ಅಯೋಧ್ಯಯ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ದಕ್ಷಿಣ ಭಾರತದ ಕೆಲವೇ ಕೆಲವರು ನಟ ನಟಿಯರನ್ನು ಆಹ್ವಾನಿಸಿದ್ದು, ಕನ್ನಡದಲ್ಲಿ ರಿಷಬ್ ಶೆಟ್ಟಿ (Rishabh Shetty) ಅವರಿಗೆ ಇಂಥದ್ದೊಂದು ಅವಕಾಶ ಸಿಕ್ಕಿದೆ. ರಾಮಮಂದಿರ ಉದ್ಘಾಟನೆಗೆ ರಿಷಬ್ ಶೆಟ್ಟಿ ಅವರನ್ನು ಆಹ್ವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ರಜನಿಕಾಂತ್, ಮೋಹನ್ ಲಾಲ್, ಚಿರಂಜೀವಿ ಸೇರಿದಂತೆ ಕೆಲವೇ ಕೆಲವು ನಟರಿಗೆ ಇಂಥದ್ದೊಂದು ಆಹ್ವಾನ ಸಿಕ್ಕಿದೆ.
Advertisement
ಕರ್ನಾಟಕದಿಂದ ಸೇವೆ
Advertisement
ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ (Ayodhya Ram Mandir) ಲೋಕಾರ್ಪಣೆಯಾಗುತ್ತಿದ್ದು, ಗ್ರಾಮ ಗ್ರಾಮಗಳಲ್ಲಿ ಕಾರ್ಯಕ್ರಮ ಪೂಜೆ ಪುನಸ್ಕಾರ ಆಯೋಜನೆಗೊಂಡಿದೆ. ಇದರ ಭಾಗವಾಗಿ ಬೆಂಗಳೂರಿನ (Bengaluru) ಬನಶಂಕರಿ ಒಂದನೇ ಹಂತದಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕೆ ಘಂಟಾದಾನ ಸಮರ್ಪಣೆ ಮಾಡಿದ್ದಾರೆ.
Advertisement
Advertisement
2.5 ಟನ್ ತೂಕದ ಘಂಟೆಗಳು, 30 ಸಣ್ಣ ಗಂಟೆಗಳು, 38 ಕೆಜಿ ತೂಕದ ಬೆಳ್ಳಿಯ ಸಾಮಾನುಗಳನ್ನು ಸಮರ್ಪಣೆ ಮಾಡಲಾಗಿದೆ. ಈ ಘಂಟಾದಾನ ಕಾರ್ಯಕ್ರಮದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಭಾಗಿಯಾಗಿದ್ದಾರೆ.
ಘಂಟಾದಾನ ಮತ್ತು ಪೂಜಾ ಸಾಮಾಗ್ರಿಯನ್ನು ಇಂದು ಅಯೋಧ್ಯೆಗೆ ಕೊಂಡೊಯ್ಯಲಿದ್ದಾರೆ. ತಮಿಳುನಾಡಿನ ನಾಮಕ್ಕಲ್‌ನಲ್ಲಿ ಈ ಘಂಟೆಗಳನ್ನು ತಯಾರು ಮಾಡಲಾಗಿದ್ದು, 2.5 ಟನ್ ತೂಕದ ಘಂಟೆಗಳನ್ನು ದೇವಸ್ಥಾನದ ಒಳಗಡೆ ಬಳಸಲಾಗುತ್ತದೆ. ಈ ಘಂಟೆಗಳನ್ನು ಬನಶಂಕರಿಯ ರಾಜೇಂದ್ರ ನಾಯ್ಡು ಎಂಬುವವರು ಅಯೋಧ್ಯೆಯ ರಾಮಮಂದಿರಕ್ಕೆ ಸಮರ್ಪಣೆ ಮಾಡಿದ್ದಾರೆ.