ಅರಮನೆಗೆ ಈ ದಿನಗಳಲ್ಲಿ ಸಾರ್ವಜನಿಕರಿಗೆ ಪ್ರವೇಶವಿಲ್ಲ
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಪಂ ಸಿಇಒ ಕೆ.ಎಂ.ಗಾಯತ್ರಿ, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜ್, ಚಾಮುಂಡಿ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ.ರೂಪಾ ಮತ್ತು ಸ್ವಾಗತ ಸಮಿತಿಯ ಎಲ್ಲ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಈ ಸರ್ಕಾರದಲ್ಲಿ ಸುಳ್ಳು ಹೇಳಿಕೆ, ಸುಳ್ಳು ಪ್ರಚಾರ ನಡೆಯುತ್ತಿದೆ – ಹೆಚ್‌ಡಿಕೆ