ನವದೆಹಲಿ: ಕಾನೂನಿನ ಯಾವ ನಿಬಂಧನೆ ಅಡಿಯಲ್ಲಿ ನನ್ನ ಕಕ್ಷಿದಾರರಿಗೆ ನೋಟಿಸ್ ನೀಡಿದ್ದೀರಿ ಎಂದು ಚಿದಂಬರಂ ಪರ ವಕೀಲರು ಸಿಬಿಐ ಅಧಿಕಾರಿಗಳನ್ನು ಪ್ರಶ್ನೆ ಮಾಡಿದ್ದಾರೆ.
ಐಎನ್‍ಎಕ್ಸ್ ಮೀಡಿಯಾ ಮತ್ತು ಏರ್‍ಸೆಲ್ ಮ್ಯಾಕ್ಸಿಸ್ ಪ್ರಕರಣದಲ್ಲಿ ಚಿದಂಬರಂ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕೃತಗೊಳಿಸಿದ ಬೆನ್ನಲ್ಲೇ ಸಿಬಿಐ ಅಧಿಕಾರಿಗಳು ಬಂಧನಕ್ಕಾಗಿ ಅವರ ನಿವಾಸಕ್ಕೆ ತೆರಳಿದ್ದರು. ಈ ವೇಳೆ ಅವರು ಮನೆಯಲ್ಲಿ ಇಲ್ಲದ ಕಾರಣ 2 ಗಂಟೆಯ ಒಳಗಡೆ ವಿಚಾರಣೆಗೆ ಹಾಜರಾಗಿ ಎಂದು ಸಿಬಿಐ ಅಧಿಕಾರಿಗಳು ಬಾಗಿಲಿಗೆ ನೋಟಿಸ್ ಅಂಟಿಸಿದ್ದಾರೆ.
Advertisement
ನೋಟಿಸಿನಲ್ಲಿ 2 ಗಂಟೆಯ ಒಳಗಡೆ ವಿಚಾರಣೆಗೆ ಹಾಜರಾಗಬೇಕೆಂದು ತಿಳಿಸಿದ್ದನ್ನು ಪ್ರಶ್ನೆ ಮಾಡಿರುವ ಚಿದಂಬರಂ ಪರ ವಕೀಲ ಅರ್ಶದೀಪ್ ಸಿಂಗ್ ಖುರಾನ, ನನ್ನ ಕಕ್ಷಿದಾರರು 2 ಗಂಟೆಯ ಒಳಗಡೆ ವಿಚಾರಣೆ ಹಾಜರಾಗಬೇಕೆಂದು ನೋಟಿಸಿನಲ್ಲಿ ಉಲ್ಲೇಖಿಸಿದ್ದೀರಿ. 2 ಗಂಟೆಯ ಒಳಗಡೆ ವಿಚಾರಣೆಗೆ ಹಾಜರಾಗಬೇಕೆಂದು ಕಾನೂನಿನ ಯಾವ ನಿಬಂಧನೆ ಅಡಿ ಇದೆ ಎಂದು ಪ್ರಶ್ನೆ ಮಾಡಿದ್ದಾರೆ.
Advertisement
Arshdeep Singh Khurana, P Chidambaram's lawyer, writes to CBI after CBI had put up a notice outside Chidambaram's residence: I am instructed to state that your notice fails to mention the provision of law under which my client has been issued a notice to appear within 2 hours. pic.twitter.com/xjUsGDGH6K
— ANI (@ANI) August 20, 2019
Advertisement
ಚಿದಂಬರಂ ಅವರು ಈ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಬೆಳಗ್ಗೆ 10.30ಕ್ಕೆ ತುರ್ತು ಅರ್ಜಿ ನಡೆಯಲಿದೆ. ಹೀಗಾಗಿ ಈ ಅರ್ಜಿ ವಿಚಾರಣೆ ನಡೆಯುವರೆಗೂ ನನ್ನ ಕಕ್ಷಿದಾರರ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳಬೇಡಿ ಎಂದು ವಕೀಲರು ಮನವಿ ಮಾಡಿದ್ದಾರೆ.
Advertisement
ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಜಾಮೀನು ವಜಾಗೊಂಡ ಬೆನ್ನಲ್ಲೇ ಚಿದಂಬರಂ ನಾಪತ್ತೆಯಾಗಿದ್ದು ಫೋನ್ ನಂಬರ್ ಸ್ವಿಚ್ಛ್ ಆಫ್ ಆಗಿದೆ.
Arshdeep Singh Khurana: He has been permitted by SC to mention the urgent Special Leave Petition against the order before Court at 10:30 am today. I, therefore, request you not to take any coercive action against my client till then&await the hearing at 10:30 am.
— ANI (@ANI) August 20, 2019
ಏನಿದು ಪ್ರಕರಣ?
ಚಿದಂಬರಂ ಅವರು 2007ರಲ್ಲಿ ಕೇಂದ್ರ ಹಣಕಾಸು ಸಚಿವರಾಗಿದ್ದಾಗ ಐಎನ್‍ಎಕ್ಸ್ ಮೀಡಿಯಾ ಸಂಸ್ಥೆಗೆ ವಿದೇಶ ಬಂಡವಾಳ ಹೂಡಿಕೆ ಪ್ರೋತ್ಸಾಹಕಾ ಮಂಡಳಿ (ಎಫ್‍ಐಪಿಬಿ)ಯ ಅನುಮೋದನೆ ಸಿಕ್ಕಿತ್ತು. ಈ ಮೂಲಕ ಐಎನ್‍ಎಕ್ಸ್ ಮೀಡಿಯಾ ಸಂಸ್ಥೆಗೆ 305 ಕೋಟಿ ರೂ. ಮೊತ್ತದಷ್ಟು ವಿದೇಶಿ ಬಂಡವಾಳ ಹೂಡಿಕೆ ಲಭ್ಯವಾಗಿತ್ತು. ಆದರೆ ಪುತ್ರ ಕಾರ್ತಿ ಚಿದಂಬರಂ ಶಿಫಾರಸಿನ ಮೇಲೆ ಈ ಅನುಮೋದನೆಯನ್ನು ಚಿದಂಬರಂ ದೊರಕಿಸಿಕೊಟ್ಟಿದ್ದರು ಎಂಬ ಆರೋಪ ಕೇಳಿ ಬಂದಿತ್ತು.
Delhi: Central Bureau of Investigation (CBI) has put up a notice outside the residence of P Chidambaram to appear before them in the next two hours. Earlier today, Delhi High Court had dismissed his both anticipatory bail pleas in connection with INX Media case. pic.twitter.com/IeEI5IkvGF
— ANI (@ANI) August 20, 2019
ಈ ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಕಂದಾಯ ಸಚಿವಾಲಯ ವಿಚಾರಣೆಗೆ ಆದೇಶಿಸಿತ್ತು. ಈ ಸಂದರ್ಭದಲ್ಲಿ ಪಿ ಚಿದಂಬರಂ ಅವರ ಮಗ ಕಾರ್ತಿ ಚಿದಂಬರಂ ಅವರು ಮಧ್ಯಸ್ಥಿಕೆ ವಹಿಸಿ, ತಂದೆಯ ಪ್ರಭಾವವನ್ನು ಬಳಸಿಕೊಂಡು ವಿಚಾರಣೆಯನ್ನು ತಪ್ಪಿಸಲು ತಮ್ಮ ಕಂಪನಿಯ ಮೂಲಕ 10 ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಸಿಬಿಐ, 2017ರಲ್ಲಿ ಐಎನ್‍ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಚಿದಂಬರಂ ಮತ್ತಿತರರ ವಿರುದ್ಧ ಎಫ್‍ಐಆರ್ ದಾಖಲಿಸಿತ್ತು.